ಹಾಸನದಲ್ಲಿ ಭಾರೀ ಮಳೆ: ಮನೆಯ ಗೋಡೆ ಕುಸಿದು ಮಹಿಳೆ ಮೃತ್ಯು

ಹಾಸನ: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಅನೇಕ ಕಡೆ ಅಪಾಯಗಳು ಸಂಭವಿಸುತ್ತಿವೆ. ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ಇಂದು ಮುಂಜಾವ ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಜವರಮ್ಮ (63) ಮೃತಪಟ್ಟವರು. ಇಂದು ಮುಂಜಾನೆ 5:30ರ ಸುಮಾರಿಗೆ ನಿದ್ರಿಸುತ್ತಿದ್ದ ವೇಳೆ ಮನೆಯ ಗೋಡೆ ಕುಸಿದು ಜವರಮ್ಮರ ಮೇಲೆ ಬಿದ್ದಿದೆ. ಇದರಿಂದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಯ ವೇಳೆ ಮನೆಯಲ್ಲಿದ್ದ ಜವರಮ್ಮರ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾನೆ ತಿಳಿದುಬಂದಿದೆ.
ಸ್ಥಳೀಯ ಶಾಸಕ ಎ.ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





