Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಹಾಸನ ಪಾಲಿಕೆಗೆ ಅಭಿವೃದ್ಧಿ...

ಹಾಸನ ಪಾಲಿಕೆಗೆ ಅಭಿವೃದ್ಧಿ ಕಾಮಗಾರಿಗಳಿಗೆ 185 ಕೋಟಿ ರೂ.ವೆಚ್ಚದ ಹೊಸ ಕ್ರಿಯಾಯೋಜನೆ : ಸಚಿವ ಶಿವಲಿಂಗೇಗೌಡ

ವಾರ್ತಾಭಾರತಿವಾರ್ತಾಭಾರತಿ19 Oct 2026 11:47 PM IST
share
ಹಾಸನ ಪಾಲಿಕೆಗೆ ಅಭಿವೃದ್ಧಿ ಕಾಮಗಾರಿಗಳಿಗೆ 185 ಕೋಟಿ ರೂ.ವೆಚ್ಚದ ಹೊಸ ಕ್ರಿಯಾಯೋಜನೆ : ಸಚಿವ ಶಿವಲಿಂಗೇಗೌಡ

ಹಾಸನ, ಅ.19: ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಈಗಾಗಲೇ ಸರಕಾರಕ್ಕೆ ಸಲ್ಲಿಸಿರುವ 185 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆಯನ್ನು ಪರಿಷ್ಕರಿಸಿ, ಹೆಚ್ಚುವರಿ ವಿಶೇಷ ಅನುದಾನ ಪಡೆಯಲು ಹೊಸದಾಗಿ ಕ್ರಿಯಾಯೋಜನೆ ಸಿದ್ಧಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸೋಮವಾರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ನಗರವನ್ನು ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯದಲ್ಲೇ ಮಾದರಿ ನಗರವನ್ನಾಗಿ ರೂಪಿಸುವುದು ಸರಕಾರದ ಉದ್ದೇಶವಾಗಿದೆ. ಇದಕ್ಕಾಗಿ ಸಂಸದರು, ಶಾಸಕರು ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ, ವಾರ್ಡ್‌ವಾರು ಅಗತ್ಯಗಳನ್ನು ಗುರುತಿಸಿ ಹೊಸ ಕ್ರಿಯಾಯೋಜನೆ ರೂಪಿಸಲಾಗುವುದು ಎಂದರು.ಈಗಾಗಲೇ ಸಲ್ಲಿಕೆಯಾಗಿರುವ 185 ಕೋಟಿ ರೂ.ಕ್ರಿಯಾಯೋಜನೆಯಲ್ಲಿ ಕೆಲವು ನ್ಯೂನತೆಗಳಿರುವುದು ಗಮನಕ್ಕೆ ಬಂದಿದ್ದು, ಅದನ್ನು ಮತ್ತೊಮ್ಮೆ ಪರಿಶೀಲಿಸಿ ಸಮಗ್ರವಾಗಿ ರೂಪಿಸುವ ಅಗತ್ಯವಿದೆ.

ಹಿಂದಿನ ಶಾಸಕರು ಸರಕಾರಕ್ಕೆ ಸಲ್ಲಿಸಿರುವ ಕ್ರಿಯಾಯೋಜನೆಯ ಸಂಪೂರ್ಣ ಮಾಹಿತಿ ನನ್ನ ಗಮನಕ್ಕೆ ಬಂದಿಲ್ಲ. ಹೀಗಾಗಿ ಅದನ್ನು ತಡೆಹಿಡಿದಿದ್ದೇನೆ ಎಂಬ ಆರೋಪ ಸರಿಯಲ್ಲ. ಈ ಯೋಜನೆ ಇನ್ನೂ ಅಂತಿಮಗೊಂಡಿಲ್ಲ. ನಾನು, ಸಂಸದರು ಹಾಗೂ ಶಾಸಕರು ಒಟ್ಟಾಗಿ ಕುಳಿತು ಚರ್ಚಿಸಿ, ಎಲ್ಲರ ವಿಶ್ವಾಸ ಪಡೆದು ಹೊಸ ಯೋಜನೆಯನ್ನು ಸರಕಾರಕ್ಕೆ ಸಲ್ಲಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.

ವಾರ್ಡ್‌ವಾರು ಜನಸಂಪರ್ಕ ಸಭೆ: ಹಾಸನ ನಗರದ ಪ್ರತಿಯೊಂದು ವಾರ್ಡ್‌ನ ಸಮಸ್ಯೆಗಳನ್ನು ಸ್ಥಳದಲ್ಲೇ ಅರಿತುಕೊಳ್ಳುವ ಉದ್ದೇಶದಿಂದ ವಾರ್ಡ್‌ವಾರು ಜನಸಂಪರ್ಕ ಸಭೆಗಳನ್ನು ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುವುದು. ಯಾವ ವಾರ್ಡ್ ನಲ್ಲಿ ಯಾವ ರೀತಿಯ ಮೂಲಸೌಕರ್ಯಗಳ ಕೊರತೆಯಿದೆ ಎಂಬುದನ್ನು ಗುರುತಿಸಿ, ಆದ್ಯತೆಯ ಆಧಾರದ ಮೇಲೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು.

ಎರಡು ತಿಂಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: ಹಾಸನ ನಗರದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನಾಂಬೆ ಜಾತ್ರೆಯ ವೇಳೆಗೆ ಫ್ಲೈಓವರ್ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಂಜಿತ್ ಗೊರೂರು, ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X