Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ʼಗಮ್ಮತ್ ಕಲಾವಿದರ್ ಯುಎಇʼ ವಾರ್ಷಿಕ ಸಭೆ:...

ʼಗಮ್ಮತ್ ಕಲಾವಿದರ್ ಯುಎಇʼ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ23 Jan 2026 11:19 PM IST
share
ʼಗಮ್ಮತ್ ಕಲಾವಿದರ್ ಯುಎಇʼ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ದುಬೈ: ಯುಎಇಯ ಪ್ರಸಿದ್ಧ ತುಳು ನಾಟಕ ತಂಡ ʼಗಮ್ಮತ್ ಕಲಾವಿದರ್ ಯುಎಇʼ 2011ರಲ್ಲಿ ಸ್ಥಾಪನೆಗೊಂಡು ತುಳು ರಂಗಭೂಮಿಯನ್ನು ಸಕ್ರಿಯವಾಗಿ ಮರಳುನಾಡಿನಲ್ಲಿ ಬೆಳೆಸಿಕೊಂಡು ಬರುತ್ತಿದ್ದು, ಗುಣಮಟ್ಟದ ನಾಟಕ ಪ್ರದರ್ಶನಗಳು, ಪರಿಪಕ್ವವಾದ ಅಭಿನಯಗಳ ಮೂಲಕ ಕೊಲ್ಲಿ ರಾಷ್ಟ್ರದಲ್ಲಿ ಮಾತ್ರವಲ್ಲದೆ ತಾಯ್ನಾಡಿನ ತುಳು ರಂಗಭೂಮಿಯಲ್ಲಿ ತನ್ನದೇ ಆದ ಗೌರವಾನ್ವಿತ ಸ್ಥಾನವನ್ನು ಗಳಿಸಿದೆ.

ರಂಗಭೂಮಿಯ ಚಟುವಟಿಕೆಗಳಷ್ಟೇ ಅಲ್ಲದೆ, ಗಮ್ಮತ್ ಕಲಾವಿದರ್ ಯುಎಇ ಕಳೆದ ಒಂದು ದಶಕಕ್ಕಿಂತ ಹೆಚ್ಚು ಕಾಲ ಸ್ವದೇಶದಲ್ಲಿನ ವಿವಿಧ ಸಮಾಜಮುಖಿ ಕಾರ್ಯಗಳಿಗೆ ಸಹಾಯ ಹಸ್ತ ನೀಡುತ್ತಾ ಸಾಂಸ್ಕೃತಿಕ ಪ್ರಚಾರದ ಜೊತೆಗೆ ಅರ್ಥಪೂರ್ಣ ಸಾಮಾಜಿಕ ಸೇವೆಯನ್ನು ಸಮತೋಲನದಿಂದ ಮುಂದುವರೆಸುತ್ತಿರುವುದು ಗಮನಾರ್ಹ ಅಂಶ.

ಗಮ್ಮತ್ ಕಲಾವಿದರ್ ಯುಎಇ ತಮ್ಮ ಮುಂದಿನ ಕಾರ್ಯಕ್ರಮಗಳು ಮತ್ತು ಯೋಜನೆಗಳಿಗೆ ಬಲ ತುಂಬುವ ಉದ್ದೇಶದಿಂದ, 2026–27 ಅವಧಿಯ ನೂತನ ಕಾರ್ಯಕಾರಿ ಸಮಿತಿಯನ್ನು ಜ.18ರಂದು ದುಬೈಯ ಬರ್ ದುಬೈಯಲ್ಲಿರುವ ಗ್ರ್ಯಾಂಡ್ ಎಕ್ಸೆಲ್ಸಿಯರ್ ಹೋಟೆಲ್‌ನ ಘಜಲ್ ರೆಸ್ಟೋರೆಂಟ್‌ನಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ರಚಿಸಲಾಯಿತು.


ವಾರ್ಷಿಕ ಸಭೆಯು ಸಂಸ್ಥೆಯ ಗೌರವ ಪೋಷಕರು ಹಾಗೂ ಕನ್ನಡ ಚಿತ್ರ ನಿರ್ಮಾಪಕರಾದ ಹರೀಶ್ ಬಂಗೇರ ಹಾಗೂ ನಾಟಕ ನಿರ್ದೇಶಕ “ರಂಗಸಾರಥಿ”ವಿಶ್ವನಾಥ್ ಶೆಟ್ಟಿ ಅವರು ಮಾರ್ಗದರ್ಶನ ಜರುಗಿದ್ದು, ಸಭೆಯಲ್ಲಿ ಹಿರಿಯ ನಾಟಕ ಹಾಗೂ ಕಿರುಚಿತ್ರ ಕಲಾವಿದರಾದ ವಾಸು ಕುಮಾರ್ ಶೆಟ್ಟಿ ಅವರನ್ನು ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ನಾಟಕ ಹಾಗೂ ಯಕ್ಷಗಾನ ಕಲಾವಿದೆಯಾದ ಸಮಂತಾ ಗಿರೀಶ್ ಅವರನ್ನು ಕಾರ್ಯದರ್ಶಿಯಾಗಿ, ಹಾಗೂ ಅನುಭವೀ ರಂಗಕಲಾವಿದೆಯಾದ ಜೆನೆಟ್ ಸಿಕ್ವೇರಾ ಅವರನ್ನು ಕೋಶಾಧಿಕಾರಿಯಾಗಿ ಆಯ್ಕೆ ಮಾಡಲಾಯಿತು. ಹರೀಶ್ ಬಂಗೇರ ಅವರು ಪೋಷಕರಾಗಿ ಮುಂದುವರಿಯಲಿದ್ದು, ನಿರ್ದೇಶಕ “ರಂಗಸಾರಥಿ” ವಿಶ್ವನಾಥ್ ಶೆಟ್ಟಿ ಅವರು ತಂಡದ ಕಲಾತ್ಮಕ ಮಾರ್ಗದರ್ಶನವನ್ನು ಮುಂದುವರಿಸಲಿದ್ದಾರೆ.


ನೂತನ ಅಧ್ಯಕ್ಷರಾದ ವಾಸು ಕುಮಾರ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಮರಳುನಾಡಿನಲ್ಲಿ ತುಳು ರಂಗಭೂಮಿಯ ಬೆಳವಣಿಗೆ ಹಾಗೂ ತುಳು ಸಂಸ್ಕೃತಿಯ ಸಂರಕ್ಷಣೆಗೆ ಪೋಷಕರು , ತುಳು ರಂಗಭೂಮಿ ಅಭಿಮಾನಿಗಳು , ಸದಸ್ಯರು ಮತ್ತು ಹಿತೈಷಿಗಳು ತಮ್ಮ ಸಹಕಾರ ಮತ್ತು ಬೆಂಬಲವನ್ನು ಮುಂದುವರೆಸಬೇಕಾಗಿ ಮನವಿ ಮಾಡಿದ್ದಾರೆ.

Tags

GammathArtistsUAEannualmeeting
share
ವಾರ್ತಾಭಾರತಿ
ವಾರ್ತಾಭಾರತಿ
Next Story
X