Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಸಕಲೇಶಪುರ | ಲಾರಿ ಅಡ್ಡಗಟ್ಟಿ ಚಾಲಕನ...

ಸಕಲೇಶಪುರ | ಲಾರಿ ಅಡ್ಡಗಟ್ಟಿ ಚಾಲಕನ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ2 July 2025 5:55 PM IST
share
ಸಕಲೇಶಪುರ | ಲಾರಿ ಅಡ್ಡಗಟ್ಟಿ ಚಾಲಕನ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಸಕಲೇಶಪುರ : ಸರಕು ಸಾಗಾಟ ಮಾಡುತ್ತಿದ್ದ ವಾಹನದ ಚಾಲಕನ ಮೇಲೆ ಸಂಘಪರಿವಾರದ ಕಾರ್ಯಕರ್ತರು ದೊಣ್ಣೆಯಿಂದ ಹಲ್ಲೆ ನಡೆಸಿ, ನಗದು ದೋಚಿರುವ ಘಟನೆ ಸಕಲೇಶಪುರ ತಾಲೂಕಿನ ಬಾಳುಪೇಟೆ ಸಮೀಪದಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೀರಜ್, ನವೀನ್ ಮತ್ತು ರಾಜು ಎಂಬವರನ್ನು ಬಂಧಿಸಿ, ಕಾರು ಮತ್ತು ಹಲ್ಲೆಗೆ ಬಳಸಿದ್ದ ದೊಣ್ಣೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ತಾಲೂಕಿನ ಬಾಗೆ ಗ್ರಾಮದ ಹೆದ್ದಾರಿ 75ರ ಬಳಿ ಚಲಿಸುತ್ತಿದ್ದ ಲಾರಿಯನ್ನು ಕಾರಿನಲ್ಲಿ ಬಂದ ಯುವಕರು ಏಕಾಏಕಿ ಅಡ್ಡಗಟ್ಟಿ, ಚಾಲಕ ಮಹಮ್ಮದ್ ನಿಶಾನ್‌ರ ಮೇಲೆ ಹಲ್ಲೆ ನಡೆಸಿ, ಹಣ ದೋಚಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ವಿವರ:

ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಗ್ರಾಮದ ನಿವಾಸಿ ಮಹಮ್ಮದ್ ನಿಶಾನ್ ಕಳೆದ 15 ವರ್ಷಗಳಿಂದ ವಾಹನ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬುಧವಾರ ತಡರಾತ್ರಿ ನಿಶಾನ್‌ ಅವರು 1 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಫೈವುಡ್ ಸಾಗಾಟ ಮಾಡುತ್ತಿದ್ದರು. ಈ ವೇಳೆ ಬಾಗೆ ಗ್ರಾಮದ ಸಮೀಪ ಸಂಘಪರಿವಾರದ ಕಾರ್ಯಕರ್ತರು ಲಾರಿಯನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ವಾಹನದ ಗಾಜನ್ನು ಒಡೆದು, ಚಾಲಕನನ್ನು ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಸಂದರ್ಭದಲ್ಲಿ ಬಸ್‌ವೊಂದು ಸ್ಥಳದಿಂದ ಹಾದುಹೋಗುವುದನ್ನು ಬಳಸಿಕೊಂಡು ಚಾಲಕ ನಿಶಾನ್‌ ಬಾಗೆ ಗ್ರಾಮದಿಂದ ಪಾಳ್ಯ ಗ್ರಾಮದತ್ತ ಸಾಗಿ, ವಾಹನವನ್ನು ತಿರುಗಿಸಿ ಪೆಟ್ರೋಲ್ ಬಂಕ್ ಮುಂದೆ ನಿಲ್ಲಿಸಿ ಪಕ್ಕದಲ್ಲಿದ್ದ ತೋಟಕ್ಕೆ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ ಎಂದು ಎನ್ನಲಾಗಿದೆ.

ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಆರೋಪಿಗಳು ಮತ್ತು ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹಲ್ಲೆಗೆ ಒಳಗಾಗಿದ್ದ ಚಾಲಕ ಮಹಮ್ಮದ್ ನಿಶಾನ್‌ ಸಕಲೇಶಪುರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ನನ್ನ ವಾಹನವನ್ನು ಕಾರಿನಲ್ಲಿ ಬಂದ ಮೂವರು ಏಕಾಏಕಿ ಅಡ್ಡಗಟ್ಟಿದರು. ದೊಣ್ಣೆ ಮತ್ತು ಕತ್ತಿಯಿಂದ ವಾಹನದ ಗ್ಲಾಸ್ ಒಡೆದು ಹಾಕಿದರು. ನನ್ನ ಅಂಗಿಯನ್ನು ಎಳೆದರು ಹಾಗೂ 18,000 ಹಣವನ್ನು ಕಿತ್ತುಕೊಂಡರು. ನಾನು ಹೇಗೂ ತಪ್ಪಿಸಿಕೊಂಡು ವಾಹನವನ್ನು ಚಲಾಯಿಸಿಕೊಂಡು ಬಂದೆ. ನಂತರ ಪಾಳ್ಯ ಬಳಿಯ ಪೆಟ್ರೋಲ್ ಬ್ಯಾಂಕ್ ಬಳಿ ವಾಹನ ನಿಲ್ಲಿಸಿ ಒಂದು ತೋಟಕ್ಕೆ ಓಡಿ ಹೋಗಿ ಪ್ರಾಣ ಉಳಿಸಿಕೊಂಡೆ. ಇವರ ವರ್ತನೆ ನೋಡಿ ನಾನು ಸತ್ತು ಹೋಗುತ್ತೇನೆ ಎಂದು ತಿಳಿದುಕೊಂಡಿದ್ದೆ" ಎಂದು ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X