Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾವೇರಿ
  4. ಹಾವೇರಿ ವಿವಿ ಹಾಸ್ಟೆಲ್‌ನಲ್ಲಿ...

ಹಾವೇರಿ ವಿವಿ ಹಾಸ್ಟೆಲ್‌ನಲ್ಲಿ ಅಪರಿಚಿತನಿಂದ ಅನುಚಿತ ವರ್ತನೆ ಆರೋಪ; ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 Nov 2026 11:40 PM IST
share
ಹಾವೇರಿ ವಿವಿ ಹಾಸ್ಟೆಲ್‌ನಲ್ಲಿ ಅಪರಿಚಿತನಿಂದ ಅನುಚಿತ ವರ್ತನೆ ಆರೋಪ; ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ಹುಬ್ಬಳ್ಳಿ: ಹಾವೇರಿ ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ನೇತೃತ್ವದಲ್ಲಿ ವಿದ್ಯಾರ್ಥಿನಿಯರು ರವಿವಾರ ಹಾಸ್ಟೆಲ್ ಎದುರು ಪ್ರತಿಭಟನೆ ನಡೆಸಿದರು.

ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಅಪರಿಚಿತ ವ್ಯಕ್ತಿಯ ವರ್ತನೆಯಿಂದ ಭಯಭೀತರಾದ ವಿದ್ಯಾರ್ಥಿನಿಯರು ಎಸ್‌ಎಫ್‌ಐ ಸಂಘಟನೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಎಸ್‌ಎಫ್‌ಐ ಕಾರ್ಯಕರ್ತರು 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಡೀ ರಾತ್ರಿ ನಿದ್ದೆ ಮಾಡದ ವಿದ್ಯಾರ್ಥಿನಿಯರು ರವಿವಾರ ಮುಂಜಾನೆಯಿಂದಲೇ ಪ್ರತಿಭಟನೆ ಆರಂಭಿಸಿ, ಹಾಸ್ಟೆಲ್‌ಗೆ ಸೂಕ್ತ ಭದ್ರತೆ ಒದಗಿಸುವಂತೆ ಒತ್ತಾಯಿಸಿದರು.

ರವಿವಾರ ಬೆಳಗ್ಗೆ ಸುಮಾರು 7 ಗಂಟೆಗೆ ವಿವಿ ಕ್ಯಾಂಪಸ್ ಹಾಸ್ಟೆಲ್ ಬಳಿ ಹಾಗೂ ನಂತರ ಸುಮಾರು 9 ಗಂಟೆಗೆ ಶ್ರೀಕಂಠಪ್ಪ ಬಡಾವಣೆಯ ಬಿಸಿಎಂ ಹಾಸ್ಟೆಲ್ ಬಳಿಯೂ ಅದೇ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾನೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಎರಡೂ ಹಾಸ್ಟೆಲ್‌ಗಳ ವಿದ್ಯಾರ್ಥಿನಿಯರು ಭಯಭೀತರಾಗಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದರು. ಮಧ್ಯಾಹ್ನದ ವೇಳೆಗೆ ಪೊಲೀಸ್ ಅಧಿಕಾರಿಗಳು ಹಾಗೂ ಬಿಸಿಎಂ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಚರ್ಚಿಸಿ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಹಾಸ್ಟೆಲ್ ಹಾಗೂ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳಿಲ್ಲ, ಸಿಸಿ ಕ್ಯಾಮರಾಗಳಿಲ್ಲ, ರಾತ್ರಿ ಕಾವಲುಗಾರರಿಲ್ಲ, ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ಇಲ್ಲ ಎಂದು ಗಂಭೀರ ಆರೋಪ ಮಾಡಿದರು.

ವಿದ್ಯಾರ್ಥಿನಿಯರಿಗೆ ಕಿರಿಕಿರಿ ಉಂಟುಮಾಡಿದ ಅಪರಿಚಿತ ವ್ಯಕ್ತಿಯ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಹಾಸ್ಟೆಲ್ ಎದುರು ಹೈಮಾಸ್ಟ್ ಲೈಟ್, ಸಿಸಿ ಕ್ಯಾಮರಾ, ರಾತ್ರಿ ಕಾವಲುಗಾರರನ್ನು ಒದಗಿಸಬೇಕು ಎಂದು ಎಸ್‌ಎಫ್‌ಐ ವಿವಿ ಘಟಕದ ಉಪಾಧ್ಯಕ್ಷ ಬಸವರಾಜ ಎಸ್. ಆಗ್ರಹಿಸಿದರು.

ವಿದ್ಯಾರ್ಥಿನಿಯರ ಸುರಕ್ಷತೆಯಲ್ಲಿ ನಿರ್ಲಕ್ಷ್ಯ ಸಲ್ಲದು. ಹಾಸ್ಟೆಲ್‌ನಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಬೇಕು ಎಂದು ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಚೈತ್ರಾ ಕೊರವರ ಒತ್ತಾಯಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಇಲಾಖೆಯ ಸಿಪಿಐ ಸಿದ್ಧರೂಢ ಬಡಿಗೇರ ಅವರು ಪರಿಶೀಲನೆ ನಡೆಸಿ, ಪೊಲೀಸರ ತಂಡ ರಚಿಸಿ ಕೂಡಲೇ ಆರೋಪಿಯನ್ನು ಬಂಧಿಸುವುದಾಗಿ ತಿಳಿಸಿದರು. ರಾತ್ರಿ ಹೊತ್ತು ಇಬ್ಬರು ಬೀಟ್ ಸಿಬ್ಬಂದಿಯನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದರು.

ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ಆನಂದ್ ಭೇಟಿ ನೀಡಿ, ವಿದ್ಯಾರ್ಥಿನಿಯರೊಂದಿಗೆ ಚರ್ಚಿಸಿದರು. ಇಲಾಖೆಯ ವತಿಯಿಂದ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ಹಾಗೂ ಸಿಸಿ ಕ್ಯಾಮರಾ, ಲೈಟ್ ವ್ಯವಸ್ಥೆ, ರಾತ್ರಿ ಕಾವಲುಗಾರರ ನೇಮಕ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಪರಿಮಳ ಜೈನ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಧೈರ್ಯ ತುಂಬಿದರು.

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ವಿವಿ ಘಟಕದ ಅಧ್ಯಕ್ಷೆ ಪೂಜಾ ಬಾರ್ಕಿ, ಹಾಸ್ಟೆಲ್ ಘಟಕದ ಅಧ್ಯಕ್ಷೆ ನಂದಿನಿ ಕೆ., ಕಾರ್ಯದರ್ಶಿ ವಿನೋದ ಪಿ., ಉಪಾಧ್ಯಕ್ಷರಾದ ನಾಗರತ್ನ ಕೆ., ವಿದ್ಯಾಶ್ರೀ ಎಂ., ಅಕ್ಷತಾ ಎಂ., ಚೈತ್ರಾ ಎಸ್., ಸಹ ಕಾರ್ಯದರ್ಶಿಗಳಾದ ನಿಂಗಮ್ಮ ಕೆ., ಅನನ್ಯ ವೈ., ಸಂಜನಾ ಜಿ., ವೀಣಾ ಆರ್., ಮುಖಂಡರಾದ ಪೂಜಾ ಎಸ್., ಈಶ್ವರಿ ಡಿ. ಮತ್ತಿತರ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಬೇಕು. ನಿರ್ಲಕ್ಷ್ಯ ತೋರಿದರೆ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು.

-ಅರುಣ್ ಕುಮಾರ್ ನಗವತ, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ

Tags

Haveri University
share
ವಾರ್ತಾಭಾರತಿ
ವಾರ್ತಾಭಾರತಿ
Next Story
X