Haveri | ರಾಜ್ಯ ಸರಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಖಂಡಿಸಿ ಹಾವೇರಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಹಾವೇರಿ : ರಾಜ್ಯ ಸರಕಾರದ ದುರಾಡಳಿತ, ಭ್ರಷ್ಟಾಚಾರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಹಾವೇರಿ ಜಿಲ್ಲಾ ಬಿಜೆಪಿ ಮುಖಂಡರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಬಿಜೆಪಿ ಕಾರ್ಯಾಲಯದಿಂದ ಜೆ.ಪಿ. ಸರ್ಕಲ್‌ವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರ‍್ಯಾಲಿಯ ಬಳಿಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರತಿಕೃತಿ ದಹನಕ್ಕೆ ಮುಂದಾದ ಸಂದರ್ಭದಲ್ಲಿ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣನವರ, ಮಾಜಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಗ್ರಾಮೀಣ ಘಟಕದ ಅಧ್ಯಕ್ಷ ಬಸವರಾಜ ಕೋಳಿವಾಡ, ನಗರ ಘಟಕದ ಅಧ್ಯಕ್ಷ ಕಿರಣ್ ಕೊಳ್ಳಿ, ಜಿಲ್ಲಾ ವಕ್ತಾರ ನಿರಂಜನ ಕೇರೂರ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Next Story




