ಶಿಗ್ಗಾಂವಿ: ಆಟೊ ರಿಕ್ಷಾ ಪಲ್ಟಿಯಾಗಿ ಮಹಿಳೆ ಮೃತ್ಯು, ಆರು ಮಂದಿಗೆ ಗಾಯ

ಹಾವೇರಿ: ಆಟೊ ರಿಕ್ಷಾ ಪಲ್ಟಿಯಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಶಿಗ್ಗಾಂವಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರ ರಾಜಸ್ಥಾನ ಡಾಬಾ ಬಳಿ ಶುಕ್ರವಾರ ನಡೆದಿದೆ.
ಸರೋಜಾ ಕಾಮನಹಳ್ಳಿ (35) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅಲ್ಲದೆ, ಘಟನೆಯಲ್ಲಿ ಆರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಸರೋಜಾ ಅವರು ಬಂಕಾಪೂರ ಶಾಹೀನ್ ಗಾರ್ಮೆಂಟ್ಸ್‌ನಲ್ಲಿ ಕೆಲಸಕ್ಕೆ ಹೋಗಿ ಮರಳಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಾಳುಗಳನ್ನು ಶಿಗ್ಗಾಂವಿಯ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಶಿಗ್ಗಾಂವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ತಾಲೂಕಿನ ಆಸ್ಪತ್ರೆ ಅಧಿಕಾರಿಗಳ ಜೊತೆ ಮಾತನಾಡಿದ್ದು, ಗಂಭೀರ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕ್ರಿಮ್ಸ್‌ಗೆ ತಕ್ಷಣ ರವಾನಿಸಲು ಸೂಚಿಸಿದ್ದೇನೆ. ಈ ಘಟನೆ ಹೇಗೆ ಸಂಭವಿಸಿದೆ ಎನ್ನುವುದರ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲೂ ಸೂಚನೆ ನೀಡಿದ್ದೇನೆ.
ಯಾಸೀರ್ ಅಹ್ಮದ್ ಖಾನ್ ಪಠಾಣ್, ಶಾಸಕ
Next Story





