Hassan | ಲೋಕಾಯುಕ್ತ ಬಲೆಗೆ ಬಿದ್ದ ಮಲ್ಲಿಪಟ್ಟಣ ಗ್ರಾಪಂ ಬಿಲ್ ಕಲೆಕ್ಟರ್

ಹಾಸನ: ಇ-ಸ್ವತ್ತು ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ.
ಮಲ್ಲಿಪಟ್ಟಣ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಹರೀಶ್ ಎಂಬವರು, ಸೋಮಶೇಖರ್ ಎಂಬವರಿಗೆ ಇ-ಸ್ವತ್ತು (E-Property) ನೀಡಿಕೆಗೆ ಸಂಬಂಧಿಸಿ 48,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಕುರಿತು ಲೋಕಾಯುಕ್ತರಿಗೆ ದೂರು ನೀಡಲಾಗಿತ್ತು.
ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಸೋಮಶೇಖರ್ ಅವರಿಂದ ಲಂಚದ ಹಣ ಸ್ವೀಕರಿಸುವ ವೇಳೆ ಹರೀಶ್ ಅವರನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.
ಲೋಕಾಯುಕ್ತ ಎಸ್ಪಿ ನಂದಿನಿ ಹಾಗೂ ಇನ್ಸ್ಪೆಕ್ಟರ್ ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿ ಹರೀಶ್ ಅವರನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದೆ.
Next Story




