Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕರಾವಳಿಯ ಅಭಿವೃದ್ಧಿಗೆ ಕೋಮುವಾದ ಮಾರಕ:...

ಕರಾವಳಿಯ ಅಭಿವೃದ್ಧಿಗೆ ಕೋಮುವಾದ ಮಾರಕ: ಡಾ.ರೊನಾಲ್ಡ್ ಕೊಲಾಸೊ

ವಾರ್ತಾಭಾರತಿವಾರ್ತಾಭಾರತಿ14 Aug 2026 3:44 PM IST
share
ಕರಾವಳಿಯ ಅಭಿವೃದ್ಧಿಗೆ ಕೋಮುವಾದ ಮಾರಕ: ಡಾ.ರೊನಾಲ್ಡ್ ಕೊಲಾಸೊ
ದುಬೈ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಕರಾವಳಿ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆ ಕಾರ್ಯಕ್ರಮ

ದುಬೈ: ಕರ್ನಾಟಕದ ಕರಾವಳಿ ಭಾಗದ ಅಭಿವೃದ್ಧಿಗೆ ಕೋಮುವಾದ ಇಂದು ಮಾರಕವಾಗಿ ಪರಿಣಮಿಸಿದ್ದು, ಇದರಿಂದಾಗಿ ಇಲ್ಲಿ ಹೂಡಿಕೆದಾರರು ಬಂಡವಾಳ ಹೂಡಲು ಹಿಂಜರಿಯುತ್ತಿದ್ದಾರೆ ಎಂದು ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಕಳವಳ ವ್ಯಕ್ತಪಡಿಸಿದ್ದಾರೆ.

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಗುರುವಾರ ರಾತ್ರಿ ಬರ್-ದುಬೈಯ ಫಾರ್ಚೂನ್ ಆಟ್ರಿಯಂ ಹೋಟೆಲ್ ನಲ್ಲಿ ಆಯೋಜಿಸಿದ್ದ ಕರಾವಳಿ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕೋಮುವಾದದ ಪರಿಣಾಮ ಕರಾವಳಿ ಭಾಗದಲ್ಲಿ ಕೈಗಾರಿಕೀಕರಣ, ಪ್ರವಾಸೋದ್ಯಮ ಹಾಗೂ ವಾಣಿಜ್ಯ ಚಟುವಟಿಕೆಗಳ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಅವರು ಅಭಿಪ್ರಾಯಿಸಿದರು.

ಕರಾವಳಿಯಲ್ಲಿ ಪ್ರವಾಸೋದ್ಯಮ ಹಾಗೂ ಇನ್ನಿತರ ಉದ್ಯಮಗಳನ್ನು ಆರಂಭಿಸಲು ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳು ಹೇರಳವಾಗಿದ್ದರೂ, ಹೂಡಿಕೆದಾರರು ಬಂಡವಾಳ ಹೂಡಲು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ಇಲ್ಲಿ ಹೆಡೆ ಎತ್ತಿ ನಿಂತಿರುವ ಕೋಮುವಾದ. ಜಾತಿ, ಧರ್ಮದ ಹೆಸರಿನಲ್ಲಿ ಇಲ್ಲಿ ದಿನನಿತ್ಯ ನಡೆಯುತ್ತಿರುವ ಕೋಮವಾದದ ಹಿಂಸೆಗೆ ಹೆದರಿ ಇಲ್ಲಿ ಉದ್ಯಮ ನಡೆಸಲು ಹೂಡಿಕೆದಾರರು ಮುಂದಾಗುತ್ತಿಲ್ಲ ಎಂದು ಡಾ.ರೊನಾಲ್ಡ್ ಕೊಲಾಸೊ ಆತಂಕ ವ್ಯಕ್ತಪಡಿಸಿದರು.

ಕೆಲವು ರಾಜಕೀಯ ಪಕ್ಷಗಳು ಕೋಮುವಾದವನ್ನು ಮುಂದಿಟ್ಟುಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದು, ಇದು ಇಡೀ ಕರಾವಳಿಯ ಅಭಿವೃದ್ಧಿಗೆ ಮಾರಕವಾಗಿ ಪರಿಣಮಿಸಿದೆ. ಚರ್ಚ್ ದಾಳಿಯಂಥ ಕೋಮುವಾದದ ಪ್ರಕರಣಗಳಿಂದ ಇಲ್ಲಿ ಉದ್ಯಮಿಗಳು ಉದ್ಯಮಕ್ಕೆ ಬಂಡವಾಳ ಹೂಡಲು ಹೆದರುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸ್ಥಳೀಯವಾಗಿ ಉದ್ಯೋಗವು ಸೃಷ್ಟಿಯಾಗುತ್ತಿಲ್ಲ. ನಮ್ಮ ಮುಂದಿನ ಮಕ್ಕಳ ಭವಿಷ್ಯವೂ ಇದರಿಂದ ಆತಂಕದಲ್ಲಿದೆ. ಈ ಬಗ್ಗೆ ನಾವು ಯೋಚಿಸುವಂಥ ದಿನ ಎಂದು ಅವರು ಹೇಳಿದರು.

ರಾಜಕೀಯ, ಕೋಮುವಾದವನ್ನು ಬದಿಗಿಟ್ಟು, ಜಾತಿ–ಧರ್ಮದ ಭೇದಭಾವಗಳನ್ನು ಮರೆತು ನಾವೆಲ್ಲರೂ ಒಂದಾಗಬೇಕು. ಪರಸ್ಪರ ಪ್ರೀತಿ, ಸೌಹಾರ್ದ ಹಾಗೂ ಸಹಬಾಳ್ವೆಯ ಮೂಲಕ ಕರಾವಳಿಯ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸಬೇಕು. ಇದರಿಂದ ಉದ್ಯಮಗಳು ಹಾಗೂ ಹೂಡಿಕೆಗಳು ಕರಾವಳಿಯತ್ತ ಹರಿದುಬರುವಂತೆ ಮಾಡಬೇಕು. ಅಭಿವೃದ್ಧಿಗೆ ಆದ್ಯತೆ ನೀಡುವುದರಿಂದ ನಮ್ಮ ಭವಿಷ್ಯದ ಪೀಳಿಗೆಗೂ ಉತ್ತಮ ಅವಕಾಶಗಳು ದೊರೆಯಲಿವೆ ಎಂದು ಡಾ.ರೊನಾಲ್ಡ್ ಕೊಲಾಸೊ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಮಾತನಾಡಿ, ಕರಾವಳಿಯ ನೆಲ-ಜಲ ಉಳಿಸಿ, ಉದ್ದಿಮೆ ಬೆಳೆಸಿ, ಪ್ರಗತಿ ಸಾದಿಸಿ, ಬಡತನವನ್ನು ನಿವಾರಿಸುವುದೇ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಮೂಲ ಉದ್ದೇಶ ಎಂದರು.

ಕರಾವಳಿಯ ಅಭಿವೃದ್ಧಿಗೆ ಬೇಕಾದ ಪರಿಸರ ಸ್ನೇಹಿ ಉದ್ಯಮಕ್ಕೆ ನಾವು ಸದಾ ಬೆಂಬಲ ನೀಡುತ್ತಾ ಬಂದಿದ್ದೇವೆ ಎಂದ ಅವರು, ಎಲ್ಲರೂ ತಮ್ಮ ತಮ್ಮ ಧರ್ಮವನ್ನು ಪಾಲಿಸುವ ಮೂಲಕ, ಇತರ ಧರ್ಮಗಳನ್ನು ಗೌರವಿಸಿದರೆ ನಮ್ಮಲ್ಲಿ ಸೌಹಾರ್ದದ ವಾತಾವರಣ ನಿರ್ಮಾವಾಗುತ್ತದೆ. ಇದು ಕರಾವಳಿಯನ್ನು ರಾಜ್ಯದಲ್ಲಿಯೇ ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯಲು ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಡಾ.ರೊನಾಲ್ಡ್ ಕೊಲಾಸೊ ಹಾಗೂ ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ ಡಾ.ಬಿ.ಆರ್.ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಯುಎಇಯ ಹಿಸ್ನಾ ಇಂಟರ್ನ್ಯಾಶನಲ್ ವ್ಯವಸ್ಥಾಪಕ ನಿರ್ದೇಶಕ ರೊನಾಲ್ಡ್ ಪಿಂಟೊ, ವಿಶ್ವ ದೇವಾಡಿಗ ಮಹಾಮಂಡಲ ಅಧ್ಯಕ್ಷ ಧರ್ಮಪಾಲ್ ದೇವಾಡಿಗ, ಉದ್ಯಮಿ ಡಾ.ಡೇವಿಡ್ ಫ್ರಾಂಕ್ ಫೆರ್ನಾಂಡಿಸ್, ಯುಎಇಎಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ(BCCI) ಅಧ್ಯಕ್ಷ ಹಿದಾಯತ್ ಅಡ್ಡೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಯುಎಇ ಸಂಚಾಲಕ ಸರ್ವೋತ್ತಮ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Tags

CommunalismDr. Ronald ColacoDubai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X