ಹಾಸನ | ರಸ್ತೆ ದಾಟುವಾಗ ಕಾರು ಢಿಕ್ಕಿ; ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತ್ಯು

ಹಾಸನ: ರಸ್ತೆ ದಾಟುವ ವೇಳೆ ಕಾರು ಢಿಕ್ಕಿಯಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚಿರಂತ್ (16) ಎಂದು ಗುರುತಿಸಲಾಗಿದೆ. ಇವರು ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿಸಿಕೊಂಡು ಬಸ್‌ನಲ್ಲಿ ಊರಿಗೆ ಮರಳುತ್ತಿದ್ದರು.
ಬಸ್‌ನಿಂದ ಇಳಿದು ರಸ್ತೆ ದಾಟುವ ವೇಳೆ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಚಿರಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಘಟನೆ ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story




