SAKALESHPURA: ಕಾಡಾನೆ ದಾಳಿಗೆ ಮಹಿಳೆ ಬಲಿ

ಹಾಸನ: ಕಾಡಾನೆ ದಾಳಿ ಮಾಡಿ ಮಹಿಳೆಯೊಬ್ಬರನ್ನು ಕೊಂದು ಹಾಕಿರುವ ಘಟನೆ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಶೋಭಾ(40) ಎಂದು ಗುರುತಿಸಲಾಗಿದೆ.
ಶೋಭಾ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ ಕಾಡಾನೆ ತುಳಿದು ಕೊಂದಿದೆ.
ಘಟನೆಯ ಮಾಹಿತಿ ಪಡೆದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಮಾನವ–ಕಾಡಾನೆ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
Next Story





