ಬೇಲೂರು : ಟಿವಿಎಸ್ ಎಕ್ಸೆಲ್‌ಗೆ ಕಾರು ಢಿಕ್ಕಿ: ಇಬ್ಬರು ಮೃತ್ಯು

ಬೇಲೂರು: ಟಿವಿಎಸ್ ಎಕ್ಸೆಲ್‌ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಬೇಲೂರು ತಾಲೂಕಿನ ತೊಳಲು ಗ್ರಾಮದ ಸಮೀಪದ ಮತ್ತಿಹಳ್ಳಿ ಬಳಿ ನಡೆದಿದೆ.
ಮೃತರನ್ನು ಮತ್ತಿಹಳ್ಳಿ ಗ್ರಾಮದ ಶರತ್ (21) ಹಾಗೂ ಅಶೋಕ (20) ಎಂದು ಗುರುತಿಸಲಾಗಿದೆ.
ಇಬ್ಬರು ಯುವಕರು ಟಿವಿಎಸ್ ಎಕ್ಸೆಲ್‌ನಲ್ಲಿ ಚೀಕನಹಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ, ಚೀಕನಹಳ್ಳಿ ಕಡೆಯಿಂದ ಬೇಲೂರು ಕಡೆಗೆ ಬರುತ್ತಿದ್ದ ಕಾರು ವೇಗವಾಗಿ ಬಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಶರತ್ ಮತ್ತು ಅಶೋಕ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
Next Story




