Hassan | ವಿದ್ಯಾರ್ಥಿ ಆತ್ಮಹತ್ಯೆ

ಹಾಸನ : ನೇಣು ಬಿಗಿದುಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅರಕಲಗೂಡು ಪಟ್ಟಣದ ವಿನಾಯಕ ನಗರದಲ್ಲಿ ವರದಿಯಾಗಿದೆ.
ಅರಕಲಗೂಡು ಪಟ್ಟಣದ ನಿವಾಸಿ ಸುಭಾಷ್ ಚಂದ್ರ ಬೋಸ್ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಎಸೆಸೆಲ್ಸಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಸಂಬಂಧ ಸ್ಥಳಕ್ಕೆ ಅರಕಲಗೂಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story




