Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ರೈತರ ಸಮಸ್ಯೆಗಳಿಗಿಂತ ಮನೆ ಜಗಳ...

ರೈತರ ಸಮಸ್ಯೆಗಳಿಗಿಂತ ಮನೆ ಜಗಳ ಮಾಧ್ಯಮಗಳಿಗೆ ಮುಖ್ಯವಾಗಿರುವುದು ದುರಂತ : ಕೆ.ವಿ.ಪ್ರಭಾಕರ್

ವಾರ್ತಾಭಾರತಿವಾರ್ತಾಭಾರತಿ13 Sept 2024 9:36 PM IST
share
ರೈತರ ಸಮಸ್ಯೆಗಳಿಗಿಂತ ಮನೆ ಜಗಳ ಮಾಧ್ಯಮಗಳಿಗೆ ಮುಖ್ಯವಾಗಿರುವುದು ದುರಂತ : ಕೆ.ವಿ.ಪ್ರಭಾಕರ್

ಹಾವೇರಿ: ‘ಸುದ್ದಿ ಮಾಧ್ಯಮಗಳಿಗೆ ರೈತರ ಸಮಸ್ಯೆಗಳಿಗಿಂತ ಮನೆ ಜಗಳ ಮುಖ್ಯವಾಗಿರುವುದು ನಿಜಕ್ಕೂ ದುರಂತ’ ಎಂದು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಇಂದಿಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ತಾಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನ ಮತ್ತು ಜಿಲ್ಲಾ ಘಕದ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಪೊರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ ಎಂದು ಕರೆ ನೀಡಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯದ ಹೊಸ್ತಿಲಲ್ಲಿ ದೇಶದ ಅಭಿವೃದ್ಧಿ ಪತ್ರಿಕೋದ್ಯಮದ ಆದ್ಯತೆ ಆಗಿತ್ತು. ಗಾಂಧಿ, ಅಂಬೇಡ್ಕರ್ ಅವರು ಪತ್ರಿಕೆಗಳನ್ನು ನಡೆಸಿ ನಮ್ಮಂತಹ ದೇಶಕ್ಕೆ ಯಾವ ರೀತಿಯ ಪತ್ರಿಕೋದ್ಯಮ ಬೇಕು ಎನ್ನುವುದಕ್ಕೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಟಿಆರ್‍ಪಿ ರಭಸದಲ್ಲಿ ಈ ಮಾದರಿಗಳು ಕೊಚ್ಚಿಹೋಗಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ತಂತ್ರಜ್ಞಾನದ ವೇಗ ಕೃತಕ ಬುದ್ದಿಮತ್ತೆಯ ಕಾಲದಲ್ಲಿ ಪತ್ರಿಕಾವೃತ್ತಿ ಹೊಸ ಸವಾಲು ಮತ್ತು ಅವಕಾಶಗಳಿಗೆ ತೆರೆದುಕೊಳ್ಳುತ್ತಿದೆ. ಪತ್ರಕರ್ತರು ಅಷ್ಟೇ ವೇಗದಲ್ಲಿ ತಮ್ಮನ್ನು ತಾವು ಉನ್ನತೀಕರಿಸಿಕೊಳ್ಳಬೇಕಿದೆ ಎಂದ ಅವರು, ವಿದ್ಯಾರ್ಥಿಗಳಾದವರು ತಂದೆ-ತಾಯಿ ಮಾತು ಕೇಳಬೇಕು. ಮನೆಯೇ ಮೊದಲ ಪಾಠಶಾಲೆ ಎನ್ನುವುದು ಎಷ್ಟು ಅರ್ಥಪೂರ್ಣ ಎನ್ನುವುದನ್ನು ನೋಬೆಲ್ ಪುರಸ್ಕೃತ ವಿಜ್ಞಾನಿ ಐನ್‍ಸ್ಟೀನ್ ಬದುಕಿನ ಘಟನೆಗಳನ್ನು ಉದಾಹರಿಸಿ ಮಾತನಾಡಿದರು.

ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಶಾಸಕ ಶಿವಣ್ಣ ಸೇರಿದಂತೆ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

hasana
share
ವಾರ್ತಾಭಾರತಿ
ವಾರ್ತಾಭಾರತಿ
Next Story
X