Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈನಲ್ಲಿ 65 ಕನ್ನಡಿಗ ಉದ್ಯಮಿಗಳು,...

ದುಬೈನಲ್ಲಿ 65 ಕನ್ನಡಿಗ ಉದ್ಯಮಿಗಳು, ಹೂಡಿಕೆದಾರರೊಂದಿಗೆ ಸಚಿವ ಕೆ.ಜೆ. ಜಾರ್ಜ್ ಸಭೆ

ವಾರ್ತಾಭಾರತಿವಾರ್ತಾಭಾರತಿ14 Sept 2026 9:14 PM IST
share
ದುಬೈನಲ್ಲಿ 65 ಕನ್ನಡಿಗ ಉದ್ಯಮಿಗಳು, ಹೂಡಿಕೆದಾರರೊಂದಿಗೆ ಸಚಿವ ಕೆ.ಜೆ. ಜಾರ್ಜ್ ಸಭೆ

ದುಬೈ, ಸೆ. 14: ಕರ್ನಾಟಕದ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು ರವಿವಾರ ದುಬೈನಲ್ಲಿ ನಡೆದ ಹೂಡಿಕೆದಾರರ ಸಭೆಯಲ್ಲಿ ಯುಎಇಯ ವಿವಿಧ ಭಾಗಗಳ 65 ಪ್ರಮುಖ ಕನ್ನಡಿಗ ಉದ್ಯಮಿಗಳು ಮತ್ತು ಹೂಡಿಕೆದಾರರನ್ನು ಭೇಟಿಯಾಗಿ, ಕರ್ನಾಟಕದಲ್ಲಿ ಹೂಡಿಕೆ, ಪ್ರವಾಸೋದ್ಯಮ ಹಾಗೂ ವ್ಯಾಪಾರ ವಿಸ್ತರಣೆಯ ಸಾಧ್ಯತೆಗಳ ಕುರಿತು ಚರ್ಚಿಸಿದರು.

ಕರ್ನಾಟಕ ಎನ್‌ಆರ್‌ಐ ಫೋರಂ ಯುಎಇ (KNRI Forum) ಆಯೋಜಿಸಿದ್ದ ‘ಇನ್ವೆಸ್ಟ್ ಇನ್ ಕರ್ನಾಟಕ–ಎನ್‌ಆರ್‌ಐ ಬಿಸಿನೆಸ್ ಕಮ್ಯುನಿಟಿ ಮೀಟ್, ದುಬೈ 2026’ ಕಾರ್ಯಕ್ರಮದಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಬಂದಿದ್ದ ಹಾಗೂ 20ಕ್ಕೂ ಹೆಚ್ಚು ಕೈಗಾರಿಕೆಗಳನ್ನು ಪ್ರತಿನಿಧಿಸುವ ಉದ್ಯಮ ವಲಯದ ಪ್ರಮುಖರು ಪಾಲ್ಗೊಂಡಿದ್ದರು.


ಕರ್ನಾಟಕ ಮತ್ತು ಜಾಗತಿಕ ಉದ್ಯಮಿಗಳ ಸಮುದಾಯದ ನಡುವಿನ ಸಂಪರ್ಕವನ್ನು ಬಲಪಡಿಸುವುದು ಹಾಗೂ ಹೂಡಿಕೆ ಮತ್ತು ಪಾಲುದಾರಿಕೆಗೆ ಅವಕಾಶಗಳನ್ನು ಸೃಷ್ಟಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು ಎಂದು KNRI ಫೋರಂ ಯುಎಇ ಅಧ್ಯಕ್ಷ ಹಾಗೂ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್‌ನ ಸಿಎಂಡಿ ಪ್ರವೀಣ್ ಶೆಟ್ಟಿ ಹೇಳಿದರು.

ಸಭೆಯಲ್ಲಿ KSTDC ಅಧ್ಯಕ್ಷ ಶ್ರೀನಿವಾಸ್ ಎಂ., ವಿಧಾನ ಪರಿಷತ್ ಸದಸ್ಯೆ ಹಾಗೂ KNRI ಫೋರಂನ ಮಾಜಿ ಉಪಾಧ್ಯಕ್ಷೆ ಆರತಿ ಕೃಷ್ಣ, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ರಾಮ್ ಪ್ರಸಾದ್ ಮನೋಹರ್, KSTDC ವ್ಯವಸ್ಥಾಪಕ ನಿರ್ದೇಶಕ ಶಿವಪ್ರಸಾದ್ ಪಿ.ಆರ್. ಸೇರಿದಂತೆ ಹಿರಿಯ ಸರ್ಕಾರಿ ಅಧಿಕಾರಿಗಳು ಭಾಗವಹಿಸಿದ್ದರು. ಯುಎಇಯಲ್ಲಿ ನೆಲೆಸಿರುವ ಕರ್ನಾಟಕದ ಉದ್ಯಮ ಪ್ರಮುಖರಾದ ರೊನಾಲ್ಡ್ ಕೊಲಾಸೊ ಮತ್ತು ಮೊಯ್ದೀನ್ ತುಂಬೆ ಕೂಡ ಉಪಸ್ಥಿತರಿದ್ದರು.

ಟ್ರೆಸ್ಕೋನ್ ಗ್ರೂಪ್‌ ನ ಸಿಇಒ ಹಾಗೂ ಮಗುರೆ (Magure) ಸಹ-ಸಂಸ್ಥಾಪಕ ನವೀನ್ ಭಾರದ್ವಾಜ್ ಕಾರ್ಯಕ್ರಮ ನಿರೂಪಿಸಿದರು.


ಪ್ರವಾಸೋದ್ಯಮದಲ್ಲಿ ಅವಕಾಶ:-

ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ರಾಮ್ ಪ್ರಸಾದ್ ಮನೋಹರ್ ಅವರು ಕರ್ನಾಟಕದ ಸಾಂಸ್ಕೃತಿಕ ಮತ್ತು ನೈಸರ್ಗಿಕ ಪರಂಪರೆ, ಮೂಲಸೌಕರ್ಯ ಹಾಗೂ ಹೂಡಿಕೆಯ ಸಾಮರ್ಥ್ಯದ ಕುರಿತು ಮಾಹಿತಿ ನೀಡಿದರು. ಮನರಂಜನೆ, ವ್ಯಾಪಾರ, ವೈದ್ಯಕೀಯ, ಕ್ಷೇಮ, ಆಧ್ಯಾತ್ಮಿಕ, ಧಾರ್ಮಿಕ, ಕೃಷಿ ಮತ್ತು ಕರಾವಳಿ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲು ಇರುವ ಅವಕಾಶಗಳ ಬಗ್ಗೆ ಅವರು ವಿವರಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಜಾರ್ಜ್, ಕರ್ನಾಟಕದ ಆರ್ಥಿಕ ಮತ್ತು ಮೂಲಸೌಕರ್ಯ ಅಭಿವೃದ್ಧಿಯ ಕುರಿತು ಪ್ರಸ್ತಾಪಿಸಿದರು. ರಾಜ್ಯದ ಬೆಳವಣಿಗೆಗೆ ಕೊಡುಗೆ ನೀಡುವಂತೆ ಜಗತ್ತಿನ ವಿವಿಧೆಡೆ ಇರುವ ಕನ್ನಡಿಗ ಉದ್ಯಮಿಗಳು ಹಾಗೂ ವೃತ್ತಿಪರರಿಗೆ ಅವರು ಕರೆ ನೀಡಿದರು.

ಯಾವುದೇ ಭೇದಭಾವ ಅಥವಾ ಪೂರ್ವಗ್ರಹವಿಲ್ಲದೆ ಕರ್ನಾಟಕದ ಪ್ರಗತಿಗಾಗಿ ಜಾಗತಿಕ ಕನ್ನಡಿಗರ ಸಮುದಾಯ ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದು ಅವರು ಉಲ್ಲೇಖಿಸಿದರು.

ಕರ್ನಾಟಕದ ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಗೆ ಜಾರ್ಜ್ ಅವರ ಕೊಡುಗೆಯನ್ನು ಶ್ರೀನಿವಾಸ್ ಎಂ. ಪ್ರಸ್ತಾಪಿಸಿದರೆ, ರಾಜ್ಯದ ಹೊರಗೆ ವಾಸಿಸುವ ಕನ್ನಡಿಗರೊಂದಿಗೆ ಕರ್ನಾಟಕದ ಸಂಪರ್ಕವನ್ನು ಬಲಪಡಿಸುವ ಮಹತ್ವವನ್ನು ಆರತಿ ಕೃಷ್ಣ ವಿವರಿಸಿದರು.


ಸಂಪರ್ಕ, ಹೂಡಿಕೆಗೆ ಸಲಹೆಗಳು:-

ಕರ್ನಾಟಕದ ಮುಂದಿರುವ ಸವಾಲುಗಳು ಮತ್ತು ಆರ್ಥಿಕ ಅವಕಾಶಗಳ ಕುರಿತು, ವಿಶೇಷವಾಗಿ ಪ್ರವಾಸೋದ್ಯಮ ಕ್ಷೇತ್ರದ ಬಗ್ಗೆ ರೊನಾಲ್ಡ್ ಕೊಲಾಸೊ ಮಾತನಾಡಿದರು. ಜಾರ್ಜ್ ಅವರೊಂದಿಗಿನ ತಮ್ಮ ದೀರ್ಘಕಾಲದ ಒಡನಾಟ ವನ್ನು ಸ್ಮರಿಸಿದ ಮೊಯ್ದೀನ್ ತುಂಬೆ, ಸರ್ಕಾರದ ಬೆಂಬಲ, ಭೂಮಿ ಹಂಚಿಕೆ ಮತ್ತು ಅನುಮೋದನೆಗಳು ತಮ್ಮ ವ್ಯವಹಾರದ ಅಭಿವೃದ್ಧಿಗೆ ಸಹಕಾರಿಯಾಗಿವೆ ಎಂದು ಹೇಳಿದರು.

ಸಂವಾದದ ವೇಳೆ ಯುಎಇ ಮೂಲದ ಉದ್ಯಮಿಗಳು ರಸ್ತೆ, ವಾಯು ಮತ್ತು ಕರಾವಳಿ ಸಂಪರ್ಕ ಸುಧಾರಣೆ, ಪ್ರವಾಸೋದ್ಯಮ ಮೂಲಸೌಕರ್ಯ, ಹೂಡಿಕೆ ಸೌಲಭ್ಯ ಹಾಗೂ ಕರ್ನಾಟಕದ ಜಾಗತಿಕ ಪ್ರಚಾರಕ್ಕೆ ಸಂಬಂಧಿಸಿ ದಂತೆ ಸಲಹೆಗಳನ್ನು ನೀಡಿದರು.

ವಿದೇಶಗಳಲ್ಲಿ ನೆಲೆಸಿರುವ ಯುವ ಕನ್ನಡಿಗರನ್ನು ಕರ್ನಾಟಕದೊಂದಿಗೆ ಬೆಸೆಯಲು ‘ನಮ್ಮ ಭೇರು’ ಉಪಕ್ರಮವನ್ನು ಪ್ರಸ್ತಾಪಿಸಲಾಯಿತು. ಈ ಮೂಲಕ ಯುವ ಕನ್ನಡಿಗರಿಗೆ ಕರ್ನಾಟಕದ ಪರಂಪರೆ ಮತ್ತು ಸಂಸ್ಕೃತಿಯ ಪರಿಚಯ ಮಾಡಿಸುವ ಉದ್ದೇಶ ಹೊಂದಲಾಗಿದೆ.

ಕರ್ನಾಟಕ ಮೂಲದ ಉದ್ಯಮಿಗಳು ಮತ್ತು ಹಿರಿಯ ವೃತ್ತಿಪರರನ್ನು ಒಂದೇ ವೇದಿಕೆಯಡಿ ಸಂಪರ್ಕಿಸುವ ‘ಕರ್ನಾಟಕ ಉದ್ಯಮ ಮತ್ತು ವೃತ್ತಿಪರ ಮಂಡಳಿ’ (KBPC) ರಚಿಸುವ ಪ್ರಸ್ತಾಪವೂ ಸಭೆಯಲ್ಲಿ ಕೇಳಿಬಂತು. ಹೂಡಿಕೆ, ವ್ಯಾಪಾರ, ಹೊಸ ಆವಿಷ್ಕಾರ, ಜ್ಞಾನ ಹಂಚಿಕೆ ಹಾಗೂ ಉದ್ಯಮ ಸಹಭಾಗಿತ್ವಕ್ಕೆ ಈ ವೇದಿಕೆ ನೆರವಾಗಲಿದೆ.


ಮೂವರು ಉದ್ಯಮಿಗಳಿಗೆ ಸನ್ಮಾನ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಯುಎಇ ಮೂಲದ ಮೂವರು ಉದ್ಯಮಿಗಳಾದ ರೊನಾಲ್ಡ್ ಕೊಲಾಸೊ, ಮೊಯ್ದೀನ್ ತುಂಬೆ ಮತ್ತು ಪ್ರವೀಣ್ ಶೆಟ್ಟಿ ಅವರನ್ನು ಕರ್ನಾಟಕ ಸರ್ಕಾರವು ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಗುರುತಿಸಿ ಸನ್ಮಾನಿಸಿತು.

ಪ್ರವಾಸೋದ್ಯಮ, ಹೂಡಿಕೆ, ಉದ್ಯಮ ಮತ್ತು ಸಂಪರ್ಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಸಹಕರಿಸುವ ಆಸಕ್ತಿಯನ್ನು ಉದ್ಯಮಿಗಳು ವ್ಯಕ್ತಪಡಿಸಿದರು.

















Tags

Minister K. J. GeorgemeetingentrepreneursinvestorsKarnatakaDubai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X