Belur | ಕಡೇಗರ್ಜೆ ಗ್ರಾಮದಲ್ಲಿ 25ಕ್ಕೂ ಹೆಚ್ಚು ಕಾಡಾನೆಗಳ ಹಿಂಡು: ಸ್ಥಳೀಯರಲ್ಲಿ ಆತಂಕ

ಬೇಲೂರು: ತಾಲೂಕು ವ್ಯಾಪ್ತಿಯ ಕಡೇಗರ್ಜ ಗ್ರಾಮದಲ್ಲಿ 25 ಕ್ಕೂ ಹೆಚ್ಚುಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ರಸ್ತೆ ದಾಟುತ್ತಿರುವ ದೃಶ್ಯ ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.
ಗ್ರಾಮದ ಸಮೀಪದ ಅರಣ್ಯ ಪ್ರದೇಶದಿಂದ ಬಂದಿದ್ದ ಕಾಡಾನೆಗಳ ಹಿಂಡು ರಸ್ತೆ ದಾಟಿ ಮತ್ತೊಂದು ಭಾಗಕ್ಕೆ ಸಾಗುತ್ತಿರುವುದನ್ನು ಸಾರ್ವಜನಿಕರು ಗಮನಿಸಿದ್ದು, ಕೆಲವರು ತಮ್ಮ ಮೊಬೈಲ್‌ಗಳಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಏಕಕಾಲದಲ್ಲಿ ಇಷ್ಟೊಂದು ಸಂಖ್ಯೆಯ ಕಾಡಾನೆಗಳು ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ತಮ್ಮ ಬೆಳೆ ಹಾಗೂ ಆಸ್ತಿಪಾಸ್ತಿಗಳ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದು, ಸಾರ್ವಜನಿಕರು ಕಾಡಾನೆಗಳ ಸಮೀಪ ಹೋಗದೇ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.
ಗ್ರಾಮಸ್ಥರು ಹಾಗೂ ವಾಹನ ಸವಾರರು ರಾತ್ರಿ ವೇಳೆಯಲ್ಲಿ ಹೆಚ್ಚಿನ ಜಾಗರೂಕತೆ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
Next Story




