ಸಕಲೇಶಪುರ ನಗರ ಠಾಣೆ ಪೊಲೀಸರ ಕಾರ್ಯಾಚರಣೆ; 269 ಗ್ರಾಂ ಗಾಂಜಾ ವಶ, ಇಬ್ಬರ ಬಂಧನ

ಸಕಲೇಶಪುರ: ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಬಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ 269 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಡಿ. 26, ರಂದು ಹೊಸ ಬಸ್ ನಿಲ್ದಾಣದ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಜೋಯಲ್ ಬಿನ್ ಥಾಮಸ್ ಮ್ಯಾಥ್ಯೂ, ಸಫಾನ್ ಬಿನ್ ಅಬ್ದುಲ್ ಸತ್ತಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವುದಾಗಿ ತಿಳಿದುಬಂದಿದೆ.
ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ವನರಾಜು, ಸಬ್ ಇನ್ಸ್‌ಪೆಕ್ಟರ್ ಮಹೇಶ್ ಹಾಗೂ ಸಿಬ್ಬಂದಿಗಳಾದ ಪೃಥ್ವಿ, ರೇವಣ್ಣ, ಶ್ರೀಧರ್, ಸೋಮಶೇಖರ್, ಚಂದ್ರಕಾಂತ್ ಮತ್ತು ಮಧು ಅವರು ಭಾಗವಹಿಸಿದ್ದರು.
ನಗರದಲ್ಲಿ ಮಾದಕ ವಸ್ತುಗಳ ಅಕ್ರಮ ಸಾಗಣೆ ಹಾಗೂ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.





