Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಗಲ್ಫ್ ಮೆಡಿಕಲ್ ವಿವಿಯ 23ನೇ ಘಟಿಕೋತ್ಸವ:...

ಗಲ್ಫ್ ಮೆಡಿಕಲ್ ವಿವಿಯ 23ನೇ ಘಟಿಕೋತ್ಸವ: 606 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

► 422 ಮಹಿಳೆಯರು, 184 ಪುರುಷರು ಪದವೀಧರರು ► ಏಳು ಎಮಿರೇಟ್‍ಗಳ 59 ಮಂದಿ ಎಮಿರಾಟಿ ವಿದ್ಯಾರ್ಥಿಗಳ ಸಾಧನೆ

ವಾರ್ತಾಭಾರತಿವಾರ್ತಾಭಾರತಿ19 Nov 2026 9:03 PM IST
share
ಗಲ್ಫ್ ಮೆಡಿಕಲ್ ವಿವಿಯ 23ನೇ ಘಟಿಕೋತ್ಸವ: 606 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಅಜ್ಮಾನ್ (ಯುಎಇ): ಅಜ್ಮಾನ್‍ನ ಯುವರಾಜ ಹಾಗೂ ಕಾರ್ಯಕಾರಿ ಮಂಡಳಿಯ ಅಧ್ಯಕ್ಷ ಹಿಸ್ ಹೈನೆಸ್ ಶೇಖ್ ಅಮ್ಮರ್ ಬಿನ್ ಹಮೀದ್ ಅಲ್ ನುಐಮಿ ಅವರ ಉಪಸ್ಥಿತಿಯಲ್ಲಿ ಗಲ್ಫ್ ಮೆಡಿಕಲ್ ವಿಶ್ವವಿದ್ಯಾಲಯದ 23ನೇ ಘಟಿಕೋತ್ಸವ ಸಮಾರಂಭವು ಅದ್ಧೂರಿಯಾಗಿ ನಡೆಯಿತು.

ತುಂಬೆ ಮೆಡಿಸಿಟಿಯ ತುಂಬೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ವೈದ್ಯಕೀಯ ಮತ್ತು ಆರೋಗ್ಯ ವಿಜ್ಞಾನ ವಿಭಾಗಗಳ ಒಟ್ಟು 606 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ತುಂಬೆ ಗ್ರೂಪ್‍ನ ಸಂಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯ್ದೀನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಮಂಡಾ ವೆಂಕಟರಮಣ ಉಪಸ್ಥಿತರಿದ್ದರು.

ವೈದ್ಯಕೀಯ, ದಂತ ವೈದ್ಯಕೀಯ, ಫಾರ್ಮಸಿ, ಆರೋಗ್ಯ ವಿಜ್ಞಾನ, ನಸಿರ್ಂಗ್ ಹಾಗೂ ಆರೋಗ್ಯ ನಿರ್ವಹಣೆ ಮತ್ತು ಕೃತಕ ಬುದ್ಧಿಮತ್ತೆ ಸೇರಿದಂತೆ ಆರು ವಿಭಾಗಗಳ ವಿದ್ಯಾರ್ಥಿಗಳು ಪದವಿ ಪಡೆದರು. ವೈದ್ಯಕೀಯ ಪಡೆದ ನೂತನ ವೈದ್ಯರು, ದಂತ ವೈದ್ಯರು, ಫಾರ್ಮಸಿಸ್ಟ್‍ಗಳು, ನರ್ಸ್‍ಗಳು ಹಾಗೂ ಆರೋಗ್ಯ ಕ್ಷೇತ್ರದ ತಜ್ಞರು ವೃತ್ತಿಪರ ಪ್ರಮಾಣವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ತುಂಬೆ ಮೊಯ್ದೀನ್ ಅವರು, ವಿಶ್ವವಿದ್ಯಾಲಯದ ಬೆಳವಣಿಗೆಗೆ ಸಹಕರಿಸಿದ ಯುಎಇ ಆಡಳಿತಗಾರರು, ಬೋಧಕ ಸಿಬ್ಬಂದಿ ತಂಡ ಹಾಗೂ ಕುಟುಂಬದವರಿಗೆ ಕೃತಜ್ಞತೆ ಸಲ್ಲಿಸಿದರು. ಪದವೀಧರರು ಜಗತ್ತಿನ ಯಾವುದೇ ಭಾಗದಲ್ಲಿ ಸೇವೆ ಸಲ್ಲಿಸಿದರೂ ರೋಗಿಗಳನ್ನು ಕಾಳಜಿ ಮತ್ತು ಮಾನವೀಯತೆಯಿಂದ ನೋಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕುಲಪತಿ ಪ್ರೊ. ಮಂಡಾ ವೆಂಕಟರಮಣ ಅವರು ಪದವೀಧರರನ್ನು ಅಭಿನಂದಿಸಿ, ವೃತ್ತಿಪರ ಜೀವನದಲ್ಲಿ ನಿರಂತರ ಕಲಿಕೆಗೆ ಆದ್ಯತೆ ನೀಡುವಂತೆ ಕರೆ ನೀಡಿದರು. ವಿದ್ಯಾರ್ಥಿಗಳ ಸಾಧನೆಯಲ್ಲಿ ಬೋಧಕ ಸಿಬ್ಬಂದಿಯ ಸಮರ್ಪಣೆ ಮತ್ತು ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಿದೆ ಎಂದು ಶ್ಲಾಘಿಸಿದರು.

422 ಮಹಿಳೆಯರು ಪದವೀಧರರು

ಈ ಬಾರಿಯ 606 ಪದವೀಧರರಲ್ಲಿ 422 ಮಹಿಳೆಯರು ಮತ್ತು 184 ಪುರುಷರಿದ್ದಾರೆ. ಯುಎಇಯ ಏಳು ಎಮಿರೇಟ್‍ಗಳಿಗೆ ಸೇರಿದ 59 ಮಂದಿ ಎಮಿರಾಟಿ ವಿದ್ಯಾರ್ಥಿಗಳು ಪದವಿ ಪಡೆದಿರುವುದು ವಿಶೇಷ.

ವೈದ್ಯಕೀಯ ಕಾಲೇಜಿನಿಂದ 184 ಮಂದಿ, ಆರೋಗ್ಯ ವಿಜ್ಞಾನ ಕಾಲೇಜಿನಿಂದ 141, ದಂತ ವೈದ್ಯಕೀಯ ಕಾಲೇಜಿನಿಂದ 102, ಫಾರ್ಮಸಿ ಕಾಲೇಜಿನಿಂದ 86, ನಸಿರ್ಂಗ್ ಕಾಲೇಜಿನಿಂದ 51 ಹಾಗೂ ಆರೋಗ್ಯ ನಿರ್ವಹಣೆ ಮತ್ತು ಎಐ ಕಾಲೇಜಿನಿಂದ 42 ಮಂದಿ ಪದವಿ ಪಡೆದಿದ್ದಾರೆ. ವೈದ್ಯಕೀಯ ವಿಭಾಗದಲ್ಲಿ 102 ಮಂದಿ ಎಂಬಿಬಿಎಸ್ ಪದವೀಧರರಾಗಿದ್ದಾರೆ. 100ಕ್ಕೂ ಅಧಿಕ ವಿದ್ಯಾರ್ಥಿಗಳು ಸ್ನಾತಕೋತ್ತರ ಮತ್ತು ಎಂಡಿ ಪದವಿಗಳನ್ನು ಗಳಿಸಿದ್ದಾರೆ.

ಪದವೀಧರರಲ್ಲಿ ಶೇ.36ರಷ್ಟು ಏಷ್ಯಾ, ಶೇ.22ರಷ್ಟು ಅರಬ್ ರಾಷ್ಟ್ರಗಳು, ಶೇ.17ರಷ್ಟು ಆಫ್ರಿಕಾ ಹಾಗೂ ಶೇ.13ರಷ್ಟು ಯುಎಇ ಮತ್ತು ಜಿಸಿಸಿ ರಾಷ್ಟ್ರಗಳಿಗೆ ಸೇರಿದವರಾಗಿದ್ದಾರೆ. ಉಳಿದವರು ಯುರೋಪ್, ಉತ್ತರ ಅಮೆರಿಕ, ಆಸ್ಟ್ರೇಲಿಯಾ ಮತ್ತು ಕೆರಿಬಿಯನ್ ಪ್ರದೇಶಗಳಿಂದ ಬಂದಿದ್ದಾರೆ.

ಟೈಮ್ಸ್ ಹೈಯರ್ ಎಜುಕೇಶನ್ ವಿಶ್ವವಿದ್ಯಾಲಯಗಳ ರ್ಯಾಂಕಿಂಗ್ 2027ರಲ್ಲಿ ಮೊದಲ ಬಾರಿಗೆ ಸ್ಥಾನ ಪಡೆದಿರುವ GMU, 2,297 ವಿಶ್ವವಿದ್ಯಾಲಯಗಳ ಪೈಕಿ ಅಂತಾರಾಷ್ಟ್ರೀಯ ದೃಷ್ಟಿಕೋನ ವಿಭಾಗದಲ್ಲಿ 99.4 ಅಂಕಗಳೊಂದಿಗೆ ಜಾಗತಿಕವಾಗಿ ಮೊದಲ ಸ್ಥಾನ ಗಳಿಸಿದೆ. ಈ ರ್ಯಾಂಕಿಂಗ್‍ನಲ್ಲಿ ಸ್ಥಾನ ಪಡೆದ ಯುಎಇಯ ಏಕೈಕ ವಿಶೇಷ ವೈದ್ಯಕೀಯ ಮತ್ತು ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಯೂ ಇದಕ್ಕೆ ಸಂದಿದೆ.

ಟೈಮ್ಸ್ ಹೈಯರ್ ಎಜುಕೇಶನ್ (ದಿ) ಇಂಪ್ಯಾಕ್ಟ್ ರ್ಯಾಂಕಿಂಗ್ 2026ರಲ್ಲಿ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ ವಿಭಾಗದಲ್ಲಿ 64ನೇ ಹಾಗೂ ಗುಣಮಟ್ಟದ ಶಿಕ್ಷಣ ವಿಭಾಗದಲ್ಲಿ 60ನೇ ಸ್ಥಾನ ಪಡೆದಿದೆ. ವಲ್ರ್ಡ್ ಯೂನಿವರ್ಸಿಟಿ ರ್ಯಾಂಕಿಂಗ್ ಅರಬ್ ರೀಜನ್ 2027ರಲ್ಲಿ 125ನೇ ಸ್ಥಾನ ಗಳಿಸಿದ್ದು, ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ಅನುಪಾತದಲ್ಲಿ ಅರಬ್ ಪ್ರದೇಶದಲ್ಲೇ ಮೊದಲ ಸ್ಥಾನ ಪಡೆದಿದೆ.

ಇದರ ಫಾರ್ಮಸಿ ಕಾಲೇಜು ವಿಷಯಾಧಾರಿತ ವಿಶ್ವವಿದ್ಯಾಲಯ ರ್ಯಾಂಕಿಂಗ್ 2026ರಲ್ಲಿ ಫಾರ್ಮಸಿ ಮತ್ತು ಫಾರ್ಮಕಾಲಜಿ ವಿಭಾಗದಲ್ಲಿ 351–400ರ ಶ್ರೇಣಿಯಲ್ಲಿ ಸ್ಥಾನ ಪಡೆದಿದೆ. ಅರಬ್ ಯೂನಿವರ್ಸಿಟಿ ರ್ಯಾಂಕಿಂಗ್ 2027ರಲ್ಲಿ 88ನೇ ಸ್ಥಾನ ಗಳಿಸಿದೆ.

ಸಂಶೋಧನೆಗೂ ಹೆಚ್ಚಿನ ಆದ್ಯತೆ

ಸಂಶೋಧನಾ ಕ್ಷೇತ್ರದಲ್ಲೂ ವಿಶ್ವವಿದ್ಯಾಲಯ ಗಮನಾರ್ಹ ಪ್ರಗತಿ ಸಾಧಿಸಿದೆ. 2025ರಲ್ಲಿ ಸ್ಕೋಪಸ್ ಸೂಚ್ಯಂಕದಲ್ಲಿ 492 ಸಂಶೋಧನಾ ಪ್ರಕಟಣೆಗಳನ್ನು ದಾಖಲಿಸಿದೆ. ತುಂಬೆ ರಿಸರ್ಚ್ ಇನ್‍ಸ್ಟಿಟ್ಯೂಟ್ ಫಾರ್ ಪ್ರಿಸಿಷನ್ ಮೆಡಿಸಿನ್, ತುಂಬೆ ಇನ್‍ಸ್ಟಿಟ್ಯೂಟ್ ಆಫ್ ಪಾಪ್ಯುಲೇಶನ್ ಹೆಲ್ತ್, ಅಂತಾರಾಷ್ಟ್ರೀಯ ಸಂಶೋಧನಾ ಅನುದಾನ ಹಾಗೂ 75ಕ್ಕೂ ಅಧಿಕ ವಿದೇಶಿ ವಿಶ್ವವಿದ್ಯಾಲಯಗಳೊಂದಿಗಿನ ಸಹಭಾಗಿತ್ವ ಸಂಶೋಧನಾ ಚಟುವಟಿಕೆಗಳಿಗೆ ಬಲ ತುಂಬಿವೆ.

1998ರಲ್ಲಿ ಅಜ್ಮಾನ್‍ನಲ್ಲಿ ಸ್ಥಾಪನೆಯಾದ ಗಲ್ಫ್ ಮೆಡಿಕಲ್ ವಿಶ್ವವಿದ್ಯಾಲಯವು ತುಂಬೆ ಗ್ರೂಪ್‍ನ ಒಡೆತನದಲ್ಲಿದ್ದು, ಯುಎಇಯ ಪ್ರಮುಖ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ಶಿಕ್ಷಣ, ವೈದ್ಯಕೀಯ ತರಬೇತಿ ಮತ್ತು ಸಂಶೋಧನೆಯನ್ನು ಸಂಯೋಜಿಸಿರುವ ತುಂಬೆ ಅಕಾಡೆಮಿಕ್ ಹೆಲ್ತ್ ಸಿಸ್ಟಮ್‍ನ ಭಾಗವಾಗಿ ಕಾರ್ಯನಿರ್ವಹಿಸುತ್ತಿದೆ.

ವಿಶ್ವವಿದ್ಯಾಲಯದ ಮುಂದಿನ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಹೆಚ್ಚಿನ ಮಾಹಿತಿಗಾಗಿ www.gmu.ac.ae ಸಂಪರ್ಕಿಸಬಹುದು.




Tags

Gulf Medical UniversityConvocationDegreesStudents
share
ವಾರ್ತಾಭಾರತಿ
ವಾರ್ತಾಭಾರತಿ
Next Story
X