ಭೂಕುಸಿತ ಹಿನ್ನೆಲೆ | ರಾಷ್ಟ್ರೀಯ ಹೆದ್ದಾರಿ-75 ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

ಹಾಸನ : ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮಾರೇನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರದ ಮಾರ್ಗವನ್ನು ತಾತ್ಕಾಲಿಕವಾಗಿ ಬದಲಿಸಲಾಗಿದೆ.
ಜಿಲ್ಲಾಧಿಕಾರಿ ಡಾ.ಲತಾ ಕುಮಾರಿ ಅವರು ಪ್ರಕಟಿಸಿರುವ ಸೂಚನೆಯಂತೆ, ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ಎಲ್ಲಾ ವಾಹನಗಳು ಈಗ ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮಾಡಿ ಘಾಟ್ ಮೂಲಕ ಸಂಚರಿಸಬೇಕಾಗುತ್ತದೆ. ಭೂಕುಸಿತದಿಂದಾಗಿ ಎನ್‌ಎಚ್ 75 ರ ಮಾರ್ಗ ಅಡೆತಡೆಗೊಂಡಿರುವುದರಿಂದ ಈ ತಾತ್ಕಾಲಿಕ ಕ್ರಮ ಕೈಗೊಳ್ಳಲಾಗಿದೆ.
ಅದೇ ರೀತಿಯಾಗಿ, ಮಂಗಳೂರಿನಿಂದ ಬರುವ ವಾಹನಗಳು ಸಂಪಾಜೆ ಮತ್ತು ಚಾರ್ಮಾಡಿ ಘಾಟ್ ಮಾರ್ಗದ ಮೂಲಕ ಹಾಸನಕ್ಕೆ ಸಾಗಬೇಕಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story





