ಹಾಸನ: ವ್ಯಕ್ತಿಯ ಹತ್ಯೆ; ಆರೋಪಿಗಳು ಪರಾರಿ

ಹಾಸನ : ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿ, ಹೆಣದ ಮೇಲೆ ಹಾಗೂ ಪಕ್ಕದಲ್ಲಿದ್ದ ಬೈಕ್ ಮೇಲೆ ಸೊಪ್ಪು ಮುಚ್ಚಿ ಆರೋಪಿಗಳು ಪರಾರಿಯಾಗಿರುವ ಘಟನೆ ಹಾಸನ ತಾಲೂಕಿನ ಆಲಗೌಡನಹಳ್ಳಿ ಗ್ರಾಮದ ಸಮೀಪದ ಹಾಸನ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಎಸ್. ಅಂಕನಹಳ್ಳಿ ಅರಣ್ಯ ಪ್ರದೇಶದ ಬಳಿ ನಡೆದಿದೆ.
ಮೃತನನ್ನು ಹೊಳೆನರಸೀಪುರದ ಅಂಬೇಡ್ಕರ್ ನಗರದ ನಿವಾಸಿ ಮಣಿ ಎಂದು ಗುರುತಿಸಲಾಗಿದೆ.
ರವಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ಹಳ್ಳಿ ಮೈಸೂರು ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಫಾರೆನ್ಸಿಕ್ ತಂಡ ಸಾಕ್ಷ್ಯ ಸಂಗ್ರಹ ಕಾರ್ಯ ಕೈಗೊಂಡಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ರಾತ್ರಿ ವೇಳೆ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
Next Story





