ಸಕಲೇಶಪುರ ವಲಯ ಅರಣ್ಯಾಧಿಕಾರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ; ಬಾಲಕನನ್ನು ಶಾಲೆಗೆ ಕಳುಹಿಸುವ ನೆಪದಲ್ಲಿ ಹಣ ಸಾಗಾಟಕ್ಕೆ ಯತ್ನ ಆರೋಪ

ಹಾಸನ: ಸಕಲೇಶಪುರ ವಲಯ ಅರಣ್ಯಾಧಿಕಾರಿ (RFO) ಹೇಮಂತ್ ಕುಮಾರ್ ಅವರ ಹಾಸನ ನಗರದ ಚಿಕ್ಕಹೊನ್ನೇನಹಳ್ಳಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಮನೆಯಲ್ಲಿದ್ದ ಬಾಲಕನನ್ನು ಶಾಲೆಗೆ ಕಳುಹಿಸುವ ನೆಪದಲ್ಲಿ ಕುಟುಂಬ ಸದಸ್ಯರು ಹಣ ಸಾಗಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ.
ಅನುಮಾನಗೊಂಡ ಲೋಕಾಯುಕ್ತ ಸಿಬ್ಬಂದಿ ಮನೆಯ ಬಾಗಿಲಲ್ಲೇ ಕುಳಿತು ಬಾಲಕನ ಶಾಲಾ ಬ್ಯಾಗ್ ಮತ್ತು ಪ್ಯಾಂಟ್ ಜೇಬನ್ನು ಪರಿಶೀಲಿಸಿದಾಗ 500 ರೂ. ಮುಖಬೆಲೆಯ ಒಂದು ಕಂತೆ ಹಣ ಪತ್ತೆಯಾಗಿದೆ. ಈ ಘಟನೆಯಿಂದ ತೀವ್ರ ಅಸಮಾಧಾನ ಹೊರಹಾಕಿದ ಅಧಿಕಾರಿಗಳು, ನಮಗೆ ಸರಿಯಾಗಿ ತಪಾಸಣೆ ಮಾಡಲು ಅವಕಾಶ ಕೊಡಿ ಎಂದು ಕುಟುಂಬಸ್ಥರಿಗೆ ತಾಕೀತು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
Next Story





