Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮನ್ಹಾಜ್ ಅಲ್-ಅಂಬಿಯಾ ಕುವೈತ್ ಫುಟ್ಬಾಲ್...

ಮನ್ಹಾಜ್ ಅಲ್-ಅಂಬಿಯಾ ಕುವೈತ್ ಫುಟ್ಬಾಲ್ ಚಾಂಪಿಯನ್‌ಶಿಪ್‌: ರೈಸಿಂಗ್ ಸ್ಟಾರ್ಸ್‌ ಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ28 Jun 2026 8:59 PM IST
share
ಮನ್ಹಾಜ್ ಅಲ್-ಅಂಬಿಯಾ ಕುವೈತ್ ಫುಟ್ಬಾಲ್ ಚಾಂಪಿಯನ್‌ಶಿಪ್‌: ರೈಸಿಂಗ್ ಸ್ಟಾರ್ಸ್‌ ಗೆ ಪ್ರಶಸ್ತಿ

ಕುವೈತ್ ಸಿಟಿ, ಜೂ. 28: ಮರ್ಹೂಂ ಶರೀಫ್ ಬೊಪ್ಪಳಿಗೆ ಅವರ ಸ್ಮರಣಾರ್ಥ ಆಯೋಜಿಸಲಾಗಿದ್ದ ಮನ್ಹಾಜ್ ಅಲ್-ಅಂಬಿಯಾ ಕುವೈತ್ ಫುಟ್ಬಾಲ್ ಚಾಂಪಿಯನ್‌ಶಿಪ್–2026ರ ಪ್ರಶಸ್ತಿಯನ್ನು ರೈಸಿಂಗ್ ಸ್ಟಾರ್ಸ್ ತಂಡ ಮುಡಿಗೇರಿಸಿಕೊಂಡಿತು.

ಮಗಾಫ್ ಎಸ್‌ಆರ್‌ಎಫ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರೈಸಿಂಗ್ ಸ್ಟಾರ್ಸ್ ತಂಡವು ಫ್ಯೂಚರ್ ಲೆಜೆಂಡ್ಸ್ ತಂಡವನ್ನು 5–1 ಗೋಲುಗಳಿಂದ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಕುವೈತ್‌ನ ಯುವ ಫುಟ್ಬಾಲ್ ಆಟಗಾರರ ಪ್ರತಿಭೆಗೆ ವೇದಿಕೆಯಾಗಿದ್ದ ಈ ಪಂದ್ಯಾವಳಿಯು ರೋಚಕ ಹಾಗೂ ಮನರಂಜನಾತ್ಮಕ ಫೈನಲ್ ಪಂದ್ಯದೊಂದಿಗೆ ತೆರೆ ಕಂಡಿತು.

ರೈಸಿಂಗ್ ಸ್ಟಾರ್ಸ್ ತಂಡದ ಪರ ಸಾದ್ ಫಿರೋಝ್ ಹ್ಯಾಟ್ರಿಕ್ ಗೋಲು ದಾಖಲಿಸಿ ಮಿಂಚಿದರು. ಅವರ ಅದ್ಭುತ ಪ್ರದರ್ಶನಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು. ತಂಡದ ನಾಯಕ ಹಂಝತ್ ಖಾದರ್ ಹಾಗೂ ಅಹ್ಮದ್ ರಫಾನ್ ರಶೀದ್ ತಲಾ ಒಂದು ಗೋಲು ಗಳಿಸಿ ತಂಡದ ಭರ್ಜರಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ತಂಡದ ಉಪನಾಯಕ ಜಯಾನ್ ಬಶೀರ್ ರಕ್ಷಣಾ ವಿಭಾಗದಲ್ಲಿ ಮಹತ್ವದ ಕೊಡುಗೆ ನೀಡಿದರು. ಗೋಲ್‌ಕೀಪರ್ ಅದ್ನಾನ್ ಖಾದರ್ ಫೈನಲ್ ಪಂದ್ಯದಲ್ಲಿ ಪೆನಾಲ್ಟಿ ತಡೆದು ಗಮನ ಸೆಳೆದರು. ಪಂದ್ಯಾವಳಿಯುದ್ದಕ್ಕೂ ತೋರಿದ ಸ್ಥಿರ ಪ್ರದರ್ಶನಕ್ಕಾಗಿ ಅವರಿಗೆ ಅತ್ಯುತ್ತಮ ಗೋಲ್‌ಕೀಪರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಫ್ಯೂಚರ್ ಲೆಜೆಂಡ್ಸ್ ತಂಡದ ಪರ ಸೈಹಾನ್ ಸತ್ತಾರ್ ಏಕೈಕ ಗೋಲು ದಾಖಲಿಸಿದರು. ರೈಸಿಂಗ್ ಸ್ಟಾರ್ಸ್ ತಂಡಕ್ಕೆ ರಶೀದ್ ಬೋಳಾರ್ ತರಬೇತಿ ನೀಡಿದ್ದರೆ, ಫ್ಯೂಚರ್ ಲೆಜೆಂಡ್ಸ್ ತಂಡಕ್ಕೆ ಬಶೀರ್ ಅರ್ಕುಳ ಮಾರ್ಗದರ್ಶನ ನೀಡಿದರು.

ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಮುಖ್ಯ ಸಂಘಟಕ ಹನೀಫ್ ಮೂಡಿಗೆರೆ ಅವರಿಗೆ ಸಂಘಟಕರು ಕೃತಜ್ಞತೆ ಸಲ್ಲಿಸಿದರು. ಮನ್ಹಾಜ್ ಅಲ್-ಅಂಬಿಯಾ ಕುವೈತ್ ಅಧ್ಯಕ್ಷ ಮೊಹಮ್ಮದ್ ನೂರುದ್ದೀನ್, ಕೆಕೆಎಂಎ ಫಹಾಹೀಲ್ ಅಧ್ಯಕ್ಷ ಖಾದರ್ ಬೊಪ್ಪಳಿಗೆ ಹಾಗೂ ಸತಾರ್ ಸಿಟಿ ಕ್ಲಿನಿಕ್ ನೀಡಿದ ಬೆಂಬಲವನ್ನು ಅವರು ಸ್ಮರಿಸಿದರು.

ಫೈನಲ್ ಪಂದ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ ರೆಫರಿ ಈಸಾ ಬದ್ರು ಮುನೀರ್ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು. ಕುವೈತ್‌ ನಲ್ಲಿ ಯುವ ಆಟಗಾರರಲ್ಲಿ ಫುಟ್ಬಾಲ್ ಕ್ರೀಡೆಗೆ ಉತ್ತೇಜನ ನೀಡುವ ಮತ್ತು ಸಮುದಾಯ ಸಾಮರಸ್ಯವನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಈ ಚಾಂಪಿಯನ್‌ಶಿಪ್, ಮರ್ಹೂಂ ಶರೀಫ್ ಬೊಪ್ಪಳಿಗೆ ಅವರ ಸ್ಮರಣೆಗೆ ಗೌರವ ಸಲ್ಲಿಸುತ್ತಾ ಕ್ರೀಡಾಸ್ಫೂರ್ತಿ ಮತ್ತು ಏಕತೆಯ ಸಂದೇಶದೊಂದಿಗೆ ಮುಕ್ತಾಯಗೊಂಡಿತು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X