ಸಕಲೇಶಪುರ: ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು

ಸಕಲೇಶಪುರ: ಆಕಸ್ಮಿಕವಾಗಿ ನೀರಿನ ತೊಟ್ಟಿಗೆ ಬಿದ್ದು ಆರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ತಾಲೂಕಿನ ಹಾಲೆಬೇಲೂರು ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ.
ಮೃತ ಮಗುವನ್ನು ಹಾಲೆಬೇಲೂರು ಗ್ರಾಮದ ನಿವಾಸಿ ತಿಲಕ್ ಮತ್ತು ವಂದಿತಾ ದಂಪತಿಯ ಪುತ್ರಮೌರ್ಯ(6) ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಸುಮಾರು 12:30ರ ವೇಳೆಗೆ ಮೌರ್ಯ ತನ್ನ ಮನೆಯ ಮುಂಭಾಗದ ಕಾಫಿ ತೋಟದ ಬಳಿ ಆಟವಾಡುತ್ತಿದ್ದ ವೇಳೆ, ಸಮೀಪದಲ್ಲೇ ಇದ್ದ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದ್ದಾನೆ.
ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





