ಹಾಸನ: ಹೃದಯಾಘಾತದಿಂದ ಮತ್ತೋರ್ವ ಯುವಕ ಮೃತ್ಯು

ಹಾಸನ, ಜು.4: ನಗರ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಮೃತರನ್ನು ಮದನ್ (21) ಎಂದು ಗುರುತಿಸಲಾಗಿದೆ. ಇವರು ಮೂಲತಃ ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದವವರಾಗಿದ್ದು, ತಾಯಿಯ ಜೊತೆ ಚನ್ನಪಟ್ಟಣದಲ್ಲಿ ವಾಸವಿದ್ದರು. ಎರಡು ದಿನಗಳ ಹಿಂದೆ ಇವರು ಚಿಕ್ಕಕೊಂಡಗುಳದಲ್ಲಿರುವ ತನ್ನ ಬಾವನ ಮನೆಗೆ ಆಗಮಿಸಿದ್ದರು.
ಗುರುವಾರ ರಾತ್ರಿ ಮನೆಯಲ್ಲಿದ್ದಾಗ ಮದನ್ ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದರೆನ್ನಲಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
Next Story





