Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಬುಧಾಬಿಯಲ್ಲಿ SKSSF ಕರ್ನಾಟಕ ಸಮಿತಿ...

ಅಬುಧಾಬಿಯಲ್ಲಿ SKSSF ಕರ್ನಾಟಕ ಸಮಿತಿ ವತಿಯಿಂದ 5ನೇ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ19 July 2026 9:01 AM IST
share
ಅಬುಧಾಬಿಯಲ್ಲಿ SKSSF ಕರ್ನಾಟಕ ಸಮಿತಿ ವತಿಯಿಂದ 5ನೇ ರಕ್ತದಾನ ಶಿಬಿರ

ಅಬುಧಾಬಿ (ಯುಎಇ): ಎಸ್ಕೆಎಸೆಸ್ಸೆಫ್ ಅಬುಧಾಬಿ ಕರ್ನಾಟಕ ಘಟಕದ ಆಶ್ರಯದಲ್ಲಿ ಐದನೇ ಬಾರಿಗೆ ಆಯೋಜಿಸಲಾದ ಸಾರ್ವಜನಿಕ ರಕ್ತದಾನ ಶಿಬಿರ ಮೇ.17ರಂದು ಅಬುಧಾಬಿಯ ಖಾಲಿದಿಯ್ಯದಲ್ಲಿರುವ ಸೇಹಾ ಬ್ಲಡ್ ಬ್ಯಾಂಕ್‌ನಲ್ಲಿ ನಡೆಯಿತು.

ರಕ್ತದಾನ ಶಿಬಿರದ ಮುಖ್ಯ ಸಂಯೋಜಕ ಮುನೀರ್ ಬೆಳ್ಳಾರೆ ಅವರ ಅನುಪಸ್ಥಿತಿಯಲ್ಲಿ ಸಹ ಸಂಯೋಜಕ ಬಶೀರ್ ಕೊಡ್ಲಿಪೇಟೆ ಅವರ ನೇತೃತ್ವದಲ್ಲಿ ಶಿಬಿರ ನಡೆಯಿತು. ಶಂಸುಲ್ ಉಲಮಾರ ಹೆಸರಿನಲ್ಲಿ ಫಾತಿಹಾ ಪಠಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಎಸ್ಕೆಎಸೆಸ್ಸೆಫ್ ಅಬುಧಾಬಿ ಕರ್ನಾಟಕ ಸಮಿತಿಯ ಹಿರಿಯ ನಾಯಕ ಶಾಫಿ ಹಾಜಿ ಪೆರುವಾಯಿ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಅಧಿಕೃತ ಚಾಲನೆ ನೀಡಿದರು.

ಸುಮಾರು 56 ಮಂದಿ ರಕ್ತದಾನಕ್ಕೆ ನೋಂದಾಯಿಸಿ, ನಾಲ್ಕು ಗಂಟೆಗಳ ಕಾಲ ನಡೆದ ಶಿಬಿರದಲ್ಲಿ ಅನೇಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಅನಸ್ ಕರಾಯ ಅವರು ಸಿಂಗಲ್ ಡೋನರ್ ಪ್ಲೇಟ್‌ಲೆಟ್ ದಾನ ಮಾಡಿ ವಿಶೇಷ ಗಮನ ಸೆಳೆದರು.

ಸಮಾಜಮುಖಿ ಕಾರ್ಯಗಳಿಗೆ ಮೆಚ್ಚುಗೆ :

ಸಮಾರೋಪ ಸಮಾರಂಭವು SKSSF ಅಬುಧಾಬಿ ಕರ್ನಾಟಕ ಸಮಿತಿ ಅಧ್ಯಕ್ಷರಾದ ಅಬೂಬಕ್ಕರ್ ಮುಂಡೋಳೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿ ಹಾಫಿಝ್ ಝೈನ್ ಸಖಾಫಿ ಉಳ್ಳಾಲ ಸ್ವಾಗತಿಸಿದರು. ಸಂಘಟನಾ ಕೋಶಾಧಿಕಾರಿ, ಶಿಬಿರ ಸಹ ಸಂಯೋಜಕರಾದ ಬಶೀರ್ ಕೊಡ್ಲಿಪೇಟೆ ಶಿಬಿರದ ಮಹತ್ವ ವಿವರಿಸಿ, SKSSFನ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.

ಅಧ್ಯಕ್ಷೀಯ ಭಾಷಣದಲ್ಲಿ ಅಬೂಬಕ್ಕರ್ ಮುಂಡೋಳೆ ಅವರು ರಕ್ತದಾನದ ಮಹತ್ವವನ್ನು ವಿವರಿಸಿ, ಯುಎಇಯಲ್ಲಿರುವ ಕನ್ನಡಿಗರ ಸಮಾಜಮುಖಿ ಸೇವೆಗಳನ್ನು ಪ್ರಶಂಸಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗಿನ್ನೆಸ್ ದಾಖಲೆ ಪುರಸ್ಕೃತ ಸಮಾಜಸೇವಕ ಡಾ.ಅಬ್ದುಲ್ ಆರಿಸ್ ಪುತ್ತಿಲ್ ಮಾತನಾಡಿ, ಒಂದು ಜೀವ ಉಳಿಸುವ ಕಾರ್ಯಕ್ಕಿಂತ ಶ್ರೇಷ್ಠವಾದ ಸೇವೆ ಮತ್ತೊಂದಿಲ್ಲ. SKSSF ಆಯೋಜಿಸಿರುವ ಈ ರಕ್ತದಾನ ಶಿಬಿರ ಶ್ಲಾಘನೀಯವಾಗಿದ್ದು, ಮುಂದಿನ ಸಮಾಜಮುಖಿ ಕಾರ್ಯಗಳಿಗೂ ನನ್ನ ಸಂಪೂರ್ಣ ಸಹಕಾರವಿರಲಿದೆ ಎಂದು ಹೇಳಿದರು.

SKSSFನ ಶಾರ್ಜಾ ಕರ್ನಾಟಕ ಸಮಿತಿ ಅಧ್ಯಕ್ಷ ಶಂಸುದ್ದೀನ್ ಹಾಜಿ ಸೂರಲ್ಪಾಡಿ, ಉಪಾಧ್ಯಕ್ಷ ರಫೀಕ್ ಸುರತ್ಕಲ್, ಯಹ್ಯಾ ಕೊಡ್ಲಿಪೇಟೆ, ಅಲ್ ಸಾಹಿಬ್ ಮಾಸ್ತಿಕುಂಡ್, ಇಬ್ರಾಹಿಂ ಆತೂರು ಸೇರಿದಂತೆ ಹಲವರು ಶಿಬಿರವನ್ನು ಪ್ರಶಂಸಿಸಿ ಸಂಘಟನೆಯ ಸೇವಾ ಚಟುವಟಿಕೆಗಳಿಗೆ ಶುಭ ಹಾರೈಸಿದರು.

ಈ ವೇಳೆ ಸಂಘಟನಾ ನೇತಾರರಾದ ಹಸನ್ ದಾರಿಮಿ ಕಬಕ, ಹಾರಿಸ್ ಮಖ್ದೂಮಿ ಕುಕ್ಕಾಜೆ, ಅಬೂಬಕ್ಕರ್ ಸಕಲೇಶಪುರ, ರಕ್ತದಾನ ಶಿಬಿರದ ಉಸ್ತುವಾರಿ ಹಂಝ ನಾಳ, ಅಬುಧಾಬಿ SKSSF ಸಂಘಟನಾ ಕಾರ್ಯದರ್ಶಿ ತ್ವಾಹ ಉಪ್ಪಿನಂಗಡಿ, ಅನಸ್ ಕರಾಯ, ಹಿದಾಯತ್ತ್ ರಹ್ಮಾನ್ ಆತೂರು, ಶಾಫಿ ಕಿನ್ಯ, ಸಫ್ವಾನ್ ಕೊಡಾಜೆ, ಸಾದಿಕ್ ಬೆಳ್ಳಾರೆ, ಉಮರ್ ಪಾಂಡವರಕಲ್ಲು, ಹಫೀಲ್ ಆತೂರು ಭಾಗವಹಿಸಿ ಕಾರ್ಯಕ್ರಮವು ಯಶಸ್ವಿಯಾಗಲು ಸಹಕರಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಹಸನ್ ದಾರಿಮಿ ಕಬಕ ದುಆ ನೆರವೇರಿಸಿದರು. SKSSF ಅಬುಧಾಬಿ ಕರ್ನಾಟಕ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಫಿಝ್ ಝೈನ್ ಸಖಾಫಿ ಉಳ್ಳಾಲ ಕಾರ್ಯಕ್ರಮ ನಿರೂಪಿಸಿ, ಶಿಬಿರದ ಉಸ್ತುವಾರಿ ಹಂಝ ನಾಳ ವಂದಿಸಿದರು.

ರಕ್ತದಾನ ಪ್ರಕ್ರಿಯೆಯಲ್ಲಿ ಸೇವಾ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಸಂಪೂರ್ಣ ಸಹಕಾರ ನೀಡಿದರು.

Tags

Abu DhabiSKSSF KarnatakaBlood Donation CampSKSSF
share
ವಾರ್ತಾಭಾರತಿ
ವಾರ್ತಾಭಾರತಿ
Next Story
X