Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಜನತಾದಳ ಪಕ್ಷವನ್ನು ದಡ ಮುಟ್ಟಿಸದೆ ಹಿಂದೆ...

ಜನತಾದಳ ಪಕ್ಷವನ್ನು ದಡ ಮುಟ್ಟಿಸದೆ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ30 Nov 2024 1:43 PM IST
share
Photo of Nikhil Kumarswamy

ಹಾಸನ: ನಾನು ಸೋತು ಒಂದು ವಾರ ಆಗಿದೆ. ನನಗಿನ್ನು ವಯಸ್ಸು 36 ವರ್ಷ. ನನ್ನ ಮುಂದೆ ಇರುವುದು ಒಂದೇ ಸವಾಲು. ಜನತಾದಳ ಪಕ್ಷವನ್ನು ದಡ ಮುಟ್ಟಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಶನಿವಾರ ರಾತ್ರಿ ಮಾಜಿ ಸಚಿವ ಎ.ಮಂಜು ಅವರ ಹುಟ್ಟುಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ. ನಾನು ಶಾಸಕನಾಗಬೇಕು ಎನ್ನುವುದು ನನ್ನ ಮುಂದೆ ಇರುವ ಪ್ರಶ್ನೆ ಅಲ್ಲ. ಪ್ರಾದೇಶಿಕ ಪಕ್ಷ ಉಳಿಯಬೇಕಿದೆ, ಕನ್ನಡಿಗರ ಅಸ್ಮಿತೆಗಾಗಿ ಈ ಪಕ್ಷ ಉಳಿಯಬೇಕಿದೆ. ಆ ಹಿನ್ನೆಲೆಯಲ್ಲಿ ಹೋರಾಟ ಮಾಡುತ್ತೇನೆ. ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ. ಮಾತನಾಡಲು ವೇದಿಕೆಗಳು ಮುಂದಿನ ದಿನಗಳಲ್ಲಿ ಸಜ್ಜಾಗುತ್ತೆ. ಹೋರಾಟ ಎನ್ನುವುದನ್ನು ರಕ್ತಗತವಾಗಿ ಮೈಗೂಡಿಸಿಕೊಂಡಿದ್ದೇನೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಒಬ್ಬ ಯುವಕನಾಗಿ ನಿಖಿಲ್‌ ಕುಮಾರಸ್ವಾಮಿ ನಿಮ್ಮ ಜೊತೆಯಲ್ಲಿ ಪ್ರಾಮಾಣಿಕವಾಗಿ ಇರುತ್ತೇನೆ ಎಂದರು.

ನಾನು ಸಂಸದ, ಶಾಸಕನಾಗಬೇಕು ಎಂದು ಒಮ್ಮೆಯೂ ಕೂಡ ಹಪಹಪಿಸಿಲ್ಲ. ಹಾಗಿದ್ದರೆ ನಾನು ಚಿತ್ರಂಗಕ್ಕೆ ಹೋಗದೆ ರಾಜಕಾರಣಕ್ಕೆ ಬರತ್ತಿದ್ದೆ ಎಂದರು

ಹಾಸನ ಜಿಲ್ಲೆಯ ಜನತೆ ಒಬ್ಬ ಸಾಧಾರಣ ರೈತ ಕುಟುಂಬದ ಮಗನಾಗಿ ಜನಿಸಿರುವ ದೇವೇಗೌಡರನ್ನು ಕೆಂಪುಕೋಟೆ ಮೇಲೆ ಬಾವುಟ ಹಾರಿಸುವ ಶಕ್ತಿಯನ್ನು ತುಂಬಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. ನಿಮ್ಮ ಹೃದಯದಲ್ಲಿ ನಮ್ಮ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿ, ಗೌರವ ಎಷ್ಟು ಜನ್ಮ ಎತ್ತಿ ಬಂದರು ತೀರಿಸಲು ಸಾಧ್ಯವಿಲ್ಲ. ನಿಮ್ಮ ಋಣಕ್ಕಾಗಿ ಪ್ರಾಮಾಣಿಕವಾಗಿ ನಮ್ಮಇಡೀ ಪಕ್ಷ, ನಮ್ಮ ಕುಟುಂಬ ನಿಮ್ಮ ಜೊತೆಯಲ್ಲಿ ಸದಾಕಾಲ ಇರುತ್ತೇವೆ ಎಂದರು.

ರಾಮನಗರ ಜಿಲ್ಲೆಯ ಜನರು ಕೂಡ ನಮ್ಮ ಕುಟುಂಬಕ್ಕೆ ಎಂಟು ಬಾರಿ ಶಾಸಕ ಸ್ಥಾನ, ಮೂರು ಬಾರಿ ಕುಮಾರಣ್ಣ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಿದ್ದಾರೆ ಎಂದರು. ಚುನಾವಣೆಯಲ್ಲಿ ಏಳು ಬೀಳು ಸರ್ವೇ ಸಾಮಾನ್ಯ. ನಾನು ರಾಜಕಾರಣದ ಹಿನ್ನೆಲೆಯಲ್ಲಿ ಬಂದಿರುವ ವ್ಯಕ್ತಿಯಾಗಿದ್ದರು ಚಿತ್ರರಂಗದಲ್ಲಿ ನನ್ನದೇ ಸವಾಲುಗಳನ್ನು ಸ್ವೀಕಾರ ಮಾಡಿದ್ದೇನೆ ಎಂದು ತಿಳಿಸಿದರು.

ಜಾಗ್ವಾರ್ ಮೂಲಕ ನಮ್ಮ ತಂದೆ ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಅನೇಕ ಚಿತ್ರಗಳನ್ನು ಮಾಡಿದೆ. ತದನಂತರ ಸಾರ್ವಜನಿಕ ಬದುಕಿನಲ್ಲಿ ಜವಾಬ್ದಾರಿಗಳನ್ನು ಅರಿತಿದ್ದೇನೆ. ಆ ಒಂದು ಕಾರಣದಿಂದ ಸಂಪೂರ್ಣವಾಗಿ ಸಾರ್ವಜನಿಕ ಬದುಕಿಗೆ ಧುಮುಕಿದ್ದೇನೆ ಎಂದು ಹೇಳಿದರು.

ನಮ್ಮ ನಾಡಿನ ನೆಲ, ಜಲ, ಭಾಷೆಯ ವಿಚಾರವಾಗಿ ದೇವೇಗೌಡರು 92 ವಯಸ್ಸಾದರೂ ರಾಜ್ಯಸಭೆಯಲ್ಲಿ ಏಕಾಂಗಿಯಾಗಿ ನೆಲ, ಜಲ, ಭಾಷೆ ಉಳಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ಜೀವನದ ಸ್ಪೂರ್ತಿ ದೇವೇಗೌಡರು. ನನ್ನ ಜವಾಬ್ದಾರಿಯನ್ನ ಅರಿತಿದ್ದೇನೆ ಎಂದರು.

ಅನಿರೀಕ್ಷಿತವಾದ ಬೆಳವಣಿಗೆಯಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಾಗಿ ಬಂತು. ಈ ಚುನಾವಣೆಯ ಸೋಲಿನ ಬಗ್ಗೆ ಹೆಚ್ಚಾಗಿ ಪರಾಮರ್ಶೆ ಮಾಡಲ್ಲ. ಕರ್ನಾಟಕ ರಾಜ್ಯದಲ್ಲಿ ಕಟ್ಟಿರುವ ರೈತ ಪರವಾದ ಪಕ್ಷ, ಪ್ರಾದೇಶಿಕ ಪಕ್ಷ ಜೆಡಿಎಸ್‌. ಲಕ್ಷಾಂತರ ಕಾರ್ಯಕರ್ತರ ದುಡಿಮೆ, ಎಲ್ಲಾ ತಂದೆ, ತಾಯಿಯರ ಆಶೀರ್ವಾದ, ರೈತರ ಆಶೀರ್ವಾದ ಮಾಡಿ ಇಲ್ಲಿಯವರೆಗೆ ಬೆಳೆಸಿ, ಉಳಿಸಿದ್ದೀರಿ ಎಂದರು. ಹಲವಾರು ಸಂದರ್ಭದಲ್ಲಿ ಅಖಾಡ ಸಿದ್ದವಾಗಿತ್ತು, ಬಹಳ ಸುಲಭವಾಗಿ ಶಾಸಕನಾಗಬಹುದಿತ್ತು. ಆದರೆ ಇಲ್ಲಿಯವರೆಗೂ ನಾನು, ಪಕ್ಷ ಸಂಕಷ್ಟದಲ್ಲಿತ್ತು, ಆ ಸಂದರ್ಭದಲ್ಲಿ ಒಬ್ಬ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ ಎಂದರು.

ನಿಮ್ಮಲ್ಲೆರ ಆಶೀರ್ವಾದಿಂದ ಇಡೀ ರಾಜ್ಯ ಪ್ರವಾಸ ಮಾಡುತ್ತೇನೆ. ಮೂಲೇಲಿ ಕೂರುವ ಜಾಯಮಾನ ನನ್ನದಲ್ಲ ಎಂದು ಹೇಳಿದರು‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X