ಬೇಲೂರು | ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆ ಹಾವಳಿ: ಕಾಫಿ, ಮೆಣಸು, ಅಡಿಕೆ ಬೆಳೆಗೆ ಹಾನಿ

ಬೇಲೂರು: ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ತೀವ್ರವಾಗಿದ್ದು, ತೋಟಗಳಿಗೆ ನುಗ್ಗಿ ಕಾಫಿ, ಮೆಣಸು ಹಾಗೂ ಅಡಿಕೆ ಬೆಳೆಗಳಿಗೆ ಹಾನಿಯುಂಟು ಮಾಡಿದೆ.
ಗ್ರಾಮದ ದಯಾನಂದ ಎಂಬ ರೈತನ ತೋಟಕ್ಕೆ ತಡರಾತ್ರಿ ಕಾಡಾನೆ ನುಗ್ಗಿ ಕಾಫಿ, ಮೆಣಸು ಹಾಗೂ ಅಡಿಕೆ ಬೆಳೆಗಳನ್ನು ಸಂಪೂರ್ಣವಾಗಿ ನಾಶಪಡಿಸಿದೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ದಯಾನಂದ ಅಳಲು ತೋಡಿಕೊಂಡಿದ್ದಾರೆ.
ಕಾಡಾನೆಗಳು ತೋಟದೊಳಗೆ ನುಗ್ಗಿ ಗಿಡಗಳನ್ನು ಮುರಿದು ಹಾಕಿ, ಅಡಿಕೆ ಮರಗಳನ್ನು ಧ್ವಂಸಗೊಳಿಸಿದ್ದು, ಮೆಣಸು ಬಳ್ಳಿಗಳನ್ನು ಸಂಪೂರ್ಣವಾಗಿ ನಾಶಮಾಡಿವೆ.
ಕಣಗುಪ್ಪೆ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಇತ್ತೀಚೆಗೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಭಯಭೀತರಾಗಿದ್ದಾರೆ. ರಾತ್ರಿಯ ಸಮಯದಲ್ಲಿ ತೋಟಗಳಿಗೆ ಹೋಗಲು ಕೂಡ ಜನರು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ.
ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು, ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಹಾಗೂ ಕಾಡಾನೆಯನ್ನು ಸುರಕ್ಷಿತವಾಗಿ ಸ್ಥಳಾಂತರಿ ಸಬೇಕು ಎಂದು ಒತ್ತಾಯಿಸಿ ದ್ದಾರೆ. ಜೊತೆಗೆ ನಷ್ಟಕ್ಕೊಳ ಗಾದ ರೈತರಿಗೆ ತಕ್ಷಣವೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.







