Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇನಲ್ಲಿ ಮುಂದುವರಿದ ಭಾರೀ ಗಾಳಿ, ಮಳೆ;...

ಯುಎಇನಲ್ಲಿ ಮುಂದುವರಿದ ಭಾರೀ ಗಾಳಿ, ಮಳೆ; ಜನಜೀವನ ಅಸ್ತವ್ಯಸ್ತ

ಎಂ.ಇಕ್ಬಾಲ್ ಉಚ್ಚಿಲ, ದುಬೈಎಂ.ಇಕ್ಬಾಲ್ ಉಚ್ಚಿಲ, ದುಬೈ25 March 2026 5:05 PM IST
share
ಯುಎಇನಲ್ಲಿ ಮುಂದುವರಿದ ಭಾರೀ ಗಾಳಿ, ಮಳೆ; ಜನಜೀವನ ಅಸ್ತವ್ಯಸ್ತ

ದುಬೈ: ಯುಎಇಯ ವಿವಿಧ ಭಾಗಗಳಲ್ಲಿ ಭಾರೀ ಗಾಳಿ, ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಉತ್ತರ ಎಮಿರೇಟ್ಸ್ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯೂ ದಾಖಲಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಮಳೆ, ಗಾಳಿ ಇನ್ನಷ್ಟು ತೀವ್ರವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.


ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ, ತನ್ನ ಆರ್ಭಟವನ್ನು ಮುಂದುವರಿಸಿದೆ. ಯುಎಇಯ ಹಲವು ಕಡೆ ಮಳೆಯಿಂದಾಗಿ ಕೃತಕ ನೆರೆ ಉಂಟಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ.

ರಾಷ್ಟ್ರೀಯ ಹವಾಮಾನ ಕೇಂದ್ರ (NCM) ಪ್ರಕಾರ, ದೇಶದಾದ್ಯಂತ ಮಳೆ, ಗುಡುಗು, ಬಲವಾದ ಗಾಳಿಗಳು ಬೀಸುವ ಸಾಧ್ಯತೆ ಇದೆ. ಬುಧವಾರ ಅಬುಧಾಬಿ, ದುಬೈ, ಶಾರ್ಜಾ, ಫುಜೈರ, ಅಜ್ಮಾನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಗಾಳಿ- ಮಳೆ ಆಗಿದೆ.


ಇದರಿಂದ ಕೃತಕ ಪ್ರವಾಹ ಉಂಟಾಗಿದ್ದು, ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಟ ನಡೆಸುವಂತಾಗಿದೆ. ಜೊತೆಗೆ ಜನಜೀವನ ಕೂಡ ಅಸ್ತವ್ಯಸ್ತವಾಗಿದ್ದು, ಜನರು ದಾರಿಯಲ್ಲಿ ನಡೆದಾಡದಂತ ಪರಿಸ್ಥಿತಿ ಎದುರಾಗಿದೆ.

ಮಳೆಯ ಹಿನ್ನಲೆಯಲ್ಲಿ ವಾಹನ ಚಾಲಕರು ಎಚ್ಚರಿಕೆಯಿಂದ ಚಾಲನೆ ಮಾಡಬೇಕು ಮತ್ತು ಎಲೆಕ್ಟ್ರಾನಿಕ್ ಫಲಕಗಳಲ್ಲಿ ತೋರಿಸುವ ವೇಗ ಮಿತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.


ಯುಎಇನಲ್ಲಿ ಮಾರ್ಚ್ 28ರವರೆಗೆ ಗಾಳಿ-ಮಳೆ ತೀವ್ರವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಗಳು ಹಲವು ಸಲಹೆಗಳನ್ನು, ಎಚ್ಚರಿಕೆಗಳು ಮತ್ತು ಸುರಕ್ಷತಾ ಸೂಚನೆಗಳನ್ನು ಹೊರಡಿಸಿವೆ. ಸಮುದ್ರ ಪ್ರದೇಶಗಳಲ್ಲಿ ಅಲೆಗಳು ಉಗ್ರವಾಗಿರುವುದರಿಂದ ಅತ್ತ ಯಾರು ಕೂಡ ತೆರಳದಂತೆ ಸೂಚಿಸಲಾಗಿದೆ.

ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸಲು, ವಿಶೇಷವಾಗಿ ಮಳೆಯ ವೇಳೆ ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸಲು ಸೂಚಿಸಿವೆ. ರಸ್ತೆಗಳಲ್ಲಿ ನೀರು ಸಂಗ್ರಹವಾಗುತ್ತಿರುವುದರಿಂದ ವಾಹನಗಳ ನಡುವೆ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಬೇಕು ಮತ್ತು ವೇಗವನ್ನು ಕಡಿಮೆ ಮಾಡಬೇಕು. ಜೊತೆಗೆ, ಕಣಿವೆ ಪ್ರದೇಶಗಳು (ವಾಡಿಗಳು) ಮತ್ತು ನೀರು ಹರಿಯುವ ಸ್ಥಳಗಳ ಬಳಿ ಹೋಗಬಾರದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.













Tags

Heavy windsrainUAE; Publiclifechaotic
share
ಎಂ.ಇಕ್ಬಾಲ್ ಉಚ್ಚಿಲ, ದುಬೈ
ಎಂ.ಇಕ್ಬಾಲ್ ಉಚ್ಚಿಲ, ದುಬೈ
Next Story
X