Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈಯಲ್ಲಿ ಎಸ್ ಎಂ ಸಯ್ಯದ್ ಖಲೀಲ್ ಅವರ...

ದುಬೈಯಲ್ಲಿ ಎಸ್ ಎಂ ಸಯ್ಯದ್ ಖಲೀಲ್ ಅವರ ಅಂತಿಮ ಸಂಸ್ಕಾರ

ಅಪಾರ ಸಂಖ್ಯೆಯಲ್ಲಿ ಸೇರಿದ ಅಭಿಮಾನಿಗಳು

ವಾರ್ತಾಭಾರತಿವಾರ್ತಾಭಾರತಿ21 Nov 2024 11:17 PM IST
share
ದುಬೈಯಲ್ಲಿ ಎಸ್ ಎಂ ಸಯ್ಯದ್ ಖಲೀಲ್ ಅವರ ಅಂತಿಮ ಸಂಸ್ಕಾರ

ದುಬೈ: ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಹಾಗೂ ಮಾಧ್ಯಮ ಕಮ್ಯುನಿಕೇಶನ್ಸ್ ಲಿಮಿಟೆಡ್ ನ ಅಧ್ಯಕ್ಷ ಎಸ್ ಎಂ ಸಯ್ಯದ್ ಖಲೀಲ್ (86) ಬುಧವಾರ ತಡರಾತ್ರಿ ದುಬೈ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರವು ಗುರುವಾರ ಸಂಜೆ 5 ಗಂಟೆಗೆ (ಸೋನಾಪುರ್) ಸಮೀಪದ ಮಸೀದಿಯಲ್ಲಿ ಜನಾಝ ನಮಾಝ್ ಪ್ರಾರ್ಥನೆಯೊಂದಿಗೆ ದುಬೈಯ ಅಲ್ ಖಿಸೀಸ್ ಖಬರ್‌ಸ್ಥಾನದಲ್ಲಿ ನೆರವೇರಿತು.

ಈ ಮಾಹಿತಿಯನ್ನು ಭಟ್ಕಳ ಜಮಾಅತ್ ದುಬೈನ ಪ್ರಧಾನ ಕಾರ್ಯದರ್ಶಿ ಜೆಲಾನಿ ಮುಹ್ತಶಮ್ ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

ಭಟ್ಕಳದ ಪ್ರಪ್ರಥಮ ಚಾರ್ಟರ್ಡ್ ಅಕೌಂಟೆಂಟ್ ಗಳಲ್ಲಿ ಒಬ್ಬರಾದ ಸಯ್ಯದ್ ಖಲೀಲ್ ಅವರು ' ಸಿ ಎ ಖಲೀಲ್ ' ಎಂದೇ ಚಿರಪರಿಚಿತರಾಗಿದ್ದ ಖ್ಯಾತ ಅನಿವಾಸಿ ಕನ್ನಡಿಗರಲ್ಲೊಬ್ಬರು. ದುಬೈ ಸಹಿತ ಗಲ್ಫ್ ದೇಶಗಳಲ್ಲಿ ಕನ್ನಡ ಹಾಗೂ ಕೊಂಕಣಿ ಭಾಷೆ ಹಾಗೂ ಸಂಸ್ಕೃತಿಯ ಕಂಪು ಹರಡುವಲ್ಲಿ ಮಹತ್ವದ ಕೊಡುಗೆ ನೀಡಿದವರು. ನೂರಾರು ಯುವಜನರಿಗೆ ಉದ್ಯೋಗ ಪಡೆಯಲು ನೆರವಾದವರು. ಭಟ್ಕಳ , ಮಂಗಳೂರು ಸಹಿತ ಹತ್ತಾರು ಕಡೆ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಸಂಘ ಸಂಸ್ಥೆಗಳಿಗೆ ಪೋಷಕರಾಗಿ, ಪದಾಧಿಕಾರಿಯಾಗಿ ಆಸರೆಯಾದವರು.

ಮೃತರ ಪುತ್ರಿಯರಿಬ್ಬರು, ಒಬ್ಬರು ಅಮೆರಿಕದಿಂದ ಹಾಗೂ ಇನ್ನೊಬ್ಬರು ಲಂಡನ್‌ನಿಂದ ದುಬೈಗೆ ಆಗಮಿಸಿದ್ದಾರೆ. ಅವರ ಪುತ್ರ ಎಸ್.ಎಂ. ಸೈಯದ್ ರಯೀಸ್ ಹಾಗೂ ಇನ್ನೊಬ್ಬ ಪುತ್ರಿ ಈಗಾಗಲೇ ದುಬೈಯಲ್ಲಿದ್ದಾರೆ.

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಭಾರತ, ಸೌದಿ ಅರೇಬಿಯಾ ಮತ್ತು ಇತರ ದೇಶಗಳಿಂದ ಕುಟುಂಬದ ಸದಸ್ಯರು ಹಾಗೂ ಆಪ್ತರು ದುಬೈಗೆ ಆಗಮಿಸಿದ್ದು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡರು. ದುಬೈಯ ಎಸ್ಟ್ರಾ ಆಸ್ಪತ್ರೆಯಲ್ಲಿ ಮೃತರ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆಯನ್ನು ಮಾಡಲಾಗಿತ್ತು.

ಭಟ್ಕಳದ ಬಹುತೇಕ ಜನರು ದುಬೈಯ ಅಲ್ ರಾಸ್ ಪ್ರದೇಶದಲ್ಲಿ ವಾಸವಾಗಿರುವುದರಿಂದ, ಜನರು ಸುಲಭವಾಗಿ ಖಲೀಲ್ ಸಾಹೇಬರ ಜನಾಝ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಲಿಕ್ಕಾಗಿ ಭಟ್ಕಳ ಮುಸ್ಲಿಮ್ ಜಮಾಅತ್‌ನಿಂದ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿತ್ತು.

ಡಾ. ಸೈಯದ್ ಖಲೀಲ್ ರಹ್ಮಾನ್ ಅವರ ಅಗಲಿಕೆಯಿಂದ ಕುಟುಂಬಸ್ಥರು ಮತ್ತು ಬಂಧುಗಳು ಆಘಾತದಲ್ಲಿದ್ದು, ದುಬೈ ಹಾಗೂ ಇತರ ದೇಶಗಳಲ್ಲಿ ಅವರ ಆಪ್ತರು ಸಂತಾಪ ಸೂಚನೆ ವ್ಯಕ್ತಪಡಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X