Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಸಕಲೇಶಪುರದಲ್ಲಿ ಸಿನಿಮೀಯ ಕಾರ್ಯಾಚರಣೆ:...

ಸಕಲೇಶಪುರದಲ್ಲಿ ಸಿನಿಮೀಯ ಕಾರ್ಯಾಚರಣೆ: ಸರಗಳ್ಳತನ ಪ್ರಕರಣದ ಆರೋಪಿಗಳ ಬಂಧನ

ಪೊಲೀಸರ ಚುರುಕಿನ ಕಾರ್ಯಾಚರಣೆಗೆ ಮೆಚ್ಚುಗೆ

ವಾರ್ತಾಭಾರತಿವಾರ್ತಾಭಾರತಿ29 Sept 2026 2:45 PM IST
share
ಸಕಲೇಶಪುರದಲ್ಲಿ ಸಿನಿಮೀಯ ಕಾರ್ಯಾಚರಣೆ: ಸರಗಳ್ಳತನ ಪ್ರಕರಣದ ಆರೋಪಿಗಳ ಬಂಧನ

ಸಕಲೇಶಪುರ: ಇತ್ತೀಚೆಗೆ ಪಟ್ಟಣದಲ್ಲಿ ಮಹಿಳೆಯರ ಸರ ದೋಚಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಸರಗಳ್ಳರನ್ನು ಬಂಧಿಸುವಲ್ಲಿ ಸಕಲೇಶಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ತಂತ್ರಜ್ಞಾನದ ನೆರವಿನಿಂದ ಕಾರ್ಯಾಚರಣೆ ನಡೆಸಿದ ಪೊಲೀಸರು, ಇಬ್ಬರು ಸರಗಳ್ಳತನ ಪ್ರಕರಣದ ಆರೋಪಿಗನ್ನು ಮಂಗಳವಾರ ಮುಂಜಾನೆ ಬಂಧಿಸಿದ್ದಾರೆ. ಪೊಲೀಸರ ಚುರುಕಿನ ಕಾರ್ಯಾಚರಣೆಗೆ ನಾಗರಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಕೆಲವು ದಿನಗಳ ಹಿಂದೆ ಪಟ್ಟಣದ ಹೊಳೆ ಮಲ್ಲೇಶ್ವರ ದೇವಸ್ಥಾನದ ಸಮೀಪ ಬ್ರಾಹ್ಮಣರ ಬೀದಿ ನಿವಾಸಿ ಹಾಗೂ ನಿವೃತ್ತ ಕೆಎಸ್‌ಆರ್‌ಟಿಸಿ ಚಾಲಕ ಶಾಂತಪ್ಪ ಅವರ ಪತ್ನಿ ರಾಣಿಯಮ್ಮ ಅವರು ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಆರೋಪಿಗಳು ಏಕಾಏಕಿ ಅವರ ಕತ್ತಿನಲ್ಲಿದ್ದ ಸುಮಾರು 45 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಘಟನೆ ಪಟ್ಟಣದಲ್ಲಿ ಆತಂಕಕ್ಕೆ ಕಾರಣವಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಈ ಹಿಂದೆ ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಶಂಕಿತರ ಚಲನವಲನಗಳ ಮೇಲೆ ನಿಗಾ ಇರಿಸಿ ವಿಶೇಷ ಜಾಲ ರೂಪಿಸಿದ್ದರು. ಈ ನಡುವೆ ಆರೋಪಿಗಳು ಮಂಗಳವಾರ ಮುಂಜಾನೆ ಮತ್ತೆ ಸಕಲೇಶಪುರ ಪಟ್ಟಣ ಪ್ರವೇಶಿಸುತ್ತಿರುವ ಬಗ್ಗೆ ಆಧುನಿಕ ತಂತ್ರಜ್ಞಾನ ಹಾಗೂ ನೆಟ್‌ವರ್ಕ್ ನೆರವಿನಿಂದ ಪೊಲೀಸರಿಗೆ ಖಚಿತ ಸುಳಿವು ಲಭ್ಯವಾಗಿತ್ತು.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪಟ್ಟಣದ ಪ್ರಮುಖ ಪ್ರವೇಶ ದ್ವಾರಗಳಲ್ಲಿ ನಾಕಾಬಂದಿ ಹಾಕಿ ಆರೋಪಿಗಳಿಗಾಗಿ ಹೊಂಚು ಹಾಕಿದ್ದರು. ಬೆಳಿಗ್ಗೆ ಸುಮಾರು 6 ಗಂಟೆಗೆ ಹೇಮಾವತಿ ಸೇತುವೆ ಮೂಲಕ ಆರೋಪಿಗಳು ಪಟ್ಟಣ ಪ್ರವೇಶಿಸುತ್ತಿದ್ದಂತೆ ಸಿವಿಲ್ ಉಡುಪಿನಲ್ಲಿದ್ದ ಪೊಲೀಸರು ಖಾಸಗಿ ವಾಹನದಲ್ಲಿ ಅವರನ್ನು ಬೆನ್ನಟ್ಟಿದ್ದಾರೆ.

ಹಳೆ ಬಸ್ ನಿಲ್ದಾಣದ ಸಮೀಪ ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳು, ತಮ್ಮ ಬೈಕ್ ಅನ್ನು ಪೊಲೀಸರ ವಾಹನಕ್ಕೆ ಢಿಕ್ಕಿ ಹೊಡೆಸಿದ್ದಾರೆ. ಢಿಕ್ಕಿಯ ರಭಸಕ್ಕೆ ಓರ್ವ ಆರೋಪಿ ಗಾಯಗೊಂಡು ರಸ್ತೆಗೆ ಬಿದ್ದಿದ್ದು, ಆತನನ್ನು ಪೊಲೀಸರು ತಕ್ಷಣ ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಆರೋಪಿ ಅಲ್ಲಿಂದ ಪರಾರಿಯಾಗಿದ್ದ.

ಪೊಲೀಸರ ಕಣ್ಣಿಗೆ ಮಣ್ಣೆರಚಲು ಪರಾರಿಯಾಗಿದ್ದ ಆರೋಪಿ ತಕ್ಷಣ ಬಟ್ಟೆ ಬದಲಿಸಿಕೊಂಡು ಮತ್ತೆ ಘಟನಾ ಸ್ಥಳಕ್ಕೆ ಮರಳಿದ್ದಾನೆ. ಬಳಿಕ ಏನೂ ಅರಿಯದವನಂತೆ ಸಾರ್ವಜನಿಕರ ನಡುವೆ ನಿಂತು ಘಟನೆಯನ್ನು ವೀಕ್ಷಿಸುವ ನಾಟಕವಾಡಿದ್ದಾನೆ. ಆದರೆ ಸರ್ಕಲ್ ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿ ಆತನ ಸಂಶಯಾಸ್ಪದ ನಡವಳಿಕೆಯನ್ನು ಗಮನಿಸಿ, ಯಾವುದೇ ಅವಕಾಶ ನೀಡದೆ ಸಾರ್ವಜನಿಕರ ಎದುರೇ ಆತನನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರು ಪಟ್ಟಣದಲ್ಲಿ ಈ ಹಿಂದೆ ನಡೆದ ಸರಗಳ್ಳತನ ಪ್ರಕರಣಗಳಲ್ಲೂ ಇವರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಸರಗಳ್ಳರನ್ನು ಬಂಧಿಸಿ ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಿದ ಸಕಲೇಶಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಪಟ್ಟಣದಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Tags

chain-snatching caseSakleshpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X