Haveri | ಕೆರೆಗೆ ಬಿದ್ದು ರೈತ ಮೃತ್ಯು

ಸಾಂದರ್ಭಿಕ ಚಿತ್ರ
ಹಾವೇರಿ : ಜಾನುವಾರುಗಳ ಮೈ ತೊಳೆಯಲು ಹೋಗಿದ್ದ ವೇಳೆ ಕೆರೆಗೆ ಬಿದ್ದು ರೈತರೊಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಹಳೆಮೇಲ್ಮರಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಮೃತರನ್ನು ಸಚಿನ್ ಬಸಪ್ಪ ಅಂಗಡಿ (30) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕದಳ ಸಿಬ್ಬಂದಿ ಆಗಮಿಸಿ ನಾಲ್ಕು ಘಂಟೆಗಳ ಸತತ ಶೋಧನೆಯ ಬಳಿಕ ಮೃತದೇಹ ಪತ್ತೆಯಾಗಿದೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Next Story





