ಹಾವೇರಿ: ಅನೈತಿಕ ಸಂಬಂಧ ಶಂಕೆ; ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಹತ್ಯೆ

ಹಾವೇರಿ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಕೊಲೆ ಮಾಡಿರುವ ಘಟನೆ ಹಾನಗಲ್ಲ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಪ್ರಕಾಶ ಓಲೇಕಾರ (48) ಹತ್ಯೆಯಾದ ವ್ಯಕ್ತಿ. ಈತನಿಗೆ ಬಸವರಾಜ ಓಲೇಕಾರ ಎಂಬವರ ಪತ್ನಿಯೊಂದಿಗೆ ಅಕ್ರಮ ಸಂಬಂಧ ಇದೆ ಎಂಬ ಅನುಮಾನದಲ್ಲಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
Next Story