ಹಾಸನ ಪೊಲೀಸರ ಕಾರ್ಯಾಚರಣೆ; 41 ಕೆ.ಜಿ ಗಾಂಜಾ ಜಪ್ತಿ, ಆರೋಪಿಯ ಬಂಧನ

ಹಾಸನ : ಜಿಲ್ಲೆಯ ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಭಾರೀ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಕಾಳೇಬು ಬೀದಿಯ ನಿವಾಸಿ ಮೌಲ್ಯಾ ಶರೀಫ್ (36) ಎಂಬಾತನನ್ನು ಬಂಧಿಸಲಾಗಿದೆ.
ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿ ತನ್ನ ಮನೆಯಲ್ಲಿ ಹಾಗೂ ಆಟೋದಲ್ಲಿ ಮಾರಾಟ ಉದ್ದೇಶದಿಂದ ಗಾಂಜಾವನ್ನು ಸಂಗ್ರಹಿಸಿಟ್ಟಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. ಕಾರ್ಯಾಚರಣೆಯಲ್ಲಿ ಒಟ್ಟು 41 ಕೆ.ಜಿ 565 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಇದರ ಅಂದಾಜು ಮೌಲ್ಯ 20.78 ಲಕ್ಷ ಎಂದು ತಿಳಿದುಬಂದಿದೆ.
ಈ ಸಂಬಂಧ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
Next Story




