Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಬೇಲೂರಲ್ಲಿ ವ್ಯಾಪಾರಿ ಆತ್ಮಹತ್ಯೆ; ಶಾಸಕರ...

ಬೇಲೂರಲ್ಲಿ ವ್ಯಾಪಾರಿ ಆತ್ಮಹತ್ಯೆ; ಶಾಸಕರ ವಿರುದ್ಧ ಎಫ್‌ಐಆರ್

ವಾರ್ತಾಭಾರತಿವಾರ್ತಾಭಾರತಿ15 Oct 2026 12:34 AM IST
share
ಬೇಲೂರಲ್ಲಿ ವ್ಯಾಪಾರಿ ಆತ್ಮಹತ್ಯೆ; ಶಾಸಕರ ವಿರುದ್ಧ ಎಫ್‌ಐಆರ್

ಬೇಲೂರು : ಪಟ್ಟಣದಲ್ಲಿ ಹಲವು ವರ್ಷಗಳಿಂದ ವ್ಯಾಪಾರ ಮಾಡಿಕೊಂಡಿದ್ದ ನಾಗೇಶ್ ಎ.ಆರ್. ಎಂಬವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಶಾಸಕ ಎಚ್.ಕೆ. ಸುರೇಶ್ ಸೇರಿದಂತೆ ಪುರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಬೇಲೂರು ಪುರಸಭೆಗೆ ಸೇರಿದ ಮಳಿಗೆ ಸಂಖ್ಯೆ3ನ್ನು ಉಮಾ ಎಂಬವರು ಬಿಡ್‌ನಲ್ಲಿ ಪಡೆದಿದ್ದರು. ಆದರೆ ಕೆಲ ವರ್ಷಗಳ ಹಿಂದೆ ಉಮಾ ಪತಿ ನಿಧನರಾಗಿದ್ದಾರೆ. ನಂತರ ಅನಾರೋಗ್ಯ ಹಿನ್ನೆಲೆಯಲ್ಲಿ ಉಮಾ ಬೆಂಗಳೂರಿನಲ್ಲಿ ನೆಲೆಸಿದ್ದರು. ದಿನಸಿ ಅಂಗಡಿಯನ್ನು ತಮ್ಮ ಕುಟುಂಬದ ಆತ್ಮೀಯರಾಗಿದ್ದ ನಾಗೇಶ್ ಅವರಿಗೆ ಉಮಾ ವಹಿಸಿಕೊಟ್ಟಿದ್ದರು. ಬಳಿಕ ಸುಮಾರು 10 ಲಕ್ಷ ರೂ.ಗೂ ಅಧಿಕ ಬಂಡವಾಳ ಹೂಡಿ ನಾಗೇಶ್ ವ್ಯಾಪಾರ ನಡೆಸುತ್ತಾ, ನಿಗದಿತ ಹಣವನ್ನು ಉಮಾ ಅವರಿಗೆ ಕಳುಹಿಸುತ್ತಿದ್ದರು.

ಈ ನಡುವೆ ಮಳಿಗೆಗಳ ಹೊಸ ಹರಾಜಿಗೆ ಪುರಸಭೆ ಮುಂದಾಗಿತ್ತು. ಇದರ ವಿರುದ್ಧ ವ್ಯಾಪಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ಆದೇಶ ಮತ್ತು ಸಾರ್ವಜನಿಕ ಬಹಿರಂಗ ಹರಾಜು ಪೂರ್ಣವಾಗುವವರೆಗೆ ಸದರಿ ಮಳಿಗೆ ಖಾಲಿ ಮಾಡದಂತೆ ಆದೇಶಿಸಿತ್ತು.

ಈ ನಡುವೆ ಜು.7 ರಂದು ಮಳಿಗೆ ಖಾಲಿ ಮಾಡುವಂತೆ ಹೇಳಿ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಏಕಾಏಕಿ ಬೀಗ ಜಡಿದಿದ್ದರು. ನಂತರ ಹಲವು ಬಾರಿ ಪುರಸಭೆ ಅಧಿಕಾರಿಗಳು ಶಾಸಕ ಸುರೇಶ್ ಅವರು ಬಾಗಿಲು ತೆರೆಯದಂತೆ ಹೇಳಿದ್ದಾರೆ. ಹಾಗಾಗಿ ತೆರೆಯಲ್ಲ, ಬೇಕಿದ್ದರೆ ಶಾಸಕರ ಬಳಿಯೇ ಹೋಗಿ ಮಾತನಾಡಿ ಎಂದು ಹೇಳಿದ್ದರು.

ಮೊದಲೇ ಕೃಷಿಗೆ, ಕುರಿಫಾರಂ, ಕಾರು ಖರೀದಿಗಾಗಿ ಸಾಕಷ್ಟು ಸಾಲ ಮಾಡಿದ್ದ ನಾಗೇಶ್, ಮಳಿಗೆ ವ್ಯಾಪಾರವೂ ಇಲ್ಲದ ಕಾರಣ ಮನ ನೊಂದಿದ್ದರು. ಅ.12 ರಂದು ಮನೆಯಲ್ಲಿ ಒಬ್ಬರೇ ಇದ್ದವೇಳೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಅದರಲ್ಲಿ ಶಾಸಕ ಸುರೇಶ್ ಅವರು, ಮಳಿಗೆ ಕೀ ಕೊಡಿಸಲು ರಾಜಕೀಯ ಮಾಡಿದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ನಾಗೇಶ್ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ.

ತಮ್ಮ ಸಾವಿನ ಬಳಿಕವಾದರೂ ರಾಜಕೀಯ ಮಾಡದೆ ಮಳಿಗೆ ಕೀಯನ್ನು ಮಕ್ಕಳಿಗೆ ಕೊಡಿಸುವಂತೆ ಮನವಿ ಮಾಡಿದ್ದರು ಎಂದು ತಿಳಿದುಬಂದಿದೆ.

ಡೆತ್‌ನೋಟ್ ಆಧರಿಸಿ ಪುರಸಭೆ ಆರ್‌ಐ, ಆರ್‌ಒ, ಆರೋಗ್ಯ ನಿರೀಕ್ಷಕ ಲೋಹಿತ್, ಬಿಲ್ ಕಲೆಕ್ಟರ್, ಇತರೆ ಸಿಬ್ಬಂದಿ, ಪುರಸಭೆ ಸಿಇಒ ಹಾಗೂ ಶಾಸಕ ಎಚ್.ಕೆ.ಸುರೇಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಶಾಸಕರು ಏಳನೇ ಆರೋಪಿಯಾಗಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags

FIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X