Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಪ್ರಜ್ವಲ್ ರೇವಣ್ಣ ಪ್ರಕರಣ ಖಂಡಿಸಿ...

ಪ್ರಜ್ವಲ್ ರೇವಣ್ಣ ಪ್ರಕರಣ ಖಂಡಿಸಿ ಮೇ.30 ರಂದು ಹಾಸನದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 May 2024 10:34 PM IST
share
ಪ್ರಜ್ವಲ್ ರೇವಣ್ಣ ಪ್ರಕರಣ  ಖಂಡಿಸಿ ಮೇ.30 ರಂದು ಹಾಸನದಲ್ಲಿ ಪ್ರತಿಭಟನೆ

ಮೈಸೂರು : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ಅಧಿಕಾರ, ಕೌಟುಂಬಿಕ ಹಿನ್ನೆಲೆ, ಜಾತಿ ಪ್ರಾಬಲ್ಯ ಬಳಸಿಕೊಂಡು ನೂರಾರು ಮಹಿಳೆಯರನ್ನು ತನ್ನ ವಿಕೃತ ಕಾಮಕ್ಕೆ ಬಳಸಿಕೊಂಡ ಘಟನೆ ಖಂಡಿಸಿ ಇದೇ ಮೇ 30 ರಂದು ಹಾಸನದಲ್ಲಿ ಅಲ್ಲಿನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಈ ಕುರಿತು ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಒಕ್ಕೂಟದ ಕೆ.ಆರ್.ಸುಮತಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮೇ.30 ರಂದು ಬೆಳಗ್ಗೆ 10.30ಕ್ಕೆ ಅಲ್ಲಿನ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಲಿದೆ. ಈ ವೇಳೆ, ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ರಾಜ್ಯ ಸರ್ಕಾರ ರೆಡ್ ಕಾರ್ನರ್ ನೋಟಿಸ್ ಹೊರಡಿಸಬೇಕು. ತ್ವರಿತವಾಗಿ ಆತನನ್ನು ದೇಶಕ್ಕೆ ಕರೆತರಬೇಕು. ಕೇಂದ್ರ ಸರಕಾರ ಆತನ ರಾಜತಾಂತ್ರಿಕ ಪಾಸ್‌ಪೋಟ್ ಮತ್ತು ವೀಸಾ ಕೂಡಲೇ ರದ್ದುಪಡಿಸಬೇಕು. ಆತನ ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಈ ವೇಳೆ ಒತ್ತಾಯಿಸಲಾಗುವುದು.

ಅಲ್ಲದೆ, ವಿಕೃತ ಲೈಂಗಿಕ ಹಗರಣದ ವಿಡಿಯೋಗಳನ್ನು ಮತ್ತು ಪೆನ್ ಡ್ರೈವ್ ನಲ್ಲಿರುವ ಚಿತ್ರಣಗಳನ್ನು ವಿವಿಧ ಸಂವಹನ ಮಾಧ್ಯಮ ಮೂಲಕ ಹಂಚುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ವಿಶೇಷ ತನಿಖಾ ದಳವು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೇ ನಿಸ್ಪಕ್ಷಪಾತ, ಪಾರದರ್ಶಕ ತನಿಖೆ ನಡೆಸಿ, ಆರೋಪಿಗಳ ವಿರುದ್ದ ಕ್ರಮ ಜರುಗಿಸಲು ಸರ್ಕಾರಕ್ಕೆ ಸೂಚಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ ವರದಿಯನ್ನು ಶೀಘ್ರವಾಗಿ ಬಿಡುಗಡೆಗೊಳಿಸಬೇಕು.

ಶಾಸಕ ರೇವಣ್ಣ ವಿರುದ್ಧವೂ ಲೈಂಗಿಕ ಕಿರುಕುಳ, ದೌರ್ಜನ್ಯದ ಪ್ರಕರಣ ದಾಖಲಾಗಿರುವ ಕಾರಣ ಶಾಸಕರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು. ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಹಾಸನಕ್ಕೆ ಭೇಟಿ ನೀಡಿ ದೌರ್ಜನ್ಯಕ್ಕೊಳಗಾದ ಮಹೀಳೆಯರಿಗೆ ಸಾರ್ವಜನಿಕವಾಗಿ ಸಾಂತ್ವನ ಹೇಳುವ ಮೂಲಕ ಆತ್ಮಸ್ಥೈರ್ಯ ತುಂಬಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿ.ಪಿ. ಬಸವರಾಜು, ಕೆ.ಆರ್. ಗೋಪಾಲಕೃಷ್ಣ, ಒಡನಾಡಿ ಸ್ಟ್ಯಾನ್ಲಿ,ಪ್ರೊ. ಭೂಮಿಗೌಡ, ಉಗ್ರ ನರಸಿಂಹೇಗೌಡ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X