Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾವೇರಿ
  4. ಹಾವೇರಿ | 3,225 ದರ ನಿಗದಿಗೆ ರೈತರು,...

ಹಾವೇರಿ | 3,225 ದರ ನಿಗದಿಗೆ ರೈತರು, ಮಾಲಕರು ಸಮ್ಮತಿ: ಮುಂಜಾವ 2 ಗಂಟೆಗೆ ಸಭೆ ಅಂತ್ಯ

ವಾರ್ತಾಭಾರತಿವಾರ್ತಾಭಾರತಿ24 Nov 2026 10:22 AM IST
share
ಹಾವೇರಿ | 3,225 ದರ ನಿಗದಿಗೆ ರೈತರು, ಮಾಲಕರು ಸಮ್ಮತಿ: ಮುಂಜಾವ 2 ಗಂಟೆಗೆ ಸಭೆ ಅಂತ್ಯ

ಹಾವೇರಿ: ಕಬ್ಬಿನ ದರ ನಿಗದಿ ವಿಚಾರವಾಗಿ ಹಾವೇರಿಯಲ್ಲಿ ರೈತರು ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ನೇತೃತ್ವದಲ್ಲಿ ನಡೆದ ಸುದೀರ್ಘ 14 ಗಂಟೆಗಳ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ 3,225 ದರ ನಿಗದಿಪಡಿಸಲಾಗಿದೆ. ಇದಕ್ಕೆ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲಕರು ಒಪ್ಪುವುದರೊಂದಿಗೆ ಮಂಗಳವಾರ ನಸುಕಿನ ಜಾವ 2 ಗಂಟೆಗೆ ಸಭೆ ಅಂತ್ಯಗೊಂಡಿತು.

ಹಾವೇರಿ ನಗರದ ದೇವಗಿರಿ ಸಮೀಪದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ, ಎಸ್ಪಿ ಯಶೋಧಾ ವಂಟಗೋಡಿ ನೇತೃತ್ವದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲಕರ ಸಭೆ ಆರಂಭಗೊಂಡಿತ್ತು. ಸತತ 14 ಗಂಟೆಗಳ ಹಗ್ಗಜಗ್ಗಾಟದ ಬಳಿಕ ಮಂಗಳವಾರ ನಸುಕಿನ ಜಾವ 2 ಗಂಟೆಗೆ ಸಭೆ ಅಂತ್ಯಗೊಂಡಿತು. ಸುರ್ಧಿಘ ಸಭೆಯಲ್ಲಿ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲಕರ ನಡುವೆ ಹಲವು ಸುತ್ತಿನ ಚರ್ಚೆ, ಮಾತುಕತೆ ನಡೆದ ಬಳಿಕ ಅಂತಿಮವಾಗಿ ದರ ಒಪ್ಪಂದಕ್ಕೆ ಬರಲಾಯಿತು.

3,600 ರೂ.ಗೆ ರೈತರ ಪಟ್ಟು, 3,100 ನೀಡುವುದಾಗಿ ಮಾಲಕರ ಹಠ

ಸಭೆಯ ಆರಂಭದಲ್ಲಿ ಪ್ರತಿ ಟನ್ ಕಬ್ಬಿಗೆ 3,600 ರೂ. ನೀಡಬೇಕೆಂದು ರೈತರು ಪಟ್ಟು ಹಿಡಿದಿದ್ದರು. ಕನಿಷ್ಠ 3,300 ರೂ. ಆದರೂ ದರ ನೀಡಲೇಬೇಕೆಂದು ರೈತ ಮುಖಂಡರು ಆಗ್ರಹಿಸಿದ್ದರು. ಆದರೆ, 3,100 ರೂ.ಗಿಂತ ಹೆಚ್ಚಿನ ದರ ನೀಡಲು ಸಾಧ್ಯವಿಲ್ಲ ಎಂದು ಕಾರ್ಖಾನೆ ಮಾಲಕರು ವಾದಿಸಿದ್ದರು.

ತಮ್ಮ ಬೇಡಿಕೆಯಷ್ಟು ದರ ನೀಡಲು ಸಕ್ಕರೆ ಕಾರ್ಖಾನೆ ಮಾಲಕರು ಒಪ್ಪದಿದ್ದರಿಂದ, ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ದರು. ಸಚಿವ, ಜಿಲ್ಲಾಧಿಕಾರಿ, ಕಾರ್ಖಾನೆ ಮಾಲಕರು ಕಚೇರಿಯಿಂದ ಹೊರಗೆ ಹೋಗದಂತೆ ರೈತರು ತಡೆದಿದ್ದರು. ರಾತ್ರಿಯವರೆಗೂ ರೈತರ ಆಕ್ರೋಶ ಮುಂದುವರಿಯಿತು. ಜಿಲ್ಲಾಧಿಕಾರಿ ಕಚೇರಿಯ ಬಾಗಿಲಿನಲ್ಲಿ ಹಾಗೂ ರಸ್ತೆಯಲ್ಲಿ ರೈತರು ಮಲಗಿದ್ದರು. ಇದರಿಂದ 14 ಗಂಟೆಗಳ ಕಾಲ ಸಚಿವ, ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಮಾಕಕರು ಕಚೇರಿಯೊಳಗೆ ಉಳಿಯವಂತಾಗಿತ್ತು.

ರೈತ ಮುಖಂಡ ಚನ್ನಪ್ಪ ಪೂಜಾರಿ ಸೇರಿದಂತೆ 30ಕ್ಕೂ ಹೆಚ್ಚು ರೈತ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. ಸಭೆ ಮುಗಿಯುವವರೆಗೂ ಯಾರೂ ಹೊರಹೋಗದಂತೆ ರೈತರು ಬಿಗಿ ಪ್ರತಿಭಟನೆ ನಡೆಸಿದರು. ಸಚಿವರು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಕಾರ್ಖಾನೆ ಮಾಲಕರನ್ನು ರೈತರು ಸಭೆಯಲ್ಲೇ ತಡೆದಿದ್ದರು. ಜಿಲ್ಲಾಧಿಕಾರಿ ಕಚೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಮುಳ್ಳಿನ ಬೇಲಿ ಹಾಕಿ ಬಂದ್ ಮಾಡಲಾಗಿತ್ತು. ಸತತ 14 ಗಂಟೆಗಳ ಮಾತುಕತೆ, ರೈತರ ಪಟ್ಟು ಹಾಗೂ ಕಾರ್ಖಾನೆ ಮಾಲಕರ ಹಠದ ನಡುವೆ ಕೊನೆಗೂ ಕಬ್ಬಿನ ದರ ಅಂತಿಮಗೊಂಡಿತು. ಮುಂಜಾವ 2 ಗಂಟೆ ಸುಮಾರಿಗೆ ಪ್ರತಿ ಟನ್ ಕಬ್ಬಿಗೆ 3,225 ರೂ. ದರ ನೀಡಲು ಒಪ್ಪಂದ ಮಾಡಿಕೊಳ್ಳಲಾಯಿತು. ಇದರ ಬೆನ್ನಲ್ಲೇ ರೈತರು ಪ್ರತಿಭಟನೆ ಅಂತ್ಯಗೊಳಿಸಿದರು. ನಂತರ ಎಲ್ಲರೂ ಕಚೇರಿಯಿಂದ ಹೊರಟರು.

Tags

HaveriFarmersMeeting
share
ವಾರ್ತಾಭಾರತಿ
ವಾರ್ತಾಭಾರತಿ
Next Story
X