Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. Hassan| ಗೆಜೆಟೆಡ್ ಪ್ರೊಬೇಷನರ್ಸ್...

Hassan| ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ: 6,468 ಅಭ್ಯರ್ಥಿಗಳು ಹಾಜರು, ಜಿಲ್ಲಾಧಿಕಾರಿ ಲತಾ ಕುಮಾರಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ15 Nov 2026 1:24 PM IST
share
Hassan| ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ: 6,468 ಅಭ್ಯರ್ಥಿಗಳು ಹಾಜರು, ಜಿಲ್ಲಾಧಿಕಾರಿ ಲತಾ ಕುಮಾರಿ ಪರಿಶೀಲನೆ

ಹಾಸನ : ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ 319 ಹುದ್ದೆಗಳ ನೇಮಕಾತಿಗಾಗಿ ರವಿವಾರ 14 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆ ಹಾಸನ ಜಿಲ್ಲೆಯಲ್ಲಿ ಯಾವುದೇ ಗೊಂದಲಗಳಿಲ್ಲದೆ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದರು.

ನಗರದ ವಿಜಿತ ಮಹಿಳೆಯರ ಸರಕಾರಿ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರು ನಂತರ ಮಾಧ್ಯಮದೊಂದಿಗೆ ಮಾತನಾಡಿ, ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 6,468 ಅಭ್ಯರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿತ್ತು. ನಗರದ ಸರ್ಕಾರಿ ವಿಜ್ಞಾನ ಕಾಲೇಜು ಸೇರಿದಂತೆ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತೆ ಹಾಗೂ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ಗೊಂದಲ ಉಂಟಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳ ಬ್ಯಾಗ್‌ಗಳನ್ನು ಪ್ರತ್ಯೇಕವಾಗಿ ಇರಿಸುವ ವ್ಯವಸ್ಥೆ, ತಪಾಸಣೆ ಹಾಗೂ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಿದ ಬಳಿಕ ಪ್ರವೇಶ ಪತ್ರ ಪರಿಶೀಲಿಸಿ ಪರೀಕ್ಷಾ ಕೊಠಡಿಗಳಿಗೆ ಕಳುಹಿಸಲಾಗುತ್ತಿದೆ. ಯಾವ ಮಹಡಿಯಲ್ಲಿ ಯಾವ ಕೊಠಡಿ ಇದೆ ಎಂಬುದರ ಕುರಿತು ಸ್ಪಷ್ಟ ಸೂಚನೆಗಳನ್ನು ಅಳವಡಿಸಿ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದರು.

ಬೆಳಿಗ್ಗೆ 9.50ರ ನಂತರ ಯಾವುದೇ ಅಭ್ಯರ್ಥಿಗಳಿಗೆ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ನಿಗದಿತ ಸಮಯಕ್ಕೆ ಎಲ್ಲ ಪ್ರವೇಶ ದ್ವಾರಗಳನ್ನು ಮುಚ್ಚಲಾಗಿದ್ದು, ಪೊಲೀಸ್ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದಾರೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಎರಡನೇ ಪತ್ರಿಕೆ ನಡೆಯಲಿದೆ. ಒಎಂಆರ್ ಉತ್ತರ ಪತ್ರಿಕೆಗಳನ್ನು ವಿತರಿಸಿದ ಬಳಿಕ ಪ್ರಶ್ನೆಪತ್ರಿಕೆಗಳನ್ನು ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಹಾಸನ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪರೀಕ್ಷೆ ಅತ್ಯಂತ ಶಿಸ್ತುಬದ್ಧವಾಗಿ, ಶಾಂತಿಯುತವಾಗಿ ನಡೆಯುತ್ತಿದ್ದು, ಯಾವುದೇ ಸಣ್ಣಪುಟ್ಟ ಗೊಂದಲಗಳೂ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಕೆಪಿಎಸ್ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತಾ, ತಹಸೀಲ್ದಾರ್ ಗೀತಾ ಸೇರಿದಂತೆ ಇತರೆ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿ ಸಲಹೆ ನೀಡಿದರು.

Tags

Hassan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X