Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. Hassan | ಸೇತುವೆ ಮೇಲೆ ತೈಲ ಟ್ಯಾಂಕರ್...

Hassan | ಸೇತುವೆ ಮೇಲೆ ತೈಲ ಟ್ಯಾಂಕರ್ ಪಲ್ಟಿ : ನೀರಿನಂತೆ ಹರಿದ ಪೆಟ್ರೋಲ್, ವಾಹನ ಸಂಚಾರ ಸ್ಥಗಿತ

ವಾರ್ತಾಭಾರತಿವಾರ್ತಾಭಾರತಿ12 Sept 2026 1:23 PM IST
share
Hassan | ಸೇತುವೆ ಮೇಲೆ ತೈಲ ಟ್ಯಾಂಕರ್ ಪಲ್ಟಿ : ನೀರಿನಂತೆ ಹರಿದ ಪೆಟ್ರೋಲ್, ವಾಹನ ಸಂಚಾರ ಸ್ಥಗಿತ

ಹಾಸನ : ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಪೆಟ್ರೋಲ್ ತುಂಬಿದ ಟ್ಯಾಂಕರ್‌ವೊಂದು ರಾಷ್ಟ್ರೀಯ ಹೆದ್ದಾರಿ-75ರ ಕೆಂಚಟ್ಟಹಳ್ಳಿ ಫ್ಲೈಓವರ್ ಮೇಲೆ ಪಲ್ಟಿಯಾಗಿ, ಅಪಾರ ಪ್ರಮಾಣದ ಇಂಧನ ರಸ್ತೆಗೆ ಸೋರಿಕೆಯಾದ ಘಟನೆ ಶನಿವಾರ ಸಂಭವಿಸಿದೆ. ಪೆಟ್ರೋಲ್ ರಸ್ತೆಯಲ್ಲಿ ಹರಿದ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

ವಾರಾಂತ್ಯದ ಜತೆಗೆ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಿರುವ ಸಂದರ್ಭದಲ್ಲಿ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ, ಬಿಸಿಲಿನ ತೀವ್ರತೆಯೂ ಹೆಚ್ಚಿರುವುದರಿಂದ ಸೋರಿಕೆಯಾಗಿರುವ ಪೆಟ್ರೋಲ್‌ ನಿಂದ ಅಪಾಯವಿರುವ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾದರು.

ಮಾಹಿತಿ ತಿಳಿಯುತ್ತಿದ್ದಂತೆ ಸಂಚಾರಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡರು. ಟ್ಯಾಂಕರ್ ಸುತ್ತಮುತ್ತ ವಾಹನಗಳು ಹಾಗೂ ಸಾರ್ವಜನಿಕರು ತೆರಳದಂತೆ ನಿರ್ಬಂಧ ವಿಧಿಸಿ, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಯಿತು.

ಅಪಾಯದ ಸಾಧ್ಯತೆ ಹಿನ್ನೆಲೆಯಲ್ಲಿ ಕೆಂಚಟ್ಟಹಳ್ಳಿ ಫ್ಲೈಓವರ್ ಮೇಲಿನ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣ ಬಂದ್ ಮಾಡಲಾಗಿದ್ದು, ಇಂಧನ ಸೋರಿಕೆ ನಿಯಂತ್ರಿಸುವ ಹಾಗೂ ಟ್ಯಾಂಕರ್ ತೆರವುಗೊಳಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾದರು.

ಬೆಂಗಳೂರು–ಮಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಲ್ಲಿ ಘಟನೆ ಸಂಭವಿಸಿರುವುದರಿಂದ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪೊಲೀಸರು ಸೂಚಿಸಿದ್ದಾರೆ. ಘಟನೆ ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Tags

HassanOil TankerBridge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X