Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇ: ಸಂಕಷ್ಟದ ವೇಳೆ ಪ್ರವಾಸಿಗರಿಗೆ...

ಯುಎಇ: ಸಂಕಷ್ಟದ ವೇಳೆ ಪ್ರವಾಸಿಗರಿಗೆ ನೆರವಾದ ‘ಕನ್ನಡಿಗಾಸ್ ಹೆಲ್ಪ್ ಲೈನ್’; ಅನಿವಾಸಿಗಳಿಂದ ಮೆಚ್ಚುಗೆ

ವಾರ್ತಾಭಾರತಿವಾರ್ತಾಭಾರತಿ18 March 2026 2:13 PM IST
share
ಯುಎಇ: ಸಂಕಷ್ಟದ ವೇಳೆ ಪ್ರವಾಸಿಗರಿಗೆ ನೆರವಾದ ‘ಕನ್ನಡಿಗಾಸ್ ಹೆಲ್ಪ್ ಲೈನ್’; ಅನಿವಾಸಿಗಳಿಂದ ಮೆಚ್ಚುಗೆ

ದುಬೈ: ಅಮೇರಿಕಾ–ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದ ಯುಎಇಯಲ್ಲಿ ಸಂಕಷ್ಟಕ್ಕೀಡಾಗಿದ್ದ ಪ್ರವಾಸಿ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸುವ ಜೊತೆಗೆ, ವಿಸಿಟ್ ವೀಸಾ ಮೂಲಕ ಉದ್ಯೋಗ ಅರಸಿ ಬಂದ ಜನರಿಗೆ ವಸತಿ, ಊಟದ ವ್ಯವಸ್ಥೆ ಮಾಡುವ ಮೂಲಕ ‘ಕನ್ನಡಿಗಾಸ್ ಹೆಲ್ಪ್ ಲೈನ್’ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದೆ.

ಯುಎಇಯಲ್ಲಿ ಕೊರೋನಾ ಹಾಗೂ ಪ್ರವಾಹದ ವೇಳೆ ಸಂಕಷ್ಟದಲ್ಲಿದ್ದ ಕನ್ನಡಿಗರಿಗೆ ಸಹಾಯ ನೀಡುವ ಉದ್ದೇಶದಿಂದ ಹುಟ್ಟಿಕೊಂಡ ‘ಕನ್ನಡಿಗಾಸ್ ಹೆಲ್ಪ್ ಲೈನ್’, ಈ ಬಾರಿಯ ಯುದ್ಧದಿಂದ ಸಂಕಷ್ಟಕ್ಕೀಡಾದ ಕನ್ನಡಿಗರನ್ನು ರಕ್ಷಿಸುವ ಜೊತೆಗೆ ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸಲು ಮತ್ತೆ ತನ್ನ ಕಾರ್ಯಚಟುವಟಿಕೆಯನ್ನು ಪುನರಾರಂಭಿಸಿದೆ.

ಖ್ಯಾತ ಅನಿವಾಸಿ ಉದ್ಯಮಿ ಡಾ. ರೊನಾಲ್ಡ್ ಕೊಲಾಸೋ ಅವರ ನೇತೃತ್ವದಲ್ಲಿ ಹಿದಾಯತ್ ಅಡ್ಡೂರು ಅವರ ಸಂಯೋಜನೆಯಲ್ಲಿ ಯುಎಇಯಲ್ಲಿರುವ 30ಕ್ಕೂ ಹೆಚ್ಚಿನ ಕನ್ನಡಿಗರ ಸಂಘಟನೆಗಳನ್ನು ಒಟ್ಟುಗೂಡಿಸಿಕೊಂಡು ‘ಕನ್ನಡಿಗಾಸ್ ಹೆಲ್ಪ್ ಲೈನ್’ ತಂಡವು ಸಂಕಷ್ಟಕ್ಕೆ ಸಿಲುಕಿರುವ ಪ್ರವಾಸಿ ಕನ್ನಡಿಗರನ್ನು, ಅನಾರೋಗ್ಯಕ್ಕೀಡಾದವರನ್ನು, ಊಟ–ವಸತಿ ಇಲ್ಲದವರನ್ನು ಭೇಟಿ ಮಾಡಿ ನೆರವಿನ ಹಸ್ತ ನೀಡುವ ಮೂಲಕ ಅನಿವಾಸಿ ಭಾರತೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ‘ಕನ್ನಡಿಗಾಸ್ ಹೆಲ್ಪ್ ಲೈನ್’ ಸಂಯೋಜಕ ಹಿದಾಯತ್ ಅಡ್ಡೂರು, “ಯುಎಇಯಲ್ಲಿ ತಾಯ್ನಾಡಿಗೆ ತೆರಳಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದ 630ಕ್ಕೂ ಹೆಚ್ಚು ಜನರಿಗೆ ವಿಮಾನ ಪ್ರಯಾಣದ ವ್ಯವಸ್ಥೆ ಕಲ್ಪಿಸಿ ಸುರಕ್ಷಿತವಾಗಿ ತಾಯ್ನಾಡು ಸೇರುವಂತೆ ಮಾಡಲಾಗಿದೆ. ಸಂಕಷ್ಟದ ವೇಳೆ ತುರ್ತು ಅವಶ್ಯಕತೆವಿರುವ ವೃದ್ಧರು, ಗರ್ಭಿಣಿಯರು, ಅನಾರೋಗ್ಯದಿಂದಿರುವವರನ್ನು ತಾಯ್ನಾಡಿಗೆ ಕಳುಹಿಸಲು 180 ಆಸನಗಳಿರುವ ಚಾರ್ಟರ್ಡ್ ವಿಮಾನ ವ್ಯವಸ್ಥೆ ಮಾಡಲು ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಡಾ. ರೊನಾಲ್ಡ್ ಕೊಲಾಸೋ ‘ಕನ್ನಡಿಗಾಸ್ ಹೆಲ್ಪ್ ಲೈನ್’ಗೆ ಭರವಸೆ ನೀಡಿದ್ದರು. ಜೊತೆಗೆ ಸಿಲುಕಿದ್ದ ಪ್ರವಾಸಿ ಕನ್ನಡಿಗರೊಬ್ಬರಿಗೆ ವೈದ್ಯಕೀಯ ಶಸ್ತ್ರಚಿಕಿತ್ಸೆ ಹಾಗೂ ಅಗತ್ಯವಿರುವವರಿಗೆ ಊಟೋಪಚಾರಕ್ಕೆ ಧನ ಸಹಾಯ ನೀಡುವುದಾಗಿ ತಿಳಿಸಿದ್ದಾರೆ. ಇಂಡಿಯನ್ ಕೌನ್ಸುಲೇಟ್‌ನಿಂದ ನಮ್ಮ ಬಳಿ ಬಂದ 22 ಮಂದಿ ಅನಾರೋಗ್ಯಪೀಡಿತರಿಗೆ ಔಷಧಿಯನ್ನು ಕೊಲಾಸೋ ಅವರು ನೀಡಿದ ಹಣದಿಂದಲೇ ಒದಗಿಸಲಾಗಿದೆ. ಕೊಲಾಸೋ ಅವರು ಅಗತ್ಯವಿರುವ ಎಲ್ಲಾ ರೀತಿಯ ಹಣಕಾಸಿನ ನೆರವನ್ನು ನೀಡಿ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಹೇಳಿದರು.

ಇದೇ ವೇಳೆ ದುಬೈನಲ್ಲಿ ಪ್ರವೀಣ್ ಶೆಟ್ಟಿ ಹಾಗೂ ಇಸಾಕ್ ಹಾಜಿ ಅವರ ಹೋಟೆಲ್‌ಗಳಲ್ಲಿ, ಅಜ್ಮಾನ್‌ನಲ್ಲಿ ಧೀರಜ್ ಜೈನ್ ಅವರ ಫಾರ್ಮ್‌ಹೌಸ್‌ನಲ್ಲಿ 235ಕ್ಕೂ ಹೆಚ್ಚು ಜನರಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಮಾಡಲಾಗಿತ್ತು. ಜೊತೆಗೆ 71 ಜನರಿಗೆ ದುಬೈಯ ರಾಶಿದ್ ಆಸ್ಪತ್ರೆಯ ನುರಿತ ವೈದ್ಯರಿಂದ ವೈದ್ಯಕೀಯ ತಪಾಸಣೆ, 32 ಮಂದಿಗೆ ಔಷಧಿ ಒದಗಿಸುವ ಮೂಲಕ ವೈದ್ಯಕೀಯ ಸಹಾಯ ಮಾಡಲಾಗಿದೆ. ಯುದ್ಧದ ಆರಂಭದ ವೇಳೆ ಸಂಕಷ್ಟದಲ್ಲಿದ್ದ ಒಟ್ಟು 1,180 ಜನರಿಗೆ ಊಟ ವಿತರಿಸಲಾಗಿದೆ. ಜೊತೆಗೆ 70 ಆಹಾರ ಕಿಟ್‌ಗಳನ್ನು ನೀಡಲಾಗಿದೆ. ತೊಂದರೆಗೀಡಾದ ಜನರನ್ನು ದುಬೈ, ಶಾರ್ಜಾ, ರಾಸ್ ಅಲ್ ಖೈಮಾ ಮತ್ತು ಅಬುಧಾಬಿ ವಿಮಾನ ನಿಲ್ದಾಣಗಳಿಗೆ ತೆರಳಲು ಖಾಸಗಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದು ತಿಳಿಸಿದ್ದಾರೆ.

‘ಕನ್ನಡಿಗಾಸ್ ಹೆಲ್ಪ್ ಲೈನ್’ ಜೊತೆ ಕೆಎನ್‌ಆರ್‌ಐ ಫೋರಂ ಯುಎಇ, ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ (BCCI) ಯುಎಇ, ಕರ್ನಾಟಕ ಸಂಘ ದುಬೈ, ಕನ್ನಡಿಗರ ಕೂಟ ದುಬೈ, ಅಬುಧಾಬಿ ಕರ್ನಾಟಕ ಸಂಘ, ದುಬೈ ಅನಿವಾಸಿ ಕನ್ನಡಿಗರು, ಹೆಮ್ಮೆಯ ದುಬೈ ಕನ್ನಡ ಸಂಘ, ಒಕ್ಕಲಿಗರ ಸಂಘ ದುಬೈ, ಕನ್ನಡ ಪಾಠಶಾಲೆ ದುಬೈ, ಶಾರ್ಜಾ ಕರ್ನಾಟಕ ಸಂಘ, ದುಬೈ ಕೊಂಕಣ್ಸ್, ಬಿಸಿಎಫ್, ಕೆಸಿಎಫ್, ಮಂಕಿ ಕಮ್ಯೂನಿಟಿ, SKSSF ವಿಖಾಯ ಯುಎಇ, ನೂರುಲ್ ಹುದಾ ಯುಎಇ ಕಮಿಟಿ, ದುಬೈ ಬ್ಯಾರೀಸ್, ಬದ್ರಿಯಾ ಫ್ರೆಂಡ್ಸ್, ಹಿದಾಯ ಫೌಂಡೇಶನ್, ಶಂಸುಲ್ ಉಲಮಾ ತೋಡಾರ್, ರಾಸ್ ಅಲ್ ಖೈಮಾ & ಫುಜೈರಾ ಕರ್ನಾಟಕ ಸಂಘ, ಏಮ್ ಇಂಡಿಯಾ ಫೌಂಡೇಶನ್, ದಾರುನ್ನೂರ್, ಗಲ್ಫ್ ಕರ್ನಾಟಕ ಕುಟುಂಬ & ಗಲ್ಫ್ ಗೆಳತಿಯರು, ಮ್ಯಾಂಗಲೋರ್ ಕೊಂಕಣ್ಸ್ ದುಬೈ, ಅಲ್ ಖಮರ್ ಟ್ರಸ್ಟ್ ಮೂಳೂರು, ಒಕ್ಕಲಿಗರ ಸಂಘ ಯುಎಇ, ರಾಕ್ ಕರ್ನಾಟಕ ಸಂಘ ಯುಎಇ ಸೇರಿದಂತೆ ಹಲವಾರು ಸಂಘಟನೆಗಳು ಕೈಜೋಡಿಸಿವೆ ಎಂದು ಹಿದಾಯತ್ ಅಡ್ಡೂರು ಹೇಳಿದರು.

ತಂಡದ ಶ್ಲಾಘನೀಯ ಸೇವಾ ಕಾರ್ಯದಿಂದ ಸಂತಸಗೊಂಡ ರೊನಾಲ್ಡ್ ಕೊಲಾಸೋ ಅವರು ತಮ್ಮ ನಿವಾಸದಲ್ಲಿ ‘ಇಫ್ತಾರ್ ಸೌಹಾರ್ದ ಕೂಟ’ವನ್ನು ಏರ್ಪಡಿಸಿದ್ದರು. ಕುಟುಂಬ ಸಮೇತರಾಗಿ ಬಂದ ಎಲ್ಲಾ ಹೆಲ್ಪ್‌ಲೈನ್ ಸದಸ್ಯರ ನಿಸ್ವಾರ್ಥ ಸೇವೆಗೆ ಶುಭ ಹಾರೈಸಿದರು.

“ನಮ್ಮ ಈ ಒಗ್ಗಟ್ಟು ಹಾಗೂ ಐಕ್ಯತೆಯ ಮನೋಭಾವನೆ ಕೇವಲ ಸಂಕಷ್ಟದ ಸಮಯಕ್ಕೆ ಮಾತ್ರ ಸೀಮಿತವಾಗಿರದೆ, ಹೀಗೆಯೇ ನಿರಂತರವಾಗಿ ಉತ್ತಮ ಮಾದರಿಯಾಗಿ ಮುಂದುವರೆಯಬೇಕು. ರಾಷ್ಟ್ರೀಯ ಹಾಗೂ ರಾಜ್ಯೋತ್ಸವ ಸಂಭ್ರಮವನ್ನೂ ಈ ನಾಡಿನಲ್ಲಿ ಒಂದಾಗಿಯೇ ಆಚರಿಸೋಣ” ಎಂದು ಕೊಲಾಸೋ ಕರೆ ನೀಡಿದರು.

ಪ್ರಾಂತ್ಯ, ಜಿಲ್ಲೆ, ಭಾಷೆ, ವರ್ಗ, ಹುದ್ದೆ, ಜಾತಿ, ಧರ್ಮವನ್ನು ಮೀರಿ ‘ಕನ್ನಡಿಗಾಸ್ ಹೆಲ್ಪ್ ಲೈನ್’ ತಂಡ ಒಗ್ಗೂಡಿ ಸಲ್ಲಿಸಿದ ಸೇವೆಯಿಂದ ಉತ್ತಮ ಸೌಹಾರ್ದತೆಯ ಸಂದೇಶ ತಾಯ್ನಾಡಿಗೂ ತಲುಪಲಿ; ಅಲ್ಲಿಯೂ ಸಾಮರಸ್ಯ ಮತ್ತು ಸಮಾನತೆಯ ವಾತಾವರಣ ನಿರ್ಮಾಣವಾಗಿ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಲಿ ಎಂದು ರೊನಾಲ್ಡ್ ಕೊಲಾಸೋ ಆಶಿಸಿದರು.

ಈ ಸಂದರ್ಭದಲ್ಲಿ ‘ಕನ್ನಡಿಗಾಸ್ ಹೆಲ್ಪ್ ಲೈನ್’ ಸೇವಾ ಕಾರ್ಯಕ್ರಮಗಳಲ್ಲಿ ಜೊತೆಯಾಗಿ ನಿಂತ ರೊನಾಲ್ಡ್ ಕೊಲಾಸೋ, ಪ್ರವೀಣ್ ಶೆಟ್ಟಿ, ಇಸಾಕ್ ಹಾಜಿ, ಧೀರಜ್ ಜೈನ್ ಮತ್ತು ಮಾಧವ್ ಕಿರಣ್ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X