Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. Arkalgud | ಸಾಲದ ಹಣ, ಚಿನ್ನಾಭರಣಕ್ಕಾಗಿ...

Arkalgud | ಸಾಲದ ಹಣ, ಚಿನ್ನಾಭರಣಕ್ಕಾಗಿ ವೃದ್ಧೆಯ ಹತ್ಯೆ: ಆರೋಪಿ ಬಂಧನ

ವಾರ್ತಾಭಾರತಿವಾರ್ತಾಭಾರತಿ13 Oct 2026 12:14 AM IST
share
Arkalgud | ಸಾಲದ ಹಣ, ಚಿನ್ನಾಭರಣಕ್ಕಾಗಿ ವೃದ್ಧೆಯ ಹತ್ಯೆ: ಆರೋಪಿ ಬಂಧನ

ಅರಕಲಗೂಡು : ಸಾಲವಾಗಿ ಪಡೆದಿದ್ದ 50 ಸಾವಿರ ರೂ. ಹಣ ವಾಪಸ್ ನೀಡದ ವಿಚಾರ ಹಾಗೂ ವೃದ್ಧೆಯ ಮೈಮೇಲಿದ್ದ ಚಿನ್ನಾಭರಣಗಳ ಆಸೆಗಾಗಿ ಅದೇ ಗ್ರಾಮದ ವ್ಯಕ್ತಿಯೊಬ್ಬ ಮಹಿಳೆಯನ್ನು ಹತ್ಯೆಗೈದು, ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ನಾಲೆಗೆ ಎಸೆದಿರುವ ಘಟನೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಸಮೀಪ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿ, ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಮಾಹಿತಿ ನೀಡಿದರು.

ಎಸ್ಪಿ ಕಚೇರಿ ಸಭಾಂಗಣದಲ್ಲಿ ಮಾಹಿತಿ ನೀಡಿದ ಅವರು, ಅತ್ತಿಮರದ ಕೊಪ್ಪಲು ಗ್ರಾಮದ ರಮೇಶ್ (58) ಬಂಧಿತ ಆರೋಪಿಯಾಗಿದ್ದು, ಹೂವಿನ ವ್ಯಾಪಾರಿ ಲಕ್ಷ್ಮಮ್ಮ (67) ಕೊಲೆಯಾದ ಮಹಿಳೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಲಕ್ಷ್ಮಮ್ಮ ಅವರು ರಮೇಶ್‌ನಿಂದ 50 ಸಾವಿರ ರೂ. ಸಾಲ ಪಡೆದಿದ್ದು, ಹಣವನ್ನು ವಾಪಸ್ ನೀಡದೆ ಸತಾಯಿಸುತ್ತಿದ್ದರು ಎನ್ನಲಾಗಿದೆ. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ರಮೇಶ್, ಅವರ ಚಿನ್ನಾಭರಣಗಳ ಮೇಲೂ ಕಣ್ಣಿಟ್ಟು ಹತ್ಯೆಗೆ ಸಂಚು ರೂಪಿಸಿದ್ದ ಎಂದರು.

ಲಕ್ಷ್ಮಮ್ಮ ಅವರಿಗೆ ಬೈಕ್‌ನಲ್ಲಿ ಡ್ರಾಪ್ ನೀಡುವುದಾಗಿ ನಂಬಿಸಿ ಬೆಟ್ಟದಹಳ್ಳಿ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಅವರ ಕಪಾಳಕ್ಕೆ ಹೊಡೆದು, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ನಂತರ ಅವರು ಧರಿಸಿದ್ದ ಚಿನ್ನದ ತಾಳಿ, ಕಾಸಿನ ಸರ, ವಾಲೆ, ಮಾಟಿ ಹಾಗೂ ಮೂರು ಉಂಗುರ ಸೇರಿದಂತೆ ಸುಮಾರು 120 ಗ್ರಾಂ ಚಿನ್ನಾಭರಣಗಳನ್ನು ದೋಚಿದ್ದಾನೆ ಎಂದು ಅವರು ಹೇಳಿದರು.

ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹವನ್ನು ತುಂಬಿ ನಾಲೆಗೆ ಎಸೆದಿದ್ದ ಎನ್ನಲಾಗಿದೆ. ದೋಚಿದ ಆಭರಣಗಳ ಪೈಕಿ ಒಂದು ಉಂಗುರವನ್ನು ಗಿರವಿ ಅಂಗಡಿಯಲ್ಲಿ ಅಡವಿಟ್ಟು ಹಣ ಪಡೆದಿದ್ದ. ಉಳಿದ ಚಿನ್ನಾಭರಣಗಳನ್ನು ಶುಂಠಿ ಬೆಳೆಯಲು ಗುತ್ತಿಗೆ ಪಡೆದಿದ್ದ ಜಮೀನಿನ ಬಳಿಯ ಹಳೆಯ ಕೋಣೆಯಲ್ಲಿ ಪ್ಲಾಸ್ಟಿಕ್ ಪೈಪ್‌ಗಳ ನಡುವೆ ಬಚ್ಚಿ ಟ್ಟಿದ್ದ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಪೊಲೀಸ್ ವಿಶೇಷ ತಂಡ ರಚಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags

Arkalgud
share
ವಾರ್ತಾಭಾರತಿ
ವಾರ್ತಾಭಾರತಿ
Next Story
X