Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಹಾಸನ | ಮುಸ್ಲಿಂ ವಿದ್ಯಾರ್ಥಿಗಳಿಗೆ ಗಡ್ಡ...

ಹಾಸನ | ಮುಸ್ಲಿಂ ವಿದ್ಯಾರ್ಥಿಗಳಿಗೆ ಗಡ್ಡ ಬೋಳಿಸುವಂತೆ ಪ್ರಾಂಶುಪಾಲರ ತಾಕೀತು : ಆರೋಪ

ಸಿಎಂ ಕಚೇರಿ ಮಧ್ಯಪ್ರವೇಶ ಬಳಿಕ ಪ್ರಕರಣ ಸುಖಾಂತ್ಯ

ವಾರ್ತಾಭಾರತಿವಾರ್ತಾಭಾರತಿ10 Nov 2024 4:37 PM IST
share
ಹಾಸನ | ಮುಸ್ಲಿಂ ವಿದ್ಯಾರ್ಥಿಗಳಿಗೆ ಗಡ್ಡ ಬೋಳಿಸುವಂತೆ ಪ್ರಾಂಶುಪಾಲರ ತಾಕೀತು : ಆರೋಪ

ಹಾಸನ : ಜಮ್ಮು-ಕಾಶ್ಮೀರ ಮೂಲದ ಮುಸ್ಲಿಂ ವಿದ್ಯಾರ್ಥಿಗಳಿಗೆ ಗಡ್ಡ ಬೋಳಿಸುವಂತೆ ಹೊಳೆನರಸೀಪುರದ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರು ತಾಕೀತು ಮಾಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿ ಆಕ್ರೋಶ ಹೊರಹಾಕಿದ್ದರು.

ಪಿಎಂಎಎಸ್ ಯೋಜನೆಯಡಿ ಜಮ್ಮು-ಕಾಶ್ಮೀರದಿಂದ ಹೊಳೆನರಸೀಪುರಕ್ಕೆ ವ್ಯಾಸಂಗಕ್ಕಾಗಿ ಬಂದಿರುವ ಯುವಕರು ಶನಿವಾರ ಜಮ್ಮ-ಕಾಶ್ಮೀರ ಸ್ಪೂಡೆಂಟ್ಸ್ ಅಸೋಸಿಯೇಷನ್‌ಗೆ ಪತ್ರ ಬರೆದು ತಮಗೆ ಗಡ್ಡ ಬೋಳಿಸಲು ಪ್ರಾಂಶುಪಾಲರು ಸೂಚಿಸಿದ್ದಾರೆ ಎಂದು ದೂರಿದ್ದರು. ಬಳಿಕ ಪತ್ರದ ಪ್ರತಿಯನ್ನು ಎಕ್ಸ್‌ನಲ್ಲಿ ಟ್ವೀಟ್ ಕೂಡ ಮಾಡಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಈ ಸಂಬಂಧ ಜಮ್ಮು-ಕಾಶ್ಮೀರ ಸ್ಪೂಡೆಂಟ್ಸ್ ಅಸೋಸಿಯೇಷನ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕೂಡಲೇ ಮಧ್ಯಪ್ರವೇಶಿಸುವಂತೆ ಆಗ್ರಹಿಸಿತ್ತು. ಈ ಸಂಬಂಧ ಸಿಎಂ ಕಚೇರಿ ಕೂಡ ಕಾಲೇಜಿನಿಂದ ಮಾಹಿತಿ ನೀಡುವಂತೆ ಸೂಚಿಸಿತ್ತು.

ವಿಷಯ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಪ್ರಾಂಶುಪಾಲ ಚಂದ್ರಶೇಖರ್, ʼಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳು ಸ್ವಚ್ಛತೆ ಕಾಪಾಡುತ್ತಿರಲಿಲ್ಲ. ಹೀಗಾಗಿ ಕಾಲೇಜಿನ ಶಿಸ್ತು ನಿಯಮ ಪಾಲಿಸಲು ಹೇಳಿದ್ದೆವುʼ ಎಂದು ಸ್ಪಷ್ಟನೆ ನೀಡಿದರು.

ಇದರಿಂದ ಅಸಮಾಧಾನಗೊಂಡ ವಿದ್ಯಾರ್ಥಿಗಳು ನಾವೂ ಎಲ್ಲ ವಿದ್ಯಾರ್ಥಿಗಳಂತೆ ಶಿಸ್ತು ಪಾಲನೆ ಮಾಡುತ್ತಿದ್ದೇವೆ. ಸ್ವಚ್ಛ ಬಟ್ಟೆಗಳನ್ನೇ ಧರಿಸುತ್ತೇವೆ. ನಮ್ಮ ಕೊಠಡಿಗಳನ್ನು ಬೇಕಾದರೆ ಪರಿಶೀಲಿಸಲಿ ಎಂದು ತಿರುಗೇಟು ನೀಡಿದರು.

ಬಳಿಕ ಕಾಲೇಜಿನ ಪ್ರಮುಖರು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.

ʼನರ್ಸಿಂಗ್ ಕಾಲೇಜು ನಿಯಮಾವಳಿಯಂತೆ ಶಿಸ್ತಿನಿಂದ ಇರಬೇಕು ಎಂದು ಹೇಳಿದ್ದಾರೆ. ಅವರು ನೀಡಿದ ಸೂಚನೆ ಸೂಕ್ಷ್ಮವಾದ ವಿಚಾರವಾಗಿತ್ತು. ಇದನ್ನು ದೊಡ್ಡ ವಿಷಯ ಮಾಡುವುದು ಬೇಡ, ಮುಂದೆ ನಿಮ್ಮ ವಿದ್ಯಾಭ್ಯಾಸಕ್ಕೆ ತೊಂದರೆ ಆಗುವುದಿಲ್ಲ. ಇಲ್ಲಿ ನೀವು ಸುರಕ್ಷಿತವಾಗಿದ್ದೀರಿ ಎಂದು ಪ್ರಾಂಶುಪಾಲರು ತಿಳಿಸಿದ್ದು, ಈ ವಿಷಯವನ್ನು ಇಲ್ಲಿಗೆ ಕೈ ಬಿಡುತ್ತಿದ್ದೇವೆʼ ಎಂದು ವಿದ್ಯಾರ್ಥಿಗಳು ಹೇಳಿಕೆ ನೀಡುವ ಮೂಲಕ ವಿವಾದ ಇತ್ಯರ್ಥಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X