ಹೊಳೆನರಸೀಪುರ | ಸಾರಿಗೆ ಬಸ್-ಬೈಕ್ ನಡುವೆ ಢಿಕ್ಕಿ : ಮೂವರು ಯುವಕರು ಮೃತ್ಯು

ಹಾಸನ : ಕೆಎಸ್ಸಾರ್ಟಿಸಿ ಬಸ್-ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಮೂವರು ಯುವಕರು ಮೃತಪಟ್ಟಿರುವ ಘಟನೆ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ನಡೆದಿದೆ.
ಮೃತರನ್ನು ಇರ್ಫಾನ್ (30), ತರುಣ್ (19) ಮತ್ತು ರೇವಂತ್ (26) ಎಂದು ಗುರುತಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಹಳ್ಳಿಮೈಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





