Haveri | ಕಬ್ಬಿಗೆ ಟನ್ಗೆ ರೂ.3,600 ನೀಡಲು ಪಟ್ಟು: ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿದ ರೈತರು

ಹಾವೇರಿ: ಕಬ್ಬಿಗೆ ಪ್ರತಿ ಟನ್ಗೆ ರೂ.3,600 ಬೆಲೆ ನೀಡಬೇಕೆಂದು ಆಗ್ರಹಿಸಿ ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲಕರು ಪ್ರತಿ ಟನ್ ಕಬ್ಬಿಗೆ ರೂ.3,100 ನೀಡಲು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದರೆ, ರೈತರು ಕೇಳುತ್ತಿರುವ ಬೆಲೆ ಮತ್ತು ಕಾರ್ಖಾನೆ ಮಾಲಕರು ಪ್ರಸ್ತಾಪಿಸಿರುವ ಬೆಲೆಯ ನಡುವೆ ಭಾರೀ ವ್ಯತ್ಯಾಸವಿರುವುದರಿಂದ ರೈತರಲ್ಲಿ ಆಕ್ರೋಶ ಭುಗಿಲೆದ್ದಿದೆ.
ಸಭೆಯಲ್ಲಿ ಬೆಲೆ ನಿಗದಿ ವಿಚಾರವಾಗಿ ಸಮಾಧಾನಕರ ನಿರ್ಧಾರ ಹೊರಬರದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಬ್ಬು ಬೆಳೆಗಾರರು ಜಿಲ್ಲಾಧಿಕಾರಿ ಕಚೇರಿಯತ್ತ ಧಾವಿಸಿದ್ದಾರೆ. ಈ ವೇಳೆ ಕೆಲ ರೈತರು ಕಚೇರಿಯ ಮುಖ್ಯದ್ವಾರದ ಗೇಟ್ ಹಾರಿ ಒಳನುಗ್ಗಿದ್ದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ
ಬ್ಬು ಬೆಳೆಗಾರರ ಬೇಡಿಕೆಗೆ ಸೂಕ್ತ ಸ್ಪಂದನೆ ದೊರೆಯದಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದ್ದು, ಕಬ್ಬಿನ ಬೆಲೆ ನಿಗದಿ ವಿಚಾರದಲ್ಲಿ ಜಿಲ್ಲಾಡಳಿತ ಹಾಗೂ ಸಕ್ಕರೆ ಕಾರ್ಖಾನೆಗಳ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.






