Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಶೈಕ್ಷಣಿಕ ಕ್ಷೇತ್ರದಲ್ಲಿ ‌DKSC ಪಾತ್ರ...

ಶೈಕ್ಷಣಿಕ ಕ್ಷೇತ್ರದಲ್ಲಿ ‌DKSC ಪಾತ್ರ ಹಿರಿದು: ದಮ್ಮಾಮ್ ನಲ್ಲಿ ಸ್ಪೀಕರ್ ಯು.ಟಿ. ಖಾದರ್

ವಾರ್ತಾಭಾರತಿವಾರ್ತಾಭಾರತಿ28 Oct 2023 10:34 AM IST
share
ಶೈಕ್ಷಣಿಕ ಕ್ಷೇತ್ರದಲ್ಲಿ ‌DKSC ಪಾತ್ರ ಹಿರಿದು: ದಮ್ಮಾಮ್ ನಲ್ಲಿ ಸ್ಪೀಕರ್ ಯು.ಟಿ. ಖಾದರ್

ದಮ್ಮಾಮ್: ʼಸಮುದಾಯಕ್ಕಾಗಿ ಲೌಕಿಕ ಮತ್ತು ಧಾರ್ಮಿಕವಾಗಿ ಶೈಕ್ಷಣಿಕ ರಂಗದಲ್ಲಿ ಮುಂಚೂಣಿಯಲ್ಲಿರುವ ಡಿಕೆಎಸ್ಸಿಯ (DKSC) ಪಾತ್ರ ಅತ್ಯಂತ ಹಿರಿದಾಗಿದ್ದು ಪ್ರಶಂಸನೀಯವಾಗಿದೆʼ ಎಂದು ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ.

ಅವರು, ದಮ್ಮಾಮ್ ನಲ್ಲಿ ಡಿಕೆಎಸ್ಸಿ ಏರ್ಪಡಿಸಿದ್ದ ʼಫ್ಯಾಮಿಲಿ ಮುಲಾಖಾತ್ʼ ಸಭಾ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಸುರಿಸುವ ಮೂಲಕ ಉದ್ಘಾಟಿಸಿ, ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ರವರು ಡಿಕೆಯಸ್ಸಿ ವಿಷನ್ 30 ಗೆ ಬಟನ್ ಒತ್ತುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.

ಬಳಿಕ ಮಾನಾಡಿದ ಅವರು, ʼಡಿಕೆಯಸ್ಸಿ ಹಾಗೂ ಇಹ್ಸಾನ್ ಸಂಸ್ಥೆಯ ಕಾರ್ಯನಿರ್ವಹಣೆಯು ಶ್ಲಾಘನೀಯ ಇದಕ್ಕೆ ಸಹಕರಿಸುವುದು ನಮ್ಮೆಲ್ಲರ ಕರ್ತವ್ಯ ವಾಗಿದೆʼ ಎಂದು ನುಡಿದರು.

ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ಅಧೀನದ ಮರ್ಕಝ್ ತಅಲೀಮಿಲ್ ಇಹ್ಸಾನ್ ಉಡಪಿ ಜಿಲ್ಲೆಯ ಮೂಳೂರಿನಲ್ಲಿ ಕಾರ್ಯಾಚರಿಸುತ್ತಿದ್ದು ಎರಡು ಸಾವಿರದ ಐನೂರಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದರ ಭಾಗವಾಗಿ ಅಕ್ಟೋಬರ್ 26 ಗುರುವಾರ ದಮ್ಮಾಂನಲ್ಲಿ ಫ್ಯಾಮಿಲಿ ಮುಲಾಖಾತ್ ಏರ್ಪಡಿಸಲಾಗಿತ್ತು.

ಮರ್ಕಝ್ ತಅಲಿಮಿಲ್ ಇಹ್ಸಾನ್ ಮಾಜಿ ಉಪಾಧ್ಯಕ್ಷ ಅಬೂ ಸುಫ್ಯಾನ್ ಮದನಿ ದುಆಗೈದರು. ಜಾಮಿಅ ಮರ್ಕಝ್ ವೈಸ್ ಚಾನ್ಸ್ ಲರ್ ಅಡ್ವೊಕೇಟ್ ಡಾ!! ಹುಸೈನ್ ಸಖಾಫಿ ಚುಳ್ಳಿಕ್ಕೋಡ್ ಪ್ರಾಸ್ತಾವಿಕ ಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಅಬ್ದುನ್ನಾಸಿರ್ ಲಕ್ಕಿಸ್ಟಾರ್, ಹಿರಿಯ ಸಾಹಿತಿ ಬಿ.ಎಂ. ಹನೀಫ್ ಬೆಂಗಳೂರು, ಇಹ್ಸಾನ್ ಕಾಲೇಜ್ ಪ್ರಾಂಶುಪಾಲ ಹಬೀಬುರ್ರಹ್ಮಾನ್, ಮರ್ಕಝ್ ಸಮಿತಿ ಉಪಾಧ್ಯಕ್ಷ ಹಾಜಿ ಇಸ್ಮಾಯೀಲ್ ಕಿನ್ಯ ಆಗಮಿಸಿದ್ದರು.

ಡಿಕೆಯಸ್ಸಿ ಬೆನ್ನೆಲುಬು, ಹಿತೈಷಿ ಹಾಜಿ ಝಕರಿಯ್ಯಾ ಅಲ್ ಮುಝೈನ್ ಡಿಕೆಯಸ್ಸಿ ವಿಷನ್ 30 ಬಗ್ಗೆ ವಿವರಿಸಿದರು.

ಡಿಕೆಯಸ್ಸಿ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಸೀದಿ ಹಾಜಿ ಬಹ್ರೈನ್, ಕೋಶಾಧಿಕಾರಿ ದಾವೂದು ಕಜೆಮಾರ್, ದಮ್ಮಾಂ ವಲಯ ಅಧ್ಯಕ್ಷ ಇಂಜಿನಿಯರ್ ಅಬ್ದುರ್ರಹ್ಮಾನ್ ಪಾಣಾಜೆ ,ಶರೀಫ್ ಜೋಕಟ್ಟೆ ಅಲ್ ಮುಝೈನ್, ನಝೀರ್ ಅಲ್ ಫಲಾಹ್, ಅಬ್ದುಸ್ಸಲಾಂ ರಕ್ವಾನೀ, ಇಬ್ರಾಹೀಂ ಕಣ್ಣಂಗಾರ್ ಮಕ್ಕಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಫ್ ಸ್ಪರ್ಧೆ ಮತ್ತು ಮಕ್ಕಳ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ʼಫ್ಯಾಮಿಲಿ ಮುಲಾಖಾತ್ʼ ಅಧ್ಯಕ್ಷ ಕೆ.ಎಚ್.ರಫೀಖ್ ಸೂರಿಂಜೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಇಖ್ಬಾಲ್ ಮಲ್ಲೂರು ಸ್ವಾಗತಿಸಿದರು. ಸಾಹಿಲ್ ಮೂಡಬಿದ್ರೆ ಕಾರ್ಯಕ್ರಮ ನಿರೂಪಿಸಿದರು. ಅಬ್ದುಲ್ ಹಮೀದ್ ಉಳ್ಳಾಲ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X