Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. 90,000ಕ್ಕೂ ಅಧಿಕ ಹೆರಿಗೆ ಮಾಡಿಸಿದ...

90,000ಕ್ಕೂ ಅಧಿಕ ಹೆರಿಗೆ ಮಾಡಿಸಿದ ಮೈಲಿಗಲ್ಲು ದಾಟಿದ ತುಂಬೆ ಹೆಲ್ತ್ ಕೇರ್

ವಾರ್ತಾಭಾರತಿವಾರ್ತಾಭಾರತಿ16 Oct 2024 11:56 PM IST
share
90,000ಕ್ಕೂ ಅಧಿಕ ಹೆರಿಗೆ ಮಾಡಿಸಿದ ಮೈಲಿಗಲ್ಲು ದಾಟಿದ ತುಂಬೆ ಹೆಲ್ತ್ ಕೇರ್

ದುಬೈ : ತುಂಬೆ ಗ್ರೂಪ್ ನಿರ್ವಹಿಸುತ್ತಿರುವ ಯುಎಇಯ ಬೃಹತ್ ಖಾಸಗಿ ಶೈಕ್ಷಣಿಕ ಆಸ್ಪತ್ರೆಯಾದ ತುಂಬೆ ಯುನಿವರ್ಸಿಟಿ ಹಾಸ್ಪಿಟಲ್ 90,000ಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ ಮೈಲಿಗಲ್ಲು ದಾಟಿದೆ.

ಜನವರಿ 2003ರಲ್ಲಿ ಪ್ರಥಮ ಹೆರಿಗೆ ಮಾಡಿಸಿದ ತುಂಬೆ ಹೆಲ್ತ್ ಕೇರ್, ಇದುವರೆಗೆ ಯಶಸ್ವಿಯಾಗಿ 90,000ಕ್ಕೂ ಅಧಿಕ ಹೆರಿಗೆಗಳನ್ನು ಮಾಡಿಸಿದೆ. ಆ ಮೂಲಕ ಯುಎಇಯಲ್ಲಿ ಹೆರಿಗೆ ಆರೈಕೆಗಾಗಿ ಹೆಚ್ಚು ಕೌಟುಂಬಿಕ ಬೇಡಿಕೆ ಹೊಂದಿರುವ ಆಸ್ಪತ್ರೆಯಾಗಿ ಗುರುತಿಸಲ್ಪಟ್ಟಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

ತುಂಬೆ ಯುನಿವರ್ಸಿಟಿ ಆಸ್ಪತ್ರೆಯ ಸಾಧನೆಯ ಹಿನ್ನೆಲೆಯಲ್ಲಿ ತುಂಬೆ ಗ್ರೂಪ್ ಅಜ್ಮಾನ್ ನ ಅಲ್ ಜುರ್ಫ್‌ನ ತುಂಬೆ ಮೆಡಿಸಿಟಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಯಾಗಿ ತುಂಬೆ ಗ್ರೂಪ್ ಸಂಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯ್ದಿನ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ತುಂಬೆ ಹೆಲ್ತ್ ಕೇರ್‌ನ ಉಪಾಧ್ಯಕ್ಷ ಅಕ್ಬರ್ ಮೊಯ್ದಿನ್ ತುಂಬೆ, ‘‘ಆರೋಗ್ಯವಂತ ಹಾಗೂ ಪ್ರಕಾಶಮಾನ ಭವಿಷ್ಯದ ಭರವಸೆಯನ್ನು ಪ್ರತಿನಿಧಿಸುವ ಪ್ರತಿ ಮಗುವಿನ ಬೆಳವಣಿಗೆಯಲ್ಲಿ ನೆರವಾಗಿರುವುದು ನಮ್ಮ ಪಾಲಿನ ಸವಲತ್ತು ಎಂದು ಭಾವಿಸಿದ್ದೇವೆ. ಈ ಮೈಲಿಗಲ್ಲು ಅಸಾಧಾರಣ ಆರೈಕೆಯನ್ನು ಒದಗಿಸುವ ಹಾಗೂ ಮುಂದಿನ ಪೀಳಿಗೆಯನ್ನು ಪೋಷಿಸುವ, ಪ್ರತಿ ಮಗುವಿಗೂ ಜೀವಿಸುವ ಅವಕಾಶವನ್ನು ಖಾತರಿಪಡಿಸುವ ನಮ್ಮ ಬದ್ಧತೆಯನ್ನು ಮರು ದೃಢೀಕರಿಸಿದೆ’’ ಎಂದರು.

ತುಂಬೆ ಯುನಿವರ್ಸಿಟಿ ಹಾಸ್ಪಿಟಲ್‌ನ ಪ್ರಸೂತಿ ಹಾಗೂ ಸ್ತ್ರೀರೋಗ ವಿಭಾಗವು ಪ್ರತಿ ವರ್ಷ ಅಂದಾಜು 35,000 ರೋಗಿಗಳಿಗೆ ಸೇವೆ ಒದಗಿಸುತ್ತಿದೆ. 10 ಅತ್ಯಾಧುನಿಕ ಪ್ರಸೂತಿ ಮತ್ತು ಹೆರಿಗೆ ಕೊಠಡಿಗಳು, ಪ್ರಸೂತಿ ಮತ್ತು ಸ್ತ್ರೀರೋಗಕ್ಕೇ ಮೀಸಲಾಗಿರುವ ತುರ್ತು ಚಿಕಿತ್ಸಾ ಘಟಕ ಹಾಗೂ ವಿಶೇಷ ಶಸ್ತ್ರಚಿಕಿತ್ಸಾ ಕೊಠಡಿಗಳನ್ನು ಹೊಂದಿದೆ. ಚೊಚ್ಚಲ ತಾಯಂದಿರಿಗೆ ಖಾಸಗಿ ಕೋಣೆಗಳೊಂದಿಗೆ ಪ್ರಸೂತಿ ನಂತರದ ವಾರ್ಡ್‌ಗಳಿದ್ದು, ಅವರ ಚೇತರಿಕೆ ಸಂದರ್ಭ ದಲ್ಲಿ ಆರಾಮದಾಯಕ ವಾತಾವರಣ ನೀಡುತ್ತದೆ.

ಆಸ್ಪತ್ರೆಯು ಮಿತ ದರದ ಹೆರಿಗೆ ಪ್ಯಾಕೇಜ್ ಒದಗಿಸುತ್ತಿದ್ದು, ಆ ಮೂಲಕ ಕುಟುಂಬಗಳಿಗೆ ಗುಣಮಟ್ಟದ ಅರೈಕೆಯನ್ನು ಒದಗಿಸುವ ಬದ್ಧತೆಯನ್ನು ಪ್ರದರ್ಶಿಸುತ್ತಿದೆ. ಹೆರಿಗೆ ಪ್ಯಾಕೇಜ್ ತಜ್ಞ ಸ್ತ್ರೀರೋಗ ವೈದ್ಯರೊಂದಿಗಿನ ಸಮಾಲೋಚನೆ, ಉಚಿತ ಹೆರಿಗೆ ಮುಂಗಡ ಕಾಯ್ದಿರಿಸುವಿಕೆ ಹಾಗೂ ಪ್ರಸವಪೂರ್ವ ತರಗತಿಗಳು ಒಳಗೊಂಡಿವೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X