Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ​‘ಗೌರವಯುತವಾಗಿ ಕೊಡುವುದು ಧರ್ಮ’ ಹೇಳಿಕೆ...

​‘ಗೌರವಯುತವಾಗಿ ಕೊಡುವುದು ಧರ್ಮ’ ಹೇಳಿಕೆ ವಿವಾದ: ಸಚಿವ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು

ವಾರ್ತಾಭಾರತಿವಾರ್ತಾಭಾರತಿ22 Sept 2026 11:08 AM IST
share
​‘ಗೌರವಯುತವಾಗಿ ಕೊಡುವುದು ಧರ್ಮ’ ಹೇಳಿಕೆ ವಿವಾದ: ಸಚಿವ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು

ಹಾಸನ: ಜನಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸಚಿವ ಕೆ.ಎಂ.ಶಿವಲಿಂಗೇಗೌಡ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಅವರ ವಿರುದ್ಧ ಹಾಸನ ಜಿಲ್ಲಾ ಲೋಕಾಯುಕ್ತ ಕಚೇರಿಗೆ ವಕೀಲರು ದೂರು ಸಲ್ಲಿಸಿದ್ದಾರೆ.

ವಕೀಲ ಎಂ.ಡಿ. ಗೋಪಾಲಗೌಡ ನೇತೃತ್ವದ ವಕೀಲರ ನಿಯೋಗ ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನಲ್ಲಿ, ಸಚಿವರು ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡುವಂತೆ ಬಹಿರಂಗವಾಗಿ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ದೂರಿನಲ್ಲಿ ಸಚಿವರ ಹೇಳಿಕೆಯು ಸಾರ್ವಜನಿಕ ಸೇವೆಯಲ್ಲಿ ಭ್ರಷ್ಟಾಚಾರವನ್ನು ಉತ್ತೇಜಿಸುವಂತಿದ್ದು, ಲಂಚ ಪಡೆಯುವುದು ಹಾಗೂ ನೀಡುವುದನ್ನು ಸಮರ್ಥಿಸುವ ರೀತಿಯಲ್ಲಿದೆ ಎಂದು ಆಕ್ಷೇಪಿಸಲಾಗಿದೆ.

ಹೇಳಿಕೆಯಲ್ಲೇನಿತ್ತು? :

ಸಕಲೇಶಪುರದಲ್ಲಿ ನಡೆದ ಜನಸೇವಾ ಆಂದೋಲನ ಸಭೆಯಲ್ಲಿ ಸಚಿವ ಶಿವಲಿಂಗೇಗೌಡ ಮಾತನಾಡುವ ವೇಳೆ, “ಅಧಿಕಾರಿಗಳು ಬಲವಂತವಾಗಿ ಲಂಚ ವಸೂಲಿ ಮಾಡುವುದು ತಪ್ಪು. ಆದರೆ ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಸಾರ್ವಜನಿಕರು ಗೌರವದಿಂದ ಏನಾದರೂ ನೀಡುವುದು ಅವರ ಕರ್ತವ್ಯ” ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ. ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ರಾಜ್ಯಪಾಲರಿಗೂ ದೂರು :

ಇದೇ ವಿಷಯಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ, 1988ರ ಸೆಕ್ಷನ್ 7, 8 ಮತ್ತು 12ರ ಅಡಿಯಲ್ಲಿ ಸಚಿವರ ವಿರುದ್ಧ ಕ್ರಮ ಕೈಗೊಂಡು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಚಿವರ ಸ್ಪಷ್ಟನೆ :

ವಿವಾದದ ಕುರಿತು ಪ್ರತಿಕ್ರಿಯಿಸಿರುವ ಸಚಿವ ಕೆ.ಎಂ.ಶಿವಲಿಂಗೇಗೌಡ, “ನಾನು ಅಧಿಕಾರಿಗಳಿಗೆ ಲಂಚ ನೀಡುವಂತೆ ಹೇಳಿಲ್ಲ. ರೈತರು ಮತ್ತು ಅಧಿಕಾರಿಗಳ ನಡುವಿನ ಚರ್ಚೆಯ ವೇಳೆ ಅಧಿಕಾರಿಗಳನ್ನು ಗೌರವದಿಂದ ಕಾಣಬೇಕು ಎಂದಷ್ಟೇ ಹೇಳಿದ್ದೇನೆ. ಲಂಚ ನೀಡಲು ಪ್ರಚೋದನೆ ನೀಡಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

Tags

LokayuktaK.M.Shivalingegowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X