Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. Hassan | ಅಂಬೇಡ್ಕರ್ ಆಶಯಗಳ ಈಡೇರಿಕೆಗೆ...

Hassan | ಅಂಬೇಡ್ಕರ್ ಆಶಯಗಳ ಈಡೇರಿಕೆಗೆ ಸಂಘಟನೆಗಳ ಒಗ್ಗಟ್ಟು ಅಗತ್ಯ : ಅಮನ್ ಆನಂದರಾಜ್

ಭೀಮ್ ಆರ್ಮಿ ಸಂಸ್ಥಾಪನಾ ದಿನಾಚರಣೆ; ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 Oct 2026 5:20 PM IST
share
Hassan | ಅಂಬೇಡ್ಕರ್ ಆಶಯಗಳ ಈಡೇರಿಕೆಗೆ ಸಂಘಟನೆಗಳ ಒಗ್ಗಟ್ಟು ಅಗತ್ಯ : ಅಮನ್ ಆನಂದರಾಜ್

ಹಾಸನ: ಡಾ. ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಹೋದರತ್ವದ ಆಧಾರದ ಮೇಲೆ ಉತ್ತಮ ಭಾರತವನ್ನು ನಿರ್ಮಿಸಲು ಎಲ್ಲ ಸಂಘಟನೆಗಳು, ರಾಜಕೀಯ ಪಕ್ಷಗಳು ಹಾಗೂ ಸಮುದಾಯದ ಮುಖಂಡರು ವೈಯಕ್ತಿಕ ಭಿನ್ನಾಭಿಪ್ರಾಯ ಮತ್ತು ಅಹಂ ಬದಿಗಿಟ್ಟು ಒಂದಾಗಬೇಕು ಎಂದು ಮಹಾರಾಷ್ಟ್ರದ ಅಂಬೇಡ್ಕರ್ ಕುಟುಂಬದ ನಾಲ್ಕನೇ ತಲೆಮಾರಿನ ಸದಸ್ಯ ಅಮನ್ ಆನಂದರಾಜ್ ಕರೆ ನೀಡಿದರು.

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್‌ನ ಮೂರನೇ ವರ್ಷದ ಸಂಸ್ಥಾಪನಾ ದಿನಾಚರಣೆ ಹಾಗೂ ಪೌರಕಾರ್ಮಿಕರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣ, ಸಂಘಟನೆ ಮತ್ತು ಹಕ್ಕುಗಳಿಗಾಗಿ ಹೋರಾಟದ ಮೂಲಕವೇ ಸಮಾಜದ ಪ್ರಗತಿ ಸಾಧ್ಯ. ಅಂಬೇಡ್ಕರ್ ಅವರ ವಿಚಾರಧಾರೆಯನ್ನು ಕೇವಲ ಭಾಷಣಗಳಿಗೆ ಸೀಮಿತಗೊಳಿಸದೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮುಂದಿನ ಪೀಳಿಗೆಗೆ ಅವರ ಚಿಂತನೆಗಳನ್ನು ತಲುಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಪ್ರತಿಪಾದಿಸಿದರು.

ಹಾಸನಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವುದು ಹೆಮ್ಮೆಯ ಸಂಗತಿ. 1952ರಲ್ಲಿ ಡಾ. ಅಂಬೇಡ್ಕರ್ ಅವರು ಹಾಸನಕ್ಕೆ ಭೇಟಿ ನೀಡಿದ್ದರು ಹಾಗೂ ಎ.ಕೆ. ಬೋರ್ಡಿಂಗ್ ಶಾಲೆಗೆ ತೆರಳಿದ್ದರು ಎಂಬ ವಿಚಾರ ತಿಳಿದು ಸಂತೋಷವಾಗಿದೆ. ಶಿಕ್ಷಣದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಅಂಬೇಡ್ಕರ್ ಅವರು ನಡೆಸಿದ ಪ್ರಯತ್ನಗಳು ಇಂದಿಗೂ ಪ್ರಸ್ತುತವಾಗಿವೆ. ಅವರ ಮಾರ್ಗದಲ್ಲಿ ಮುನ್ನಡೆಯುವ ಮೂಲಕ ಶೈಕ್ಷಣಿಕ ಮತ್ತು ಸಾಮಾಜಿಕ ಪ್ರಗತಿ ಸಾಧಿಸಬೇಕು ಎಂದರು.

ಯಾವುದೇ ಕೆಲಸ ಚಿಕ್ಕದು ಅಥವಾ ದೊಡ್ಡದು ಎಂಬ ಭೇದವಿಲ್ಲ. ಪ್ರತಿಯೊಬ್ಬರೂ ತಾವು ನಿರ್ವಹಿಸುವ ಕೆಲಸದ ಬಗ್ಗೆ ಹೆಮ್ಮೆ ಹೊಂದಬೇಕು ಎಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುವ ಜನರು ಒಂದೇ ವೇದಿಕೆಯಲ್ಲಿ ಸೇರಿರುವುದು ಸಂತಸದ ಸಂಗತಿ. ಆದರೆ, ಸಮುದಾಯದ ಜನರು ಶಿಕ್ಷಣದಲ್ಲಿ ಪ್ರಗತಿ ಸಾಧಿಸುತ್ತಿದ್ದರೂ ಪರಸ್ಪರ ಒಗ್ಗಟ್ಟಿನ ಕೊರತೆ ಕಾಡುತ್ತಿದೆ. ಹೀಗಾಗಿ ಸಂಘಟನೆಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಅಂಬೇಡ್ಕರ್ ಅವರ ಆಶಯಗಳ ಈಡೇರಿಕೆಗೆ ಕೈಜೋಡಿಸಬೇಕು ಎಂದು ಹೇಳಿದರು.

ಅಂಬೇಡ್ಕರ್ ಅವರು ಕೇವಲ ಪರಿಶಿಷ್ಟ ಜಾತಿಯವರ ಅಭಿವೃದ್ಧಿಗಾಗಿ ಮಾತ್ರ ಶ್ರಮಿಸಿದ್ದರು ಎಂಬ ಸೀಮಿತ ದೃಷ್ಟಿಕೋನ ಬದಲಾಗಬೇಕು. ಅವರ ಸಂವಿಧಾನಾತ್ಮಕ ಚಿಂತನೆಗಳು, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ದೇಶದ ನಿರ್ಮಾಣಕ್ಕೆ ನೀಡಿದ ಕೊಡುಗೆಗಳನ್ನು ಎಲ್ಲರೂ ಅರಿಯಬೇಕು. ಮಹಾರಾಷ್ಟ್ರದಲ್ಲಿ ಅಂಬೇಡ್ಕರ್ ಕುಟುಂಬದವರು ಸಮುದಾಯದ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ, ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅವರ ವಿಚಾರಧಾರೆಗೆ ದೊರೆಯುತ್ತಿರುವ ಬೆಂಬಲ ಸಂತಸ ತಂದಿದೆ ಎಂದರು.

ಕರ್ನಾಟಕದಲ್ಲಿ ನಡೆಯುತ್ತಿರುವ ವಿವಿಧ ದೌರ್ಜನ್ಯಗಳು ಮತ್ತು ಸಾಮಾಜಿಕ ಸಮಸ್ಯೆಗಳನ್ನು ತಡೆಯಲು ಜನಪ್ರತಿನಿಧಿಗಳು ಗಂಭೀರವಾಗಿ ಗಮನಹರಿಸಬೇಕು. ಸಚಿವರು, ಶಾಸಕರು ಮತ್ತು ಸಂಸದರು ಸಮಸ್ಯೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಹಾಸನಕ್ಕೆ ಇದು ಮೊದಲ ಭೇಟಿಯಾದರೂ ಕೊನೆಯ ಭೇಟಿಯಲ್ಲ. ಮುಂದೆಯೂ ಭೇಟಿ ನೀಡುವುದಾಗಿ ತಿಳಿಸಿದರು.

ಪೌರಕಾರ್ಮಿಕರ ಸೇವೆ ಗುರುತಿಸಿ ಗೌರವಿಸುವುದು ಶ್ಲಾಘನೀಯ:

ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ವಿವಿಧ ಸಮುದಾಯಗಳ ಜನರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಒಗ್ಗಟ್ಟು ಮೂಡಿಸುವುದು ಸುಲಭದ ಕೆಲಸವಲ್ಲ. ಯುವಜನರನ್ನು ಸಂಘಟಿಸಿ ಸಾಮಾಜಿಕ ಜಾಗೃತಿ ಮೂಡಿಸುವ ಭೀಮ್ ಆರ್ಮಿ ಸಂಘಟನೆಯ ಪ್ರಯತ್ನ ಶ್ಲಾಘನೀಯ. ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸಿರುವುದು ಸಂತಸ ತಂದಿದೆ ಎಂದರು.

ಅಂಬೇಡ್ಕರ್ ಅವರು ಪ್ರತಿಪಾದಿಸಿದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಸಂದೇಶವನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮುಂದಿನ ಪೀಳಿಗೆ ಉತ್ತಮ ಶಿಕ್ಷಣ ಪಡೆಯುವುದರ ಜತೆಗೆ ಉದ್ಯೋಗ, ಉದ್ಯಮಶೀಲತೆ ಮತ್ತು ಸಾಮಾಜಿಕ ಅಭಿವೃದ್ಧಿಯತ್ತ ಗಮನಹರಿಸಬೇಕು. ಯುವಜನರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಸಬಲರಾಗುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.

ಪೌರಕಾರ್ಮಿಕರ ಸೇವೆಯನ್ನು ಸ್ಮರಿಸಿದ ಅವರು, ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಅಕ್ಟೋಬರ್ 2ರಂದು ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಅವರ ಉಪಸ್ಥಿತಿಯಲ್ಲಿ ಪೌರಕಾರ್ಮಿಕರೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದಾಗ ಕೆಲವೇ ಗಂಟೆಗಳ ಕೆಲಸದಿಂದ ಸಾಕಷ್ಟು ಆಯಾಸವಾಗಿತ್ತು. ಆದರೆ, ಪೌರಕಾರ್ಮಿಕರು ಪ್ರತಿದಿನ ನಿರಂತರವಾಗಿ ಈ ಕೆಲಸ ನಿರ್ವಹಿಸುತ್ತಾರೆ. ಅವರ ಶ್ರಮ, ತಾಳ್ಮೆ ಮತ್ತು ಸೇವಾ ಮನೋಭಾವವನ್ನು ಸಮಾಜ ಗುರುತಿಸಿ ಗೌರವಿಸಬೇಕು. ಪೌರಕಾರ್ಮಿಕರನ್ನು ಸನ್ಮಾನಿಸುವುದು ಶ್ಲಾಘನೀಯ ಕಾರ್ಯ ಎಂದು ತಿಳಿಸಿದರು.

ಸಮುದಾಯದ ಹಕ್ಕುಗಳ ರಕ್ಷಣೆಗೆ ಒಗ್ಗಟ್ಟಿನ ಹೋರಾಟ ಅಗತ್ಯ:

ಶಾಸಕ ಎಚ್.ಪಿ. ಸ್ವರೂಪ್ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂಬ ಆರೋಪ ಸೇರಿದಂತೆ ಸಮುದಾಯದ ಹಕ್ಕುಗಳಿಗೆ ಸಂಬಂಧಿಸಿದ ವಿಚಾರಗಳಲ್ಲಿ ಹೋರಾಟ ನಡೆಸುವವರಿಗೆ ಎಲ್ಲರೂ ಬೆಂಬಲ ನೀಡಬೇಕು ಎಂದರು.

ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಶಿಕ್ಷಣ, ಉದ್ಯೋಗ, ರಾಜಕೀಯ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಸಮುದಾಯದ ಜನರು ಪ್ರಗತಿ ಸಾಧಿಸಿ ಸ್ವಾವಲಂಬಿಗಳಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಹೋರಾಟಗಳಲ್ಲಿ ಪರಸ್ಪರ ಕೈಜೋಡಿಸಿ ಮುನ್ನಡೆಯುವ ಅಗತ್ಯವಿದೆ ಎಂದು ಹೇಳಿದರು.

ಹಾಸನ ನಗರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅವರು ಒಂದು ದಿನ ಕೆಲಸಕ್ಕೆ ಬಾರದಿದ್ದರೂ ನಗರದ ಸ್ವಚ್ಛತೆಯ ಮೇಲೆ ಪರಿಣಾಮ ಉಂಟಾಗುತ್ತದೆ. ಸ್ವಚ್ಛತಾ ಕಾರ್ಯದಲ್ಲಿ ಅವರೊಂದಿಗೆ ಭಾಗವಹಿಸಿದಾಗ ಅಲ್ಪಾವಧಿಯ ಕೆಲಸಕ್ಕೂ ಸಾಕಷ್ಟು ಶ್ರಮ ಬೇಕಾಗುತ್ತದೆ ಎಂಬುದು ಅರಿವಾಗುತ್ತದೆ. ಆದರೆ, ಪೌರಕಾರ್ಮಿಕರು ವರ್ಷವಿಡೀ ಶ್ರಮವಹಿಸಿ ನಗರದ ಸ್ವಚ್ಛತೆಯನ್ನು ಕಾಪಾಡುತ್ತಾರೆ. ಅವರ ಸೇವೆಯನ್ನು ಗುರುತಿಸಿ ಗೌರವಿಸುವ ಭೀಮ್ ಆರ್ಮಿ ಸಂಘಟನೆಯ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಶಯಗಳನ್ನು ಗೌರವಿಸಿ ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದು ಹೇಳಿದರು. ಅಮನ್ ಆನಂದರಾಜ್ ಅವರನ್ನು ಉದ್ದೇಶಿಸಿ ಮಾತನಾಡಿದ ಅವರು, ಯುವಜನರಿಗೆ ಸ್ಫೂರ್ತಿಯಾಗಿರುವ ನಿಮ್ಮ ಆಗಮನದಿಂದ ಹೊಸ ಉತ್ಸಾಹ ಮೂಡಿದೆ. ಹಾಸನಕ್ಕೆ ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಸಮಾಜದ ಅಭಿವೃದ್ಧಿ ಮತ್ತು ಯುವಜನರ ಪ್ರಗತಿಗೆ ಕೈಗೊಳ್ಳುವ ಕಾರ್ಯಗಳಲ್ಲಿ ನಮ್ಮ ಬೆಂಬಲವಿರುತ್ತದೆ ಎಂದು ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ ಭೀಮ್ ಆರ್ಮಿ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ, ಪೌರಕಾರ್ಮಿಕರು, ಯುವಜನರು ಹಾಗೂ ವಿವಿಧ ಸಮುದಾಯಗಳ ನಡುವೆ ಸಾಮಾಜಿಕ ಜಾಗೃತಿ ಮೂಡಿಸಲಿ ಎಂದು ಆಶಿಸಿದರು.

ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ದೊರೆಯಲಿ:

ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಮತ್ತು ಸಮಾಜದ ಉನ್ನತಿಗಾಗಿ ಅವರು ನಡೆಸಿದ ಹೋರಾಟ ಸದಾ ಸ್ಮರಣೀಯ. ದಲಿತ ಸಮುದಾಯದ ಜನರು ರಾಜಕೀಯವಾಗಿ ಸಬಲರಾಗಬೇಕು. ರಾಜಕೀಯ ಹುದ್ದೆಗಳನ್ನು ಹೊಂದುವುದಷ್ಟೇ ಅಲ್ಲದೆ, ನಿರ್ಧಾರ ಕೈಗೊಳ್ಳುವ ಅಧಿಕಾರವೂ ಸಮುದಾಯಕ್ಕೆ ದೊರೆಯಬೇಕು ಎಂದು ಅಭಿಪ್ರಾಯಪಟ್ಟರು.

ಮಹಾರಾಷ್ಟ್ರದಿಂದ ಅಮನ್ ಆನಂದರಾಜ್ ಅವರು ಹಾಸನಕ್ಕೆ ಆಗಮಿಸಿರುವುದು ಸಂತಸದ ಸಂಗತಿ. ಅವರನ್ನು ಸ್ವಾಗತಿಸಲು ಮತ್ತು ಅವರ ಮಾತುಗಳನ್ನು ಆಲಿಸಲು ಅಪಾರ ಸಂಖ್ಯೆಯಲ್ಲಿ ಜನರು ಸೇರಿರುವುದು ಅಂಬೇಡ್ಕರ್ ಅವರ ವಿಚಾರಧಾರೆಗೆ ಇರುವ ಗೌರವವನ್ನು ತೋರಿಸುತ್ತದೆ ಎಂದರು.

ಕಳೆದ ಎಂಟು ವರ್ಷಗಳಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಮುದಾಯಕ್ಕೆ ಪ್ರಮುಖ ರಾಜಕೀಯ ಸ್ಥಾನಮಾನಗಳು ದೊರೆತಿಲ್ಲ ಎಂಬ ಅಸಮಾಧಾನವನ್ನು ವ್ಯಕ್ತಪಡಿಸಿದ ಅವರು, ಅರ್ಹತೆ ಮತ್ತು ಅನುಭವ ಹೊಂದಿರುವ ನಾಯಕರಿಗೆ ಸೂಕ್ತ ಅವಕಾಶಗಳು ದೊರೆಯಬೇಕು. ಈ ವಿಚಾರವನ್ನು ಪಕ್ಷಾತೀತವಾಗಿ ಚರ್ಚಿಸುವ ಅಗತ್ಯವಿದೆ ಎಂದರು. ಸಮುದಾಯದ ರಾಜಕೀಯ ಪ್ರಾತಿನಿಧ್ಯ ಮತ್ತು ಅಧಿಕಾರ ಹಂಚಿಕೆ ಕುರಿತು ಮುಕ್ತ ಚರ್ಚೆ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ:

ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರ ಪತ್ನಿ ಪ್ರತಿಭಾ ಮಂಜುನಾಥ್ ಮಾತನಾಡಿ, ಸಂಘಟನೆಯ ಬೆಳವಣಿಗೆಯ ಜತೆಗೆ ಸಮುದಾಯದ ಮಕ್ಕಳ ಭವಿಷ್ಯಕ್ಕೂ ಆದ್ಯತೆ ನೀಡಬೇಕು. ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮುದಾಯದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು.

ಸಂಘಟನೆಯ ಮೂರನೇ ವರ್ಷದ ಕಾರ್ಯಕ್ರಮದಲ್ಲಿ ಇಷ್ಟೊಂದು ಜನರು ಭಾಗವಹಿಸಿರುವುದು ಸಂತಸದ ಸಂಗತಿ. ಮುಂದಿನ ಹತ್ತು ವರ್ಷಗಳಲ್ಲಿ ಇದಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಆಶಿಸಿದರು. ಅಂಬೇಡ್ಕರ್ ಅವರ ಹೋರಾಟ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.

ಅದ್ದೂರಿ ಮೆರವಣಿಗೆ, ಪೌರಕಾರ್ಮಿಕರಿಗೆ ಗೌರವ :

ಕಾರ್ಯಕ್ರಮಕ್ಕೂ ಮುನ್ನ ಅಮನ್ ಆನಂದರಾಜ್ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿದರು. ನಗರದ ಎನ್.ಆರ್. ವೃತ್ತದಲ್ಲಿ ಕ್ರೇನ್ ಮೂಲಕ ಬೃಹತ್ ಹಣ್ಣಿನ ಹಾರ ಅರ್ಪಿಸಿ ಸ್ವಾಗತಿಸಲಾಯಿತು. ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಬಸವೇಶ್ವರ ಚೈತನ್ಯ ಮಹಾಸ್ವಾಮೀಜಿ, ಭೀಮ್ ಆರ್ಮಿ ಸಂಘಟನೆಯ ರಾಜ್ಯಾಧ್ಯಕ್ಷ ಮತೀನ್ ಕುಮಾರ್, ಜಿಲ್ಲಾಧ್ಯಕ್ಷ ಎಚ್.ಎಸ್. ಪ್ರದೀಪ್, ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಅವರ ಪತ್ನಿ ಚಂಚಲ ಕುಮಾರಸ್ವಾಮಿ, ಹಿರಿಯ ಮುಖಂಡ ನಾರಾಯಣದಾಸ್, ಎನ್.ಆರ್. ಸಂತೋಷ್, ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರ ಪತ್ನಿ ಪ್ರತಿಭಾ ಮಂಜುನಾಥ್, ರಾಜೇಂದ್ರ ದೊಡ್ಡಮಗ್ಗೆ, ನಾಗರಾಜು ಹೆತ್ತೂರು, ದೂದ್ ಪೀರ್, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು, ಜಿಲ್ಲಾ ಉಪಾಧ್ಯಕ್ಷ ನವೀನ್ ಸಾಲಗಾಮೆ, ಜಿಲ್ಲಾ ಸಂಚಾಲಕ ಮಂಜುನಾಥ ಎಂ.ಸಿ., ಜಿಲ್ಲಾ ಕಾರ್ಯಾಧ್ಯಕ್ಷ ಜಗದೀಶ್ ನಿಡನೂರು, ಹಾಸನ ತಾಲೂಕು ಅಧ್ಯಕ್ಷ ಹೇಮಂತ್ ಡಿ.ಕೆ., ಆಲೂರು ತಾಲೂಕು ಅಧ್ಯಕ್ಷ ನವೀನ್ ಕಾರ್ಜುವಳ್ಳಿ, ಪ್ರತಾಪ್, ಉಪಾಧ್ಯಕ್ಷ ಧರ್ಮೇಶ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ವಿವಿಧ ಕ್ಷೇತ್ರಗಳ ಮುಖಂಡರು ಉಪಸ್ಥಿತರಿದ್ದರು.

Tags

AmbedkarHassan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X