Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. Dubai | ತಾಯ್ನಾಡಿಗೆ ವಾಪಸಾದ 60 ಮಂದಿ...

Dubai | ತಾಯ್ನಾಡಿಗೆ ವಾಪಸಾದ 60 ಮಂದಿ ಹಿರಿಯ ಕನ್ನಡಿಗರು

ವಾರ್ತಾಭಾರತಿವಾರ್ತಾಭಾರತಿ5 March 2026 9:19 PM IST
share
Dubai | ತಾಯ್ನಾಡಿಗೆ ವಾಪಸಾದ 60 ಮಂದಿ ಹಿರಿಯ ಕನ್ನಡಿಗರು
ದುಬೈ ಕನ್ನಡಿಗರ ಕೂಟದಿಂದ ನೆರವು

ದುಬೈ: ಕನ್ನಡಿಗರ ಕೂಟ ದುಬೈ ಮತ್ತು ಕರ್ನಾಟಕ ಬ್ರಿಗೇಡ್ ತಂಡದ ಸಂಯುಕ್ತ ಪ್ರಯತ್ನದಿಂದ ಪ್ರವಾಸಕ್ಕೆಂದು ಬಂದು ದುಬೈಯಲ್ಲಿ ಸಿಕ್ಕಾಕಿಕೊಂಡಿದ್ದ 60 ವರ್ಷ ಮೇಲ್ಪಟ್ಟ 60 ಮಂದಿ ಹಿರಿಯ ಕನ್ನಡಿಗರನ್ನು ಅವರ ಸ್ವಗ್ರಾಮಗಳಿಗೆ ಸುರಕ್ಷಿತವಾಗಿ ಕಳುಹಿಸಲಾಗಿದ್ದು, ಅವರು ಗುರುವಾರ ತಮ್ಮ ಮನೆಗಳಿಗೆ ಸುರಕ್ಷಿತವಾಗಿ ತಲುಪಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಕನ್ನಡಿಗರ ಕೂಟದ ಅಧ್ಯಕ್ಷ ಅರುಣ್ ಕುಮಾರ್, ಈ ಮಾನವೀಯ ಕಾರ್ಯಾಚರಣೆಯಲ್ಲಿ ಶ್ರಮಿಸಿದ ಸಂಪೂರ್ಣ ತಂಡಕ್ಕೆ ಮತ್ತು ಹಲವು ಕೊಡುಗೈ ಧಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.

ವಿಶೇಷವಾಗಿ ತಂಡದಲ್ಲಿ ಸಹಕರಿಸಿದ ಮಾಧವ್ ಕಿರಣ (ಉದ್ಯಮಿ), ಭಾರ್ಗವ್ ಶರ್ಮಾ (ಸ್ಥಳೀಯ ಬ್ಯಾಂಕ್ ನಿರ್ದೇಶಕ), ದೀಪಕ್ ಸೋಮಶೇಖರ್ (ಗಲ್ಫ್ ಕನ್ನಡ ಮೂವೀಸ್), ಚೇತನ್ ಸುಬ್ರಹ್ಮಣ್ಯ (ಇಂಪ್ರೆಸಿವ್ ರಿಯಲ್ ಎಸ್ಟೇಟ್), ಅಶ್ರಿತ್, ಬೆಂಗಳೂರು (ಟಿಫನೀಸ್ ಮಾಲೀಕ), ಮಂಜುಳಾ (ಸಾಫ್ಟ್ವೇರ್ ಉದ್ಯಮಿ) ಅವರ ಕೊಡುಗೆಯನ್ನು ಅವರು ಪ್ರಶಂಸಿಸಿದರು.


ಸಂಕಷ್ಟದ ವೇಳೆ ಜೊತೆಗಿದ್ದು, ಮಾರ್ಗದರ್ಶನ ನೀಡಿ ಧನ ಸಹಾಯ ಮಾಡಿದ ಖ್ಯಾತ ಅನಿವಾಸಿ ಉದ್ಯಮಿ ಡಾ. ರೊನಾಲ್ಡ್ ಕೊಲಾಸೋ ಅವರಿಗೆ ಧನ್ಯವಾದ ತಿಳಿಸಿದರು. ಅವರ ನಿರ್ದೇಶನದಂತೆ ನಿಯೋಜನೆಗೊಂಡ ಕನ್ನಡಿಗರ ಹೆಲ್ಪ್‌ಲೈನ್ ನಿಂದ ತುರ್ತು ಸಹಾಯ, ವಸತಿ, ಆಹಾರ, ವೈದ್ಯಕೀಯ ನೆರವು ಮತ್ತು ವಾಪಸಿ ವಿಮಾನಗಳ ಮಾಹಿತಿಗಾಗಿ AI ಚಾಟ್‌ಬಾಟ್ ವ್ಯವಸ್ಥೆ, ದುಬೈ ಉದ್ಯಮಿ ಹಿದಾಯತ್ ಅಡ್ಡೂರು ಅವರ ಸಹಕಾರದಿಂದ ತುರ್ತು ವ್ಯವಸ್ಥೆ ಕಲ್ಪಿಸಲು ಸಹಕಾರಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೇರಿಕ–ಇರಾನ್ ನಡುವಿನ ಯುದ್ಧ ಆರಂಭವಾದ ದಿನದಿಂದಲೇ ತಂಡವು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಅವರು ಹೇಳಿದರು.

ತಂಡದ ಸದಸ್ಯರು ನೀಡಿದ ಮಾಹಿತಿಯ ಪ್ರಕಾರ, ಇನ್ನೂ 150 ರಿಂದ 200 ಮಂದಿ ಕನ್ನಡಿಗರು ಯುಎಇ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ. ಅವರ ವಸತಿ, ಆಹಾರ ಮತ್ತು ಸುರಕ್ಷಿತ ವಾಪಸಿಗಾಗಿ ತಂಡ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಸ್ವಗ್ರಾಮ ತಲುಪಿದ ಹಿರಿಯರು ಕನ್ನಡಿಗರ ಕೂಟ ಮತ್ತು ಕರ್ನಾಟಕ ಬ್ರಿಗೇಡ್ ತಂಡದ ಸೇವೆಯನ್ನು ಕೊಂಡಾಡಿದ್ದು, ಸುರಕ್ಷಿತ ವಸತಿ ವ್ಯವಸ್ಥೆ, ಸಮಯಕ್ಕೆ ಸರಿಯಾದ ಆಹಾರ ಮತ್ತು ವೈದ್ಯಕೀಯ ನೆರವು, ಕಷ್ಟಕರ ಪರಿಸ್ಥಿತಿಯಲ್ಲೂ ಕೊಚ್ಚಿಗೆ ವಿಮಾನ ವ್ಯವಸ್ಥೆ, ಅಲ್ಲಿಂದ ಬೆಂಗಳೂರು ಮತ್ತು ನಂತರ ತಮ್ಮ ತಮ್ಮ ಊರುಗಳಿಗೆ ವಿಶೇಷ ವಾಹನ ವ್ಯವಸ್ಥೆ ಮಾಡಿರುವುದಕ್ಕೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Tags

DubaiseniorKannadigareturnhomeland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X