Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಮುಖ್ಯಮಂತ್ರಿಗಳು ಕುರ್ಚಿ...

ಮುಖ್ಯಮಂತ್ರಿಗಳು ಕುರ್ಚಿ ಬಲಪಡಿಸಿಕೊಳ್ಳೋಕೆ ಹಾಸನದಲ್ಲಿ ಸಮಾವೇಶ ಮಾಡುತ್ತಿದ್ದಾರೆ: ನಿಖಿಲ್‌ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ30 Nov 2024 2:01 PM IST
share
Photo of Nikhil Kumarswamy

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳು ಕುರ್ಚಿ ಬಲಪಡಿಸಿಕೊಳ್ಳೋಕೆ ಹಾಸನದಲ್ಲಿ ಸಮಾವೇಶ ಮಾಡುತ್ತಿದ್ದಾರೆ. ನಿನ್ನೆ ದಿನ ಸ್ವ ಪಕ್ಷದಲ್ಲಿಯೇ ಪಕ್ಷವನ್ನು ಬಿಟ್ಟು ವೈಯಕ್ತಿಕವಾಗಿ ಸಮಾವೇಶ ಮಾಡಲಾಗುತ್ತಿದೆ ಎಂದು ಆಕ್ಷೇಪ ಬಂದಿದೆ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ಜೆಪಿ ನಗರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರ ಗಮನ ಸೆಳೆಯೋಕೆ ಶಕ್ತಿ ಪ್ರದರ್ಶನ ಸಮಾವೇಶ ಮಾಡ್ತಿದ್ದಾರೆ ಅನ್ನೋದು ನಮ್ಮ ಅನಿಸಿಕೆ. ಜೆಡಿಎಸ್ ಮತ್ತು ಬಿಜೆಪಿಗೆ ಈ ಸಮಾವೇಶದ ಮೂಲಕ ಏನು ಸಂದೇಶ ಕೊಡೋಕೆ ಅಲ್ಲ ಎಂದರು.

ಹಾಸನದಲ್ಲಿ ಸಮಾವೇಶ ಮಾಡುವುದರಿಂದ ಜೆಡಿಎಸ್ ಗೆ ಹಿನ್ನಡೆ ವಿಚಾರಕ್ಕೆ ಮಾತನಾಡಿದ ಅವರು, ಸಮಾವೇಶ ಯಾರು ಎಲ್ಲಿ ಬೇಕಾದರು ಮಾಡಬಹುದು. ಇದರಿಂದ ಹಿನ್ನಡೆ ಆಗುವ ಪ್ರಶ್ನೆ ಇಲ್ಲ.ಇನ್ನು ಚುನಾವಣೆಗೆ ಮೂರುವರೆ ವರ್ಷ ಬಾಕಿ ಇದೆ ಸಮಾವೇಶ ಯಾವ ಪುರುಷಾರ್ಥಕ್ಕೆ ಮಾಡ್ತಿದ್ದಾರೆ ಗೊತ್ತಿಲ್ಲ ಎಂದರು.

ಸರ್ಕಾರದ ಸಾಧನೆಗಳು ಏನಿದೆ ಎಂಬುವುದು ಜನ ಸಾಮಾನ್ಯರ ಪ್ರಶ್ನೆ. ಈ ಸರ್ಕಾರ ಭ್ರಷ್ಟಾಚಾರ, ಹಗರಣಗಳಲ್ಲಿ ಮುಳುಗಿದೆ. ಇತ್ತೀಚಿನ ದಿನಗಳಲ್ಲಿ ಹೊಸಪೇಟೆ ಕಾಂಗ್ರೆಸ್ ಶಾಸಕರೇ ಎರಡು ಗ್ಯಾರಂಟಿ ಕಡಿಮೆ ಮಾಡಿ ನಮಗೆ ಅನುದಾನ ಕೊಡಿ ಎಂದು ಹೇಳಿದ್ದಾರೆ. ಸರ್ಕಾರದ ವೈಫಲ್ಯಗಳನ್ನು ಮುಚ್ಚಲು ಈ ಸಮಾವೇಶ ಮಾಡ್ತಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಒಂದೂವರೆ ವರ್ಷ ಆಗಿದೆ . ಕಾಂಗ್ರೆಸ್ ಶಾಸಕರೇ ಪ್ರತಿಕ್ರಿಯೆ ಕೊಡ್ತಾ ಇರೋದನ್ನ ನೋಡಿದ್ದೇವೆ.ಅನುದಾನ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ. ಒಂದು ರೂಪಾಯಿ ಅನುದಾನ ಬಿಡುಗಡೆ ಆಗಿಲ್ಲ. ನಯಾ ಪೈಸೆ ಇವತ್ತು ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಕೊಡ್ತಾ ಇಲ್ಲ.ಈ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜೆಡಿಎಸ್ ಶಾಸಕರನ್ನ ಕಾಂಗ್ರೆಸ್ ಗೆ ಕರೆತರುವ ಕುರಿತು ಸಿಪಿ ಯೋಗೇಶ್ವರ್ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಅತಿ ಹೆಚ್ಚು ಪ್ಯಾಕೇಜ್ ಎಲ್ಲಿ ಸಿಗುತ್ತೆ ಅಂತ ಕಾಂಗ್ರೆಸ್ ಗೆ ಹೋಗಿದ್ದಾರೆ. ಎಷ್ಟು ದಿನ ಕಾಂಗ್ರೆಸ್ ನಲ್ಲಿ ಉಳಿಯುತ್ತಾರೆ ಅನ್ನೋದು ಪ್ರಶ್ನೆ. ಅವರನ್ನ ನಂಬಿಕೊಂಡು ನಮ್ಮ ಶಾಸಕರು ಕಾಂಗ್ರೆಸ್ ಗೆ ಹೋಗುವ ಪರಿಸ್ಥಿತಿ ಇಲ್ಲ. ನಮ್ಮ ಪಕ್ಷದ ಶಾಸಕರು ರಾಜಕೀಯ ಹೊರತುಪಡಿಸಿ ಭಾವನಾತ್ಮಕವಾದ ರಕ್ತಗತ ಸಂಪರ್ಕ ಹೊಂದುಕೊಂಡಿದ್ದಾರೆ. ನನ್ನ ಜೊತೆ ನಮ್ಮ ಶಾಸಕರು ನಿರಂತರ ಸಂಪರ್ಕದಲ್ಲಿದ್ದಾರೆ ಕ್ಷೇತ್ರದ ಅನುದಾನ ಸಮಸ್ಯೆ ಬಗ್ಗೆಯೂ ಚರ್ಚೆ ಮಾಡುತ್ತಿದ್ದಾರೆ. ನಮ್ಮ ಯಾವುದೇ ಶಾಸಕರು ಅಸಮಾಧಾನಿತರು ಇಲ್ಲ. ಅಸಮಾಧಾನಿತರು ಕಾಂಗ್ರೆಸ್ ನಲ್ಲಿ ಹೆಚ್ಚಾಗಿದ್ದಾರೆ.ಕಾಂಗ್ರೆಸ್ ನಲ್ಲಿಯೇ ಆ ಪರಿಸ್ಥಿತಿ ಇದೆ.139 ಶಾಸಕರನ್ನ ಕಾಂಗ್ರೆಸ್ ಪಕ್ಷ ಉಳಿಸಿಕೊಳ್ಳುವ ಕೆಲಸ ಮಾಡಲಿ ಎಂದರು.

ಒಕ್ಕಲಿಗ ಸ್ವಾಮೀಜಿ ವಿರುದ್ಧ ಎಫ್ಐಆರ್, ನೋಟಿಸ್ ವಿಚಾರಕ್ಕೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದ ಮೇಲೆ ಒಂದು ಸಮುದಾಯ ಓಲೈಕೆ ಮಾಡಿಕೊಳ್ಳೋಕೆ ಮತ್ತೊಂದು ಸಮುದಾಯವನ್ನ ಟಾರ್ಗೆಟ್ ಮಾಡ್ಕೊಂಡು ಹೋಗ್ತಾ ಇದ್ದಾರೆ. ಇದಕ್ಕೆ ಮುಂದಿನ ದಿನಗಳಲ್ಲಿ ಜನತೆ ಉತ್ತರ ಕೊಡ್ತಾರೆ ಕಾದು ನೋಡಬೇಕು ಎಂದು ಹೇಳಿದರು.

ಜಿ.ಟಿ. ದೇವೇಗೌಡರ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ಇದು ಇದೇ ಮೊದಲೇನು ಅಲ್ಲ. ಈ ಹಿಂದೆ ವೈಮನಸ್ಸು ಬಂದಾಗ ನಾನೇ ಸೇತುವೆಯಾಗಿ ಕೆಲಸ ಮಾಡಿದ್ದೀನಿ. ಅವರನ್ನ ಮತ್ತೆ ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ‌ ಈ ಹಿಂದೆ ಪ್ರಮಾಣಿಕ ಕೆಲಸ ಮಾಡಿದ್ದೇನೆ. ಈಗಲೂ ಸಣ್ಣಪುಟ್ಟ ವೈಮನಸ್ಸನ್ನು ಹೊರ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಅದನ್ನ ಪಕ್ಷದ ಹಿರಿಯ ಶಾಸಕರು, ನಾವೆಲ್ಲ ಸೇರಿ‌ ಸರಿ ಮಾಡುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X