Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅನಿವಾಸಿ ಕನ್ನಡಿಗರಿಗೆ ಕೊಟ್ಟ 'ಪ್ರತ್ಯೇಕ...

ಅನಿವಾಸಿ ಕನ್ನಡಿಗರಿಗೆ ಕೊಟ್ಟ 'ಪ್ರತ್ಯೇಕ ಸಚಿವಾಲಯ' ಗ್ಯಾರಂಟಿ ಯಾವಾಗ? ; ಕರ್ನಾಟಕ ಸರಕಾರವನ್ನು ಪ್ರಶ್ನಿಸಿದ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

ವಾರ್ತಾಭಾರತಿವಾರ್ತಾಭಾರತಿ8 Nov 2025 4:32 PM IST
share
ಅನಿವಾಸಿ ಕನ್ನಡಿಗರಿಗೆ ಕೊಟ್ಟ ಪ್ರತ್ಯೇಕ ಸಚಿವಾಲಯ ಗ್ಯಾರಂಟಿ ಯಾವಾಗ? ; ಕರ್ನಾಟಕ ಸರಕಾರವನ್ನು ಪ್ರಶ್ನಿಸಿದ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ
ದುಬೈ, ಯುಎಇ ಅನಿವಾಸಿ ಕನ್ನಡಿಗ ಸಮುದಾಯದಿಂದ ಡಾ.ಆರತಿ ಕೃಷ್ಣ ಅವರಿಗೆ ಅಭಿನಂದನೆ, ಸನ್ಮಾನ ಕಾರ್ಯಕ್ರಮ

ದುಬೈ : ಅನಿವಾಸಿ ಕನ್ನಡಿಗರ ರಕ್ಷಣೆ, ಸಾಮಾಜಿಕ ಭದ್ರತೆ ದೃಷ್ಟಿಯಿಂದ ಕರ್ನಾಟಕ ರಾಜ್ಯ ಸರಕಾರ ಚುನಾವಣೆಯ ವೇಳೆ ಅನಿವಾಸಿ ಕನ್ನಡಿಗರಿಗಾಗಿ ಘೋಷಿಸಿದ್ದ 'ಪ್ರತ್ಯೇಕ ಸಚಿವಾಲಯ' ಗ್ಯಾರಂಟಿಯನ್ನು ಯಾವಾಗ ಆರಂಭಿಸುತ್ತೀರಿ ಎಂದು ರಾಜ್ಯ ಸರಕಾರವನ್ನು ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಪ್ರಶ್ನಿಸಿದ್ದಾರೆ.

ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರು ವಿಧಾನ ಪರಿಷತ್ ಗೆ ನೂತನ ಸದಸ್ಯೆಯಾಗಿ ಆಯ್ಕೆಗೊಂಡಿರುವ ಹಿನ್ನೆಲೆಯಲ್ಲಿ ಅವರಿಗಾಗಿ ಕೆಎನ್‌ಆರ್‌ಐ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಬಿಸಿಸಿಐ ಅಧ್ಯಕ್ಷ ಹಿದಾಯತ್ ಅಡ್ಡೂರು ಹಾಗು ಕರ್ನಾಟಕ ಸಂಘ ದುಬೈನ ಅಧ್ಯಕ್ಷ ಶಶಿಧರ್ ನಾಗರಾಜಪ್ಪರವರ ನೇತೃತ್ವದಲ್ಲಿ ಯುಎಇಯ ಸುಮಾರು 36ಕ್ಕೂ ಹೆಚ್ಚು ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಗುರುವಾರ ದುಬೈನ ಗ್ರ್ಯಾಂಡ್ ಹಯಾತ್ ಹೊಟೇಲ್‌ನಲ್ಲಿ ಆಯೋಜಿಸಲಾಗಿದ್ದ ಅಭಿನಂದನೆ ಹಾಗು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೊಲಾಸೊ ಅವರು ಮಾತನಾಡುತ್ತಿದ್ದರು.

ರಾಜ್ಯ ಕಾಂಗ್ರೆಸ್‌ ಸರಕಾರವು ಅನಿವಾಸಿಗಳಿಗೆ ಪ್ರತ್ಯೇಕ ಸಚಿವಾಲಯದ ʼಗ್ಯಾರಂಟಿʼಯನ್ನು ತನ್ನ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿತ್ತು. ಆದರೆ, ಪಕ್ಷ ಅಧಿಕಾರಕ್ಕೆ ಬಂದು ಕೆಲವು ವರ್ಷಗಳೇ ಆದರೂ ಈ ಗ್ಯಾರಂಟಿಯನ್ನು ಇನ್ನೂ ಈಡೇರಿಸುವಲ್ಲಿ ಯಾಕೆ ವಿಳಂಬ ? ಇನ್ನಾದರೂ ಈ ಬಗ್ಗೆ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಈಗಾಗಲೇ ಆರತಿ ಕೃಷ್ಣ ನೇತೃತ್ವದ ಅನಿವಾಸಿ ಭಾರತೀಯ ವೇದಿಕೆ ಇದೆ, ಇದು ಸೀಮಿತ ಅಧಿಕಾರವನ್ನು ಹೊಂದಿದೆ. ಜೊತೆಗೆ ಖರ್ಚು ಮಾಡಲು ಬೇಕಾದಷ್ಟು ಬಜೆಟ್ ಕೂಡ ಇಲ್ಲ. ಈ ಎಲ್ಲ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಮೂಲಕ ಕನ್ನಡಿಗರ ಸಂಕಷ್ಟಕ್ಕೆ ಪರಿಹಾರ ಒದಗಿಸಬೇಕು ಎಂದರು.

ಪ್ರಸಕ್ತ ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆ, ಕಷ್ಟ, ಕಾರ್ಪಣ್ಯಗಳಿಗೆ ಸ್ಪಂದಿಸಲು, ಸಹಾಯಹಸ್ತವನ್ನು ನೀಡಲು ಪ್ರತ್ಯೇಕ ಸಚಿವಾಲಯದ ಅಗತ್ಯವಿದೆ. ಹಲವಾರು ವರ್ಷಗಳಿಂದ ಈ ಬಗ್ಗೆ ಒತ್ತಾಯ, ಒತ್ತಡವನ್ನು ಏರುತ್ತಿದ್ದರೂ ಇನ್ನೂ ಸಚಿವಾಲಯದ ಕನಸು ಈಡೇರಿಲ್ಲ. ರಾಜ್ಯ ಸರಕಾರ ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪನೆಯ ಭರವಸೆ ಮಾತ್ರ ಸಿಗುತ್ತಿದೆ. ಇನ್ನು ನಾವು ಈ ಬಗ್ಗೆ ಸುಮ್ಮನೆ ಕೂರದೆ ಒಗ್ಗಟ್ಟಿನಿಂದ ಒತ್ತಾಯವನ್ನು ಮಾಡಬೇಕು. ರಾಜ್ಯ ಸರಕಾರ ಕೇರಳದ ಮಾದರಿಯಲ್ಲಿ ಕನ್ನಡಿಗರಿಗೂ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸುವ ಮೂಲಕ ಕನ್ನಡಿಗರ ಕಷ್ಟ, ಸಮಸ್ಯೆಗಳಿಗೆ ಪರಿಹಾರ ಒದಗಿಸಲು ವೇದಿಕೆಯನ್ನು ಕಲ್ಪಿಸುವಂತೆ ಅವರು ಒತ್ತಾಯಿಸಿದರು.

ಈ ಕುರಿತು ಶೀಘ್ರವೇ ಒಂದು ನಿಯೋಗ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯನ್ನು ಭೇಟಿಯಾಗಿ ಪ್ರತ್ಯೇಕ ಸಚಿವಾಲಯವನ್ನು ಕೂಡಲೇ ಸ್ಥಾಪಿಸುವಂತೆ ಒತ್ತಾಯವನ್ನು ಮಾಡೋಣ, ಈ ನಿಯೋಗದೊಂದಿಗೆ ನಾನು ಕೂಡ ಕೈಜೋಡಿಸುತ್ತೇನೆ ಎಂದು ಅವರು ಭರವಸೆ ನೀಡಿದರು.

ಮುಂಬರುವ ದಿನಗಳಲ್ಲಿ ಇಲ್ಲಿರುವ ಎಲ್ಲ ಕನ್ನಡಪರ ಸಂಘಟನೆಗಳು ಒಂದುಗೂಡಿ ಮುನ್ನಡೆಯಬೇಕು. ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವದಂಥ ರಾಷ್ಟ್ರೀಯ ಹಬ್ಬ, ಕನ್ನಡ ರಾಜ್ಯೋತ್ಸವವನ್ನು ಎಲ್ಲ ಸಂಘಟನೆಗಳು ಒಂದೆಡೆ ಸೇರಿ ಜೊತೆಯಾಗಿ ಆಚರಿಸಬೇಕು. ಇದು ನಮ್ಮ ಒಗ್ಗಟ್ಟನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಮತ್ತು ನಮ್ಮ ಮಧ್ಯೆ ಸ್ನೇಹ, ಪ್ರೀತಿ-ವಿಶ್ವಾಸ, ಸಂಬಂಧವನ್ನು ಇಮ್ಮಡಿಗೊಳಿಸುತ್ತದೆ ಎಂದರು.

ಯುಎಇಯಲ್ಲಿ ಕನ್ನಡ ಭವನ; 5 ಕೋಟಿ ರೂ. ದೇಣಿಗೆ ಘೋಷಿಸಿದ ಕೊಲಾಸೊ :

ಯುಎಇಯಲ್ಲಿ ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸಲು ಕನ್ನಡ ಭವನದ ಅಗತ್ಯತೆ ಇದ್ದು, ಈ ಬಗ್ಗೆ ರಾಜ್ಯ ಸರಕಾರ ನಮಗೆ ಸಹಾಯ-ಸಹಕಾರವನ್ನು ನೀಡಬೇಕು. ಕನ್ನಡ ಭವನ ನಿರ್ಮಿಸಲು ತಾನು 5 ಕೋಟಿ ರೂಪಾಯಿ ದೇಣಿಗೆ ನೀಡುತ್ತೇನೆ ಎಂದು ಕೊಲಾಸೊ ಘೋಷಿಸಿದರು. ಇದೇ ವೇಳೆ ಪ್ರವೀಣ್ ಕುಮಾರ್ ಶೆಟ್ಟಿ ಅವರು ಕೂಡ 2.5 ಕೋಟಿ ರೂಪಾಯಿ ನೀಡುವುದಾಗಿ ಘೋಷಣೆಯನ್ನು ಮಾಡಿದರು.

ಡಾ.ಆರತಿ ಕೃಷ್ಣ ಅವರನ್ನು ಅಭಿನಂದಿಸಿದ ಕೊಲಾಸೊ, ಕನ್ನಡಿಗರ ಕಷ್ಟಗಳಿಗೆ, ಸಮಸ್ಯೆಗಳಿಗೆ ಸದಾ ಧ್ವನಿಯಾಗುತ್ತಿರುವ ಆರತಿ ಅವರ ಕಾರ್ಯ ವೈಖರಿ ನಿಜವಾಗಿಯೂ ಪ್ರಶಂಸನೀಯ, ಶ್ಲಾಘನೀಯ. ಅವರ ಸೇವೆ ಇನ್ನು ಇದೇ ರೀತಿ ಮುಂದುವರಿಯಲಿ ಎಂದು ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಆರತಿ ಕೃಷ್ಣ ಅವರು, ಅನಿವಾಸಿ ಕನ್ನಡಿಗರ ಕಷ್ಟ, ಸಮಸ್ಯೆ, ಸಂಕಷ್ಟಗಳಿಗೆ ಮುಂದಕ್ಕೂ ಧ್ವನಿಯಾಗಲಿದ್ದೇನೆ. ಸರಕಾರದ ಮಟ್ಟದ ಎಲ್ಲ ರೀತಿಯ ಸಹಾಯ, ಸಹಕಾರವನ್ನು ಇನ್ನಷ್ಟು ಹೆಚ್ಚು ತಲುಪಿಸುವಂತೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಡಾ.ಯು.ಟಿ.ಇಫ್ತಿಕಾರ್ ಅಲಿ ಅವರು, ಕನ್ನಡ ಭವನ ನಿರ್ಮಾಣಕ್ಕೆ ಬೇಕಾದ ಸಹಾಯ-ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರಲ್ಲದೆ, ಎಲ್ಲ ಜಾತಿ-ಧರ್ಮದವರನ್ನು ಜೊತೆಗೂಸಿಡಿಕೊಂಡು ಯುಎಇಯಲ್ಲಿ ಸೌಹಾರ್ದತೆಯ ಕೊಂಡಿಯಾಗಿರುವ ಪ್ರವೀಣ್ ಕುಮಾರ್ ಶೆಟ್ಟಿ, ತುಂಬೆ ಮೊಯಿದಿನ್ ಹಾಗೂ ರೊನಾಲ್ಡ್ ಕೊಲಾಸೊ ಅವರ ನೇತೃತ್ವದಲ್ಲಿಯೇ ಈ ಕನ್ನಡ ಭವನ ನಿರ್ಮಾಣ ಆಗಲಿ ಎಂದು ಶುಭ ಹಾರೈಸಿದರು.

ದುಬೈ ಬಿಸಿಎಫ್‌ ಅಧ್ಯಕ್ಷ ಡಾ.ಬಿ.ಕೆ.ಯೂಸುಫ್ ಅವರು ಡಾ.ಆರತಿ ಕೃಷ್ಣ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ಈ ವೇಳೆ ವಿವಿಧ ಕನ್ನಡಪರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು. ಹಿದಾಯತ್ ಅಡ್ಡೂರು ಎಲ್ಲರನ್ನು ಸ್ವಾಗತಿಸಿದರು. ಶಶಿಧರ್ ನಾಗರಾಜಪ್ಪ ಕಾರ್ಯಕ್ರಮ ನಿರೂಪಿಸಿದರು.
















































share
ವಾರ್ತಾಭಾರತಿ
ವಾರ್ತಾಭಾರತಿ
Next Story
X